AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆಗೆ ಕಾರಣ ತಿಳಿಸಿದ ಪರಮೇಶ್ವರ್​

ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಮಧ್ಯಾಹ್ನ ಎಂಸಿಎ ವಿದ್ಯಾರ್ಥಿನಿ ನೇಹಾ ಎಂಬುವರನ್ನು ಫಯಾಜ್​ ಕೊಲೆ ಮಾಡಿದ್ದನು. ಕೊಲೆ ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸರು ಆರೋಪಿ ಫಯಾಜನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆಗೆ ಕಾರಣ ತಿಳಿಸಿದ ಪರಮೇಶ್ವರ್​
ಕೊಲೆಯಾದ ನೇಹಾ, ಜಿ ಪರಮೇಶ್ವರ್​
ಮಹೇಶ್ ಇ, ಭೂಮನಹಳ್ಳಿ
| Updated By: ವಿವೇಕ ಬಿರಾದಾರ|

Updated on:Apr 19, 2024 | 11:04 AM

Share

ತುಮಕೂರು, ಏಪ್ರಿಲ್​ 19: ನಗರದ ಬಿವಿಬಿ ಇಂಜಿನಿಯರ್​​ ಕಾಲೇಜು (BVB Engineering College) ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ (Student Neha) ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್​ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್​​ ಕೊಲೆ ಮಾಡಿದ್ದಾನೆ ಎಂದು ಗೃಹ ಸಚಿವ ಜಿ ಪರಮೇಶ್ವರ (G Parameshwara) ಹೇಳಿದರು. ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಘಟನೆ ನಡೆದ ವೇಳೆ ಮಗಳ ಜೊತೆ ಇದ್ದ, ತಾಯಿ ಮೇಲೂ ಹಲ್ಲೆ ಮಾಡಲಾಗಿದೆ, ಆದರೆ ನೇಹಾ ತಾಯಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು.

ಇದರಲ್ಲಿ ಲವ್ ಜಿಹಾದ್ ಕಂಡು ಬಂದಿಲ್ಲ. ನನ್ನನ್ನು ಬಿಟ್ಟು ಬೇರೆಯವನ್ನು ಮದುವೆ ಮಾಡಿಕೊಳ್ಳುತ್ತೀಯಾ ಅಂತ ಕೂಪದಲ್ಲಿ ಕೊಲೆ ಮಾಡಿದ್ದಾನೆ. ಇಂಥಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದರು.

ಜೈ ಶ್ರೀರಾಮ್​ ಎಂದು ಕೂಗಿದ್ದಕ್ಕೆ ಯುವಕರ ಮೇಲೆ ಹಲ್ಲೆ ಮಾಡಿದ್ದು ದುರದೃಷ್ಟಕರ. ಕಾನೂನಿನ ವಿರುದ್ಧವಾಗಿ ನಡೆದುಕೊಂಡರೆ ಯಾರನ್ನೂ ರಕ್ಷಣೆ ಮಾಡಲ್ಲ. ರಾಜ್ಯದ ಜನತೆಗೆ ಗೃಹ ಸಚಿವನಾಗಿ ಭರವಸೆ ಕೊಡಲು ಬಯಸುತ್ತೇನೆ. ರಾಮನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗುವುದು ಸಹಜ. ಅದಕ್ಕೆ ಇನ್ನೊಬ್ಬರು ಬೇರೆ ಘೋಷಣೆ ಕೂಗಿದ್ದಾರೆ. ಯಾರನ್ನೂ ರಕ್ಷಣೆ ಮಾಡುವುದಾಗಲಿ, ಓಲೈಸುವುದಾಗಲಿ ಮಾಡಲ್ಲ. ಯಾವುದೇ ಮುಲಾಜಿಲ್ಲದೆ ಕಾನೂನಡಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಕೊಲೆಯಾದ ನೇಹಾ, ನೇಹಾ ತಂದೆ ನಿರಂಜನ ಹಿರೇಮಠ, ಆರೋಪಿ ಫಯಾಜ್​

ಜೈ ಶ್ರೀರಾಮ ಅಂತ ಕೂಗಿದವರ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸಲಾಗಿದ್ದು, ಆರೋಪಿಗಳ ವಿರುದ್ಧ ವೀಕ್ ಸೆಕ್ಷನ್​ ಹಾಕಲಾಗಿದೆ ಎಂಬ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸೆಕ್ಷನ್​ಗಳನ್ನು ಹಾಕಲಾಗುವುದು. ಪ್ರಾರಂಭದಲ್ಲಿ ಪ್ರಕರಣ ದಾಖಲಿಸಿಕಿಕೊಳ್ಳಲಾಗಿದೆ. ತನಿಖೆ ಹಂತದಲ್ಲಿ ಸಾಕ್ಷಾಧಾರಗಳ ಆಧಾರದ ಮೇಲೆ ಸೆಕ್ಷನ್​ ಹಾಕಲಾಗುತ್ತದೆ. ಈ ಸೆಕ್ಷನ್​ ಹಾಕಿಲ್ಲ, ಆ ಸೆಕ್ಷನ್​ ಹಾಕಿಲ್ಲ ಅನ್ನಲು‌‌ ಆಗಲ್ಲ. ತನಿಖೆಯ ಆಧಾರದ ಮೇಲೆ ಸೆಕ್ಷನ್ ಹಾಕಲಾಗುತ್ತದೆ.

ಇದನ್ನೂ ಓದಿ: ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಕೊಲೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಇಂಥಹ ಘಟನೆ ಮರುಕಳಿಸುತ್ತದೆ ಎಂಬ ಬಿಜೆಪಿ ಆರೋಪ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗಲೂ ಹಲವು ಘಟನೆಗಳು ನಡೆದ ಬಗ್ಗೆ ಮಾಹಿತಿ ಇದೆ. ಆರ್​. ಅಶೋಕ್ ಮತ್ತು ಆರಗ ಜ್ಞಾನೇಂದ್ರ, ಬಸವರಾಜ್​ ಬೊಮ್ಮಾಯಿ ಅವರು ಗೃಹಮಂತ್ರಿ ಇದ್ದಾಗ ಇಂಥಹ ಘಟನೆಗಳು ನಡೆದಿವೆ ಎಂದು ವಾಗ್ದಾಳಿ ಮಾಡಿದರು.

ಇಡೀ ರಾಜ್ಯದಲ್ಲಿ ಶ್ರೀರಾಮನವಮಿ ದಿನ ಎಷ್ಟು ಘಟನೆ ನಡೆದಿವೆ? ಇದೊಂದು ಹೊರತು ಪಡಿಸಿದರೆ ಬೇರೆ ಏನು ನಡೆದಿಲ್ಲ. ಯಾರು ಕಾನೂನು ಬಾಹಿರವಾಗಿ ನಡೆದುಕೊಳ್ಳುತ್ತಾರೆ, ಅವರು ಯಾವುದೇ ಸಮುದಾಯ ಆಗಲಿ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಅವರನ್ನು ಓಲೈಸುವ ಕೆಲಸ ನಾವು ಯಾವತ್ತೂ ಮಾಡುವುದಿಲ್ಲ. ಸಮಾಜವನ್ನು ಶಾಂತಿಯಿಂದ ಇಡಬೇಕು ಅನ್ನುವುದು ನಮ್ಮ ಉದ್ದೇಶ ಎಂದು ಹೇಳಿದರು.

ಆರೋಪಿ ಫಯಾಜ್​​ಗೆ 14 ದಿನಗಳ ನ್ಯಾಯಾಂಗ ಬಂಧನ

ಎಂಸಿಎ ವಿದ್ಯಾರ್ಥಿನಿ ನೇಹಾಳನ್ನು ಕೊಲೆ ಮಾಡಿದ ಆರೋಪಿ ಫಯಾಜ್​​ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Fri, 19 April 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ