ತುಮಕೂರು, ಮಾ.16: ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್(S. R. Srinivas) ಮೇಲೆ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಟೆಂಡರ್ ಕಾಮಗಾರಿಯಲ್ಲಿ ಅನ್ಯಾಯ ಖಂಡಿಸಿ, ಕಳೆದ ಗುರುವಾರ ರಾತ್ರಿ PWD ಇಲಾಖೆ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕ ರಾಯಸಂದ್ರ ರವಿಕುಮಾರ್ ಧರಣಿಗೆ ಕುಳಿತಿದ್ದ. ಈ ವೇಳೆ ಪ್ರತಿಭಟನಾ ನಿರತರಾಗಿದ್ದ ರಾಯಸಂದ್ರ ರವಿಕುಮಾರ್ ಮೇಲೆ ಶಾಸಕ ಎಸ್ ಆರ್ ಶ್ರೀನಿವಾಸ್ ಹಾಗೂ ಸಹಚರರು ಏಕಾಏಕಿ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದರು.
ಈ ಹಿನ್ನಲೆ ರಾಯಸಂದ್ರ ರವಿಕುಮಾರ್ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇವರು ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ವಿರುದ್ಧ ಇದೀಗ ಎಫ್ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 511, 506,504,143,149, 323,363 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಈ ಕುರಿತು ತಿಲಕ್ ಪಾರ್ಕ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ: ಯುವತಿಯನ್ನು ಫಾಲೋ ಮಾಡಿದ ಯುವಕ: ಬುದ್ಧಿ ಹೇಳಿದ್ದಕ್ಕೆ ಗ್ರಾಮಕ್ಕೆ ನುಗ್ಗಿ ಹಲ್ಲೆ
UPS ಬ್ಯಾಟರಿ ಸರ್ಕ್ಯೂಟ್ ಆಗಿ ಚಿನ್ನಾಭರಣ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ
ಬೆಂಗಳೂರು: ಜಾಲಹಳ್ಳಿಯ ಚೆಮ್ಮನೂರು ಚಿನ್ನಾಭರಣ ಮಳಿಗೆಯಲ್ಲಿ ಯುಪಿಎಸ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ. ಚಿನ್ನಾಭರಣ ಮಳಿಗೆ ತುಂಬಾ ದಟ್ಟ ಹೊಗೆ ಆವರಿಸಿದ್ದರಿಂದ ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದಾರೆ. ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:52 pm, Sat, 16 March 24