AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಕೇಸ್​​: ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲು

ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್(S. R. Srinivas) ಮೇಲೆ‌ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಕೇಸ್​​: ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲು
ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮೇಲೆ‌ ಎಫ್ಐಆರ್ ದಾಖಲು
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Mar 16, 2024 | 10:56 PM

Share

ತುಮಕೂರು, ಮಾ.16: ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್(S. R. Srinivas) ಮೇಲೆ‌ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಟೆಂಡರ್ ಕಾಮಗಾರಿಯಲ್ಲಿ ಅನ್ಯಾಯ ಖಂಡಿಸಿ, ಕಳೆದ ಗುರುವಾರ ರಾತ್ರಿ PWD ಇಲಾಖೆ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕ ರಾಯಸಂದ್ರ ರವಿಕುಮಾರ್ ಧರಣಿಗೆ ಕುಳಿತಿದ್ದ‌. ಈ ವೇಳೆ ಪ್ರತಿಭಟನಾ ನಿರತರಾಗಿದ್ದ ರಾಯಸಂದ್ರ ರವಿಕುಮಾರ್ ಮೇಲೆ ಶಾಸಕ ಎಸ್ ಆರ್ ಶ್ರೀನಿವಾಸ್ ಹಾಗೂ ಸಹಚರರು ಏಕಾಏಕಿ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದರು.

ಶಾಸಕನ ಮೇಲೆ ಎಫ್​ಐಆರ್​ ದಾಖಲು

ಈ ಹಿನ್ನಲೆ ರಾಯಸಂದ್ರ ರವಿಕುಮಾರ್ ತುಮಕೂರಿನ ತಿಲಕ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇವರು ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ವಿರುದ್ಧ ಇದೀಗ ಎಫ್ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 511, 506,504,143,149, 323,363 ಅಡಿಯಲ್ಲಿ ಎಫ್ಐಆರ್​ ದಾಖಲಿಸಲಾಗಿದ್ದು, ಈ ಕುರಿತು ತಿಲಕ್ ಪಾರ್ಕ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗ: ಯುವತಿಯನ್ನು ಫಾಲೋ ಮಾಡಿದ ಯುವಕ: ಬುದ್ಧಿ ಹೇಳಿದ್ದಕ್ಕೆ ಗ್ರಾಮಕ್ಕೆ ನುಗ್ಗಿ ಹಲ್ಲೆ

UPS ಬ್ಯಾಟರಿ ಸರ್ಕ್ಯೂಟ್ ಆಗಿ ಚಿನ್ನಾಭರಣ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ

ಬೆಂಗಳೂರು: ಜಾಲಹಳ್ಳಿಯ ಚೆಮ್ಮನೂರು ಚಿನ್ನಾಭರಣ ಮಳಿಗೆಯಲ್ಲಿ ಯುಪಿಎಸ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ. ಚಿನ್ನಾಭರಣ ಮಳಿಗೆ ತುಂಬಾ ದಟ್ಟ ಹೊಗೆ ಆವರಿಸಿದ್ದರಿಂದ ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದಾರೆ. ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:52 pm, Sat, 16 March 24

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ