ಜಾತಿಗಣತಿ ವರದಿ ಸ್ವೀಕಾರ: ಈ ಬಗ್ಗೆ ತುಮಕೂರು ಸಿದ್ಧಗಂಗಾಶ್ರೀ ಹೇಳಿದ್ದಿಷ್ಟು

ರಾಜ್ಯ ಕಾಂಗ್ರೆಸ್ ಸರ್ಕಾರ ಜಾತಿಗಣತಿ ವರದಿ ಸ್ವೀಕರಿಸಿದ ವಿಚಾರವಾಗಿ ತುಮಕೂರಿನ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರದಲ್ಲಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತೆ ಗೊತ್ತಿಲ್ಲ. ಇದಕ್ಕೆ ಯಾರೂ ವಿರೋಧ ಮಾಡಲು ಸಾಧ್ಯವಿಲ್ಲ. ಯಾಕಂದ್ರೆ ಜಾತಿ ಆಧಾರದ ಮೇಲೆ ಸವಲತ್ತುಗಳನ್ನು ಕೊಡಬೇಕಾಗುತ್ತೆ. ಎಲ್ಲರಿಗೂ ಸೌಲಭ್ಯ ಲಭ್ಯವಾಗುವ ರೀತಿಯಲ್ಲಿ ಮಾಡಿದರೆ ಉಪಕಾರವಾಗುತ್ತೆ ಎಂದು ಹೇಳಿದ್ದಾರೆ.

ಜಾತಿಗಣತಿ ವರದಿ ಸ್ವೀಕಾರ: ಈ ಬಗ್ಗೆ ತುಮಕೂರು ಸಿದ್ಧಗಂಗಾಶ್ರೀ ಹೇಳಿದ್ದಿಷ್ಟು
ಸಿದ್ದಲಿಂಗ ಸ್ವಾಮೀಜಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Feb 29, 2024 | 5:53 PM

ತುಮಕೂರು, ಫೆಬ್ರವರಿ 29: ಜಾತಿಗಣತಿ ವರದಿ ಸಲ್ಲಿಕೆಗೆ ತೀವ್ರ ವಿರೋಧವ್ಯಕ್ತವಾಗಿತ್ತು. ಅವೈಜ್ಞಾನಿಕ ವರದಿ ಎಂದು ಒಕ್ಕಲಿಗ, ವೀರಶೈವಲಿಂಗಾತ ಸಮುದಾಯ ವಿರೋಧ ಮಾಡಿತ್ತು. ಇದೀಗ ವಿರೋಧದ ನಡುವೆಯೇ ಜಾತಿಗಣತಿ ವರದಿ ಸಿಎಂ ಸಿದ್ದರಾಮಯ್ಯ ಕೈಸೇರಿದೆ. ಸದ್ಯ ಈ ವಿಚಾರವಾಗಿ ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ (Siddaganga Shree) ಪ್ರತಿಕ್ರಿಯೆ ನೀಡಿದ್ದು, ಈ ವಿಚಾರದಲ್ಲಿ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳುತ್ತೆ ಗೊತ್ತಿಲ್ಲ. ಇದಕ್ಕೆ ಯಾರೂ ವಿರೋಧ ಮಾಡಲು ಸಾಧ್ಯವಿಲ್ಲ. ಯಾಕಂದ್ರೆ ಜಾತಿ ಆಧಾರದ ಮೇಲೆ ಸವಲತ್ತುಗಳನ್ನು ಕೊಡಬೇಕಾಗುತ್ತೆ. ವ್ಯಾಪಕವಾಗಿ ಎಲ್ಲರನ್ನೂ ಸಂದರ್ಶನ ಮಾಡಿಲ್ಲ ಎಂಬ ಕೂಗು ಕೇಳಿಬರ್ತಿದೆ. ಎಲ್ಲರನ್ನೂ ಕೇಳಿ, ಪ್ರತಿಯೊಬ್ಬರನ್ನು ವಿಚಾರಿಸಿ ವರದಿ ಮಾಡಿದರೆ ಸೂಕ್ತ ಎಂದು ಹೇಳಿದ್ದಾರೆ.

ಎಲ್ಲರಿಗೂ ಸೌಲಭ್ಯ ಲಭ್ಯವಾಗುವ ರೀತಿಯಲ್ಲಿ ಮಾಡಿದರೆ ಉಪಕಾರವಾಗುತ್ತೆ. ನಾನ್ಯಾವ ಜಾತಿ, ಏನು ಅಂತಾ ಯಾರೂ, ಯಾವ ಮಾಹಿತಿಯೂ ಕೇಳಿಲ್ಲ. ಎಲ್ಲರ ಬಳಿಯೂ ಹೋಗಿದ್ವಿ ಅಂತಾ ಹೇಳ್ತಾರಲ್ವಾ? ನನ್ನ ಬಳಿಯೇ ಬಂದಿಲ್ಲ. ಆ ಮೂಲಕ ಪರೋಕ್ಷವಾಗಿ ವರದಿ ವೈಜ್ಞಾನಿಕವಾಗಿ ಆಗಿಲ್ಲ ಎಂದಿದ್ದಾರೆ.

ಇದನ್ನೂ ಓದಿ: Caste Census Report: ಸಿಎಂ ಸಿದ್ದರಾಮಯ್ಯಗೆ ಜಾತಿಗಣತಿ ವರದಿ ಸಲ್ಲಿಸಿದ ಜಯಪ್ರಕಾಶ್ ಹೆಗ್ಡೆ, ವರದಿಯಲ್ಲಿ ಏನೇನಿದೆ?

ಪ್ರತಿಯೊಬ್ಬರನ್ನೂ ಕೇಳ್ತಾರಾ? ಅಥವಾ ಮುಖಂಡರನ್ನು ಮಾತ್ರ ಕೇಳ್ತಾರಾ? ಏನು ಅಂತಾ ಗೊತ್ತಿಲ್ಲ ಹಾಗಾಗಿ ನಾನು ಅದರ ಬಗ್ಗೆ ಮಾತನಾಡುವುದಕ್ಕೆ ಹೋಗಲ್ಲ. ಎಲ್ಲರನ್ನೂ ಒಳಗೊಂಡಂತ ವರದಿ ಸ್ವೀಕಾರ ಆಗಲಿ. ಆಯಾ ಜಾತಿಯ ಜನಸಂಖ್ಯೆ ಆಧಾರದ ಮೇಲೆ ಸೌಲಭ್ಯಗಳು ವಿತರಣೆ ಆಗಲಿ ಎಂದರು.

ಜಾತಿಗಣತಿಯಲ್ಲಿ ಕೆಲ ದೋಷಗಳಿವೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಕಾಂಗ್ರೆಸ್ ಸರ್ಕಾರ ಜಾತಿಗಣತಿ ವರದಿ ಸ್ವೀಕರಿಸಿದ ವಿಚಾರವಾಗಿ ರಾಮನಗರ ಜಿಲ್ಲೆ ಮಾಗಡಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪ್ರತಿಕ್ರಿಯಿಸಿದ್ದು, ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಎಲ್ಲಾ ಸಮುದಾಯಕ್ಕೂ ಸಮಾನವಾದ ಅವಕಾಶಗಳು ಸಿಗಬೇಕು. ಆದರೆ ಸದ್ಯ ಸ್ವೀಕರಿಸಲಾದ ಜಾತಿಗಣತಿಯಲ್ಲಿ ಕೆಲ ದೋಷಗಳಿವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತಿಗಣತಿ ವರದಿ ಸಲ್ಲಿಕೆ; ಜನಸಂಖ್ಯೆ ಆಧಾರದ ಮೇಲೆ ಹಕ್ಕು ಹಂಚಲು ಕಾಂಗ್ರೆಸ್ ನಾಯಕರ ತಕರಾರಿಲ್ಲ: ಪ್ರಿಯಾಂಕ್ ಖರ್ಗೆ

ನಾಲ್ಕು ಜನರ ಮನೆಗೆ ಹೋಗಿದ್ದರೆ ಇನ್ನೂ ಕೆಲವರ ಮನೆಗೆ ಹೋಗಿಲ್ಲ. ನಮ್ಮ ಸಂಬಂಧಿಕರ ಹಲವು ಮನೆಗಳಿಗೆ ಹೋಗಿ ಮಾಹಿತಿ ಸಂಗ್ರಹಿಸಿಲ್ಲ. ಹೀಗಾಗಿ ಜಾತಿಗಣತಿಯಲ್ಲಿ ಕೆಲವು ಗೊಂದಲಗಳಿವೆ. ವೀರಶೈವ ಲಿಂಗಾಯತ ಸಮುದಾಯದಲ್ಲಿ ಅನೇಕ ಉಪಪಂಗಡಗಳಿವೆ‌. 103 ಉಪ ಪಂಗಡಗಳಿರುವುದರಿಂದ ಅಧ್ಯಯನ ಮಾಡಬೇಕು. ವೈಜ್ಞಾನಿಕ ವರದಿ ಮಾಡಿ ಬಳಿಕ ಸ್ವೀಕರಿಸಬೇಕಿತ್ತು. ಇದರಲ್ಲಿ ನಾವು ರಾಜಕೀಯ ಮಾಡುವುದಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು