AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆ ಮಂಟಪಕ್ಕೆ ಹೋಗುತ್ತಿದ್ದಾಗ ವರ ಎಸ್ಕೇಪ್: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಪ್ರಿಯಕರ

ಸಾಮಾಜಿಕ ಜಾಲತಾಣಗಳಲ್ಲಿ ಯುವಕ-ಯುವತಿ ಪರಿಚಯವಾಗಿದ್ದು, ಬಳಿಕ ಅದು ಪ್ರೀತಿಗೆ ತಿರುಗಿದೆ. ಪ್ರೀತಿ ಪ್ರೇಮ ಅಂತ ಯುವತಿಯನ್ನು ಕರೆದುಕೊಂಡು ಓಡಾಡಿದ್ದ ಪ್ರಿಯಕರ ಇನ್ನೇನು ಹೋಗಿ ತಾಳಿ ಕಟ್ಟಬೇಕು ಎನ್ನುವಷ್ಟರಲ್ಲೇ ಕಾರು ಇಳಿದು ಪರಾರಿಯಾಗಿದ್ದಾನೆ. ಏನಿದು ಪ್ರಕರಣ? ಎಲ್ಲಿ ನಡೆದಿದೆ? ಎನ್ನುವ ವಿವರ ಈ ಕೆಳಗಿನಂತಿದೆ.

ಮದ್ವೆ ಮಂಟಪಕ್ಕೆ ಹೋಗುತ್ತಿದ್ದಾಗ ವರ ಎಸ್ಕೇಪ್: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಪ್ರಿಯಕರ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on:Nov 08, 2023 | 10:09 AM

ತುಮಕೂರು, (ನವೆಂಬರ್ 08): ಬೆಂಗಳೂರಿನ ನೆಲಗದರನಹಳ್ಳಿ ಹಾಗೂ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ (Social Media) ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ(Love). ಬಳಿಕ ಬೆಂಗಳೂರಿನ (Bengaluru) ನೆಲಗದರನಹಳ್ಳಿ ಮೂಲಕ ಗಜೇಂದ್ರ, ಮದುವೆಯಾಗುವುದಾಗಿ (Marriage)  ಎರಡು ವರ್ಷಗಳಿಂದ ಯುವತಿಯನ್ನು ಕರೆದುಕೊಂಡು ಎಲ್ಲೊಂದರಲ್ಲಿ ಸುತ್ತಾಡಿದ್ದಾನೆ. ಆದ್ರೆ, ಇದೀಗ ಮದುವೆ ಮುಹೂರ್ತ ಸಮೀಪಿಸುತ್ತಿದ್ದಂತೆಯೇ ಗಜೇಂದ್ರ ಎಸ್ಕೇಪ್ ಆಗಿದ್ದಾನೆ. ಹೌದು…ಬೆಂಗಳೂರಿನ ಪಿಣ್ಯಾದ ದುಗ್ಗಾಲಮ್ಮ ದೇವಾಲಯದಲ್ಲಿ ಇಬ್ಬರ ಮದುವೆ ಫಿಕ್ಸ್ ಆಗಿತ್ತು. ಆದ್ರೆ, ಗಜೇಂದ್ರ ಮದುವೆಯಾಗಲು ಹೋಗುತ್ತಿದ್ದಾಗ ಮಾರ್ಗಮಧ್ಯೆಯೇ  ಪರಾರಿಯಾಗಿದ್ದಾನೆ.

ಪೊಲೀಸರ ಮುಂದೆ ಒಪ್ಪಿಕೊಂಡಿದ್ದ ಗಜೇಂದ್ರ

ಈ ಮೊದಲೇ ಇವರಿಬ್ಬರ ಪ್ರೀತಿ ಪೊಲೀಸ್​ ಠಾಣೆ ಮೆಟ್ಟಿಲೇರಿತ್ತು. ಯುವತಿಯನ್ನು ಮದುವೆಯಾಗುವಂತೆ ಗಜೇಂದ್ರನಿಗೆ ಪೊಲೀಸರು ಬುದ್ಧಿ ಹೇಳಿದ್ದರು.ಇದಕ್ಕೆ ಠಾಣೆಯಲ್ಲಿ ಗಜೇಂದ್ರ, ಯುವತಿಯನ್ನು ಮದುವೆಯಾಗುವುದಾಗಿ ಒಪ್ಪಿಕೊಂಡು ಮುಚ್ಚಳಿಕೆ ಪತ್ರವನ್ನೂ ಸಹ ಬರೆದುಕೊಟ್ಟಿದ್ದ. ಆದ್ರೆ, ತುಮಕೂರಿನಿಂದ ಬೆಂಗಳೂರಿನ ಪಿಣ್ಯಾದ ದುಗ್ಗಾಲಮ್ಮ ದೇವಾಲಯ ಬಳಿಗೆ ಮದುವೆಯಾಗಲು ಹೋಗುತ್ತಿದ್ದಾಗ ನೆಲಗದರನಹಳ್ಳಿ ಬಳಿ ಕಾರು ಇಳಿದು ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ: ಅನೈತಿಕ ಸಂಬಂಧ; ಪ್ರೀತಿಸಿ ಮದುವೆಯಾದ ಹೆಂಡತಿಗೆ ಕಟ್ಟಿದ ಚಟ್ಟ, ಏನಿದು ಕಥೆ ಅಂತೀರಾ?ಈ ಸ್ಟೋರಿ ಓದಿ

ಇನ್​ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಪ್ರೀತಿಗೆ ತಿರುಗಿತ್ತು. ಮದುವೆಯಾಗುತ್ತೇನೆ. ನನ್ನ ಪ್ರಾಣ ಎಂದು ಹೋಟೆಲ್ ಲಾಡ್ಜ್ ಗೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದ. ಎರಡೂವರೆ ವರ್ಷಗಳಿಂದ ಪ್ರೀತಿಸಿ ಇದೀಗ ಏಕಾಏಕಿ ಮನೆಯಲ್ಲಿ ಒಪ್ಪುತ್ತಿಲ್ಲ ಬೇಡ ಎಂದು ಕೈಕೊಟ್ಟಿದ್ದಾನೆ ಎಂದು ಯುವತಿ ಅಳಲು ತೋಡಿಕೊಂಡಿದ್ದಾಳೆ. ಈ ಬಗ್ಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಮಹಿಳಾ ಪೊಲೀಸ್ ಠಾಣೆಯವರು ಕರೆಸಿ ಇಬ್ಬರು ಮದುವೆಯಾಗುವಂತೆ ಪರಸ್ಪರ ಒಪ್ಪಿಸಿ ಕಳಿಸಿಕೊಟ್ಟಿದ್ದರು. ಮದುವೆಯಾಗುವುದಾಗಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಕೂಡ ಬರೆಸಿಕೊಟ್ಟಿದ್ದ ಗಜೇಂದ್ರ, ಮದುವೆಯಾಗಲು ಹೋಗುತ್ತಿರುವಾಗ ಮಾರ್ಗ ಮಧ್ಯೆಯೇ ಕಾರು ಇಳಿದು ಪರಾರಿಯಾಗಿದ್ದಾನೆ.

ಯುವತಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರೆ, ಗಜೇಂದ್ರ ಊರಿಗನಲ್ಲಿ ವ್ಯವಸಾಯ ಮಾಡಿಕೊಂಡಿದ್ದ. ಇನ್ನು ಗಜೇಂದ್ರ ಯುವತಿಗೆ ದೂರದ ಸಂಬಂಧಿ ಆಗಿದ್ದಾನೆ. ಇದೀಗ ಯವತಿ ನ್ಯಾಯಕ್ಕಾಗಿ ಕಣ್ಣೀರಿಡುತ್ತಿದ್ದು,ಎರಡೂವರೆ ವರ್ಷಗಳಿಂದ ಮದುವೆಯಾಗುವುದಾಗಿ ನಂಬಿಸಿ ಪ್ರೀತಿಸಿ ಲೈಂಗಿಕವಾಗಿ ಬಳಸಿಕೊಂಡು ಇದೀಗ ಮದುವೆಯಾಗದೆ ಪರಾರಿಯಾಗಿದ್ದಾನೆಂದು ಯುವತಿ ಆರೋಪಿಸಿದ್ದಾಳೆ. ಈ ಬಗ್ಗೆ ಗಜೇಂದ್ರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮತ್ತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:22 am, Wed, 8 November 23

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ