ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿಉರಿದ ಕಾರು: ಓರ್ವ ಸಾವು, ಮೂವರು ಗಂಭೀರ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ತಡೆಗೋಡೆಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಸಜೀವ ದಹನವಾಗಿದ್ದಾರೆ. ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಡಿಕ್ಕಿ ಹೊಡೆದ ರಭಸಕ್ಕೆ ಹೊತ್ತಿಉರಿದ ಕಾರು: ಓರ್ವ ಸಾವು, ಮೂವರು ಗಂಭೀರ
ಹೊತ್ತಿಉರಿದ ಕಾರು
Image Credit source: tv9 kannada
Edited By:

Updated on: Apr 01, 2026 | 8:16 PM

ತುಮಕೂರು, ಏಪ್ರಿಲ್​ 01: ಭೀಕರ ಅಪಘಾತಕ್ಕೆ ಕಾರೊಂದು ಹೊತ್ತಿಉರಿದಿದ್ದು, ಓರ್ವ ಸಜೀವದಹನವಾಗಿರುವಂತಹ (death) ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ಕೋರಗೆರೆ ಸೇತುವೆ ಮೇಲೆ ನಡೆದಿದೆ. ಮೃತ ವ್ಯಕ್ತಿ ಗುಬ್ಬಿ ತಾಲೂಕಿನವರು ಎನ್ನಲಾಗುತ್ತಿದೆ. ಘಟನೆಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸದ್ಯ ಗಾಯಾಳನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಳಿಯಾರು ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಡೆದಿದ್ದೇನು?

ನಾಲ್ವರು ಇಂದು ಪಂಚಣಿಯಹಳ್ಳಿ ಹತ್ತಿರದ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದುಕೊಂಡು ವಾಪಸ್​ ಆಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರು ಸೇತುವೆಯ ತಡೆಗೊಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಓರ್ವ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಕಸ್ಮಿಕ ಬೆಂಕಿ: ಕುರಿಗಾಹಿ ಸೇರಿ 45 ಕುರಿಗಳು ಸಜೀವದಹನ

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೊರಾಳ ಗ್ರಾಮದಲ್ಲಿ ತಡರಾತ್ರಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿಗೆ ಕುರಿಗಾಹಿ ಸೇರಿದಂತೆ ಸುಮಾರು 45 ಕುರಿಗಳು ಸಜೀವ ದಹನಗೊಂಡಿರುವಂತಹ ಘಟನೆ ನಡೆದಿದೆ. ಶಂಕರ ಮೇತ್ರ (65) ಮೃತ ವ್ಯಕ್ತಿ. ಪ್ರಾಥಮಿಕ ತನಿಖೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಬೇರೆ ಆಕಸ್ಮಿಕ ಕಾರಣದಿಂದ ಬೆಂಕಿ ತಗುಲಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ತನ್ನದೇ ಟೆಂಪೋದಲ್ಲಿ ಶವವಾಗಿ ಪತ್ತೆಯಾದ ಮಾಲೀಕ: ಸಾವಿನ ಸುತ್ತ ಅನುಮಾನದ ಹುತ್ತ

ಇನ್ನು ಈ ಘಟನೆ ಔರಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಮಾಹಿತಿ ದೊರಯುತ್ತಿದ್ದಂತೆ ಬೀದರ್ ಎಸ್ಪಿ ಪ್ರದೀಪ್ ಗುಂಟೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಘಟನೆಯ ನಿಖರ ಕಾರಣ ಸ್ಪಷ್ಟವಾಗಿಲ್ಲ.

ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಡೆದಿದೆ. ಬೈಕ್‌ನಲ್ಲಿ ಪೊಲೀಸ್ ಠಾಣೆಗೆ ಹೊರಟ್ಟಿದ್ದ ಶ್ರೀನಿವಾಸ್(54) ಮೃತ ವ್ಯಕ್ತಿ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಜೀಪ್ ಚಾಲಕರಾಗಿದ್ದರು. ಚಿಂತಾಮಣಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:58 pm, Wed, 1 April 26

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us