ತುಮಕೂರು: ಎಲೆರಾಂಪುರ ಗ್ರಾಮ ಪಂಚಾಯಿತಿಗೆ ಕೇಂದ್ರ ಸರ್ಕಾರದ ಉತ್ತಮ ಪಂಚಾಯಿತಿ ಪುರಸ್ಕಾರ

ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಲ್ಲೂಕಿನ ಡಿ.ನಾಗೇನಹಳ್ಳಿ ಗ್ರಾಮವನ್ನು 2010 ರಲ್ಲಿ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ಕೇಂದ್ರ ಸರ್ಕಾರದ ನಿಕ್ರಾ ಯೋಜನೆಯಡಿ ಅಂತರ್ಜಲ ವೃದ್ಧಿಗೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಇದರ ಫಲವಾಗಿ ಈ ಭಾಗದಲ್ಲಿ ಅಂತರ್ಜಲ ಮಟ್ಟ ವೃದ್ಧಿಗೊಂಡಿದೆ.

ತುಮಕೂರು: ಎಲೆರಾಂಪುರ ಗ್ರಾಮ ಪಂಚಾಯಿತಿಗೆ ಕೇಂದ್ರ ಸರ್ಕಾರದ ಉತ್ತಮ ಪಂಚಾಯಿತಿ ಪುರಸ್ಕಾರ
ಅಂತರ್ಜಲ ಮಟ್ಟ ವೃದ್ಧಿ
Follow us
TV9 Web
| Updated By: preethi shettigar

Updated on:Jan 12, 2022 | 10:02 AM

ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ ವ್ಯಾಪ್ತಿಯ ಎಲೆರಾಂಪುರ ಗ್ರಾಮದಲ್ಲಿ ಒಂದು ವರ್ಷದ ಹಿಂದೆ ಬರಡು ನೆಲ ಎಲ್ಲೇಡೆ ಕಾಣುತ್ತಿತ್ತು. ಇದೇ ಕಾರಣಕ್ಕೆ ಯುವಕರು ಉದ್ಯೋಗ ಅರಸಿ ಪಟ್ಟಣಗಳಿಗೆ ಗುಳ್ಳೇ ಹೋಗುತ್ತಿದ್ದ ಪರಿಸ್ಥಿತಿ ಇತ್ತು. ಆದರಿಗ ಆ ಗ್ರಾಮದ ಚಿತ್ರಣ ಸಂಪೂರ್ಣ ಬದಲಾಗಿದೆ. ಕೇಂದ್ರೀಯ ಕೃಷಿ ಇಲಾಖೆಯ ಅಧಿಕಾರಿಗಳ ಪ್ರಯತ್ನ, ರೈತರ (Farmers) ಸಹಕಾರದಿಂದ ಗ್ರಾಮದಲ್ಲಿ ಜಲ ಕಾಂತ್ರಿಯಾಗಿದೆ. ಈ ಗ್ರಾಮದಲ್ಲಿ ಬರೋಬ್ಬರಿ 250 ಎಕರೆ ಪ್ರದೇಶದಕ್ಕೆ ನೀರಾವರಿ ಸೌಲಭ್ಯ ಸಿಗುವಂತಾಗಿದೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ ವ್ಯಾಪ್ತಿಯ ಎಲೆರಾಂಪುರ ಗ್ರಾಮ ಪಂಚಾಯಿತಿಗೆ ಕೇಂದ್ರ ಸರ್ಕಾರದ ಉತ್ತಮ ಪಂಚಾಯಿತಿ ಪುರಸ್ಕಾರ ಲಭಿಸಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಲ್ಲೂಕಿನ ಡಿ.ನಾಗೇನಹಳ್ಳಿ ಗ್ರಾಮವನ್ನು 2010 ರಲ್ಲಿ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ಕೇಂದ್ರ ಸರ್ಕಾರದ ನಿಕ್ರಾ ಯೋಜನೆಯಡಿ ಅಂತರ್ಜಲ ವೃದ್ಧಿಗೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಇದರ ಫಲವಾಗಿ ಈ ಭಾಗದಲ್ಲಿ ಅಂತರ್ಜಲ ಮಟ್ಟ ವೃದ್ಧಿಗೊಂಡಿದೆ. ಈ ಕಾರಣದಿಂದಾಗಿ ಗ್ರಾಮಕ್ಕೆ ರಾಷ್ಟ್ರೀಯ ನೀರು ಅಭಿವೃದ್ಧಿ ಪ್ರಶಸ್ತಿ ಲಭಿಸಿದೆ.

ಗ್ರಾಮದ ಸುಮಾರು 400 ಹೆಕ್ಟೇರ್ ಭೂ ಪ್ರದೇಶದಲ್ಲಿ 85 ಕೃಷಿ ಹೊಂಡ, 5 ಚೆಕ್ ಡ್ಯಾಂ, 8 ಹಳೇ ಚೆಕ್‌ ಡ್ಯಾಂ ಅಭಿವೃದ್ಧಿ ಸೇರಿದಂತೆ ಕರೆ ಅಭಿವೃದ್ಧಿ ಹಾಗೂ ತಿರುವುಗಾಲುವೆ ಮೂಲಕ ಸಂಗ್ರಹಣೆ ನೀರು ಮಾಡಲಾಗಿದೆ. ಬರನಿರೋಧಕ ಒಣಬೇಸಾಯ, ತೋಟಗಾರಿಕೆಗೆ ಒತ್ತು ನೀಡಲಾಗಿದೆ. ರಾಗಿ, ಒಣ ಭತ್ತ, ತೊಗರಿ ಹೀಗೆ ಕಡಿಮೆ ನೀರು ಬಳಸಿ ಬೆಳೆ ಬೆಳೆಯಲಾಗಿದೆ. ಎಲೆರಾಂಪುರ ಗ್ರಾಮ ಪಂಚಾಯಿತಿ ಹಾಗೂ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ತಾಲ್ಲೂಕಿನ ಡಿ.ನಾಗೇನಹಳ್ಳಿಯಲ್ಲಿ ಒಣ ಬೇಸಾಯದಿಂದ ಬೆಳೆಗಳಿಗೆ ಉತ್ತೇಜನ ನೀಡಲಾಗಿದೆ ಎಂದು ಮಣ್ಣು ವಿಜ್ಞಾನಿ ರಮೇಶ್‌ ತಿಳಿಸಿದ್ದಾರೆ.

ಇನ್ನೂ ಸಂಪೂರ್ಣ ನಿಷ್ಕ್ರಿಯಗೊಂಡಿದ್ದ ಸುಮಾರು 25 ಕೊಳವೆಬಾವಿಗಳು ಮರು ಜೀವ ಪಡೆದಿದೆ. ಒಣಗಿದ್ದ ಬಾವಿಗಳಲ್ಲಿ ನೀರು ನಿಂತಿದೆ. ಸಂಪೂರ್ಣ ಬೆಟ್ಟ ಹಾಗೂ ಗುಡ್ಡ ಪ್ರದೇಶವಾದ ಈ ಭಾಗದಲ್ಲಿ ಈ ಮೊದಲು ಮಳೆ ನೀರು ವ್ಯರ್ಥವಾಗುತ್ತಿತ್ತು. ಇದನ್ನು ಮನಗಂಡ ಕೃಷಿ ವಿಜ್ಞಾನ ಕೇಂದ್ರ ಡಿ.ನಾಗೇನಹಳ್ಳಿ ಗ್ರಾಮವನ್ನು ಜಲ ಮರುಪೂರ್ಣಕ್ಕೆ ಆಯ್ಕೆ ಮಾಡಿಕೊಂಡಿದ್ದಾರೆ.

ಗ್ರಾಮದ ಬೆಟ್ಟದ ಪ್ರದೇಶದಲ್ಲಿ ನೆಲ್ಲಿ, ಗೋಡಂಬಿ, ಹುಣಸೆ, ಜತೆಗೆ ಕೃಷಿ ಹೊಂಡದಲ್ಲಿ ಶೇಖರಣೆಯಾಗಿರುವ ಮಳೆ ನೀರಿನಲ್ಲಿ ಮಾವು, ಹೆಬ್ಬೇವು ಸೇರಿದಂತೆ ಅರಣ್ಯ ಮರಗಳನ್ನು ಬೆಳೆಸಲಾಗಿದೆ. ಮೂಲ ಹೆಚ್ಚಿರುವ ಕಾರಣ ಪ್ರಾಣಿ, ಪಕ್ಷಿ, ಜನುವಾರುಗಳಿಗೆ ಆಶ್ರಯ ಕಲ್ಪಿಸಲಾಗಿದೆ. ಮಣ್ಣಿನ ಸವಕಳಿ ಹಾಗೂ ಮಳೆ ನೀರು ಇಂಗಿಸುವ ಸಲುವಾಗಿ ಗ್ರಾಮದ ಸುತ್ತಲಿನ ಜಮೀನುಗಳಲ್ಲಿ ಬದುಗಳನ್ನು ಹಾಕಲಾಗಿದೆ. 10 ವರ್ಷಗಳಿಂದ ನಿಕ್ರಾ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಂದಾಗಿ ವಿವಿಧ ಅಂತರ್ಜಲ ವೃದ್ಧಿಯಾಗಿ ಈ ಭಾಗದಲ್ಲಿದ್ದ ನೀರಿನ ಬವಣೆ ನೀಗಿದೆ. ಸದ್ಯ ಇದರಿಂದ ಸ್ಥಳೀಯ ರೈತರು ಖುಷಿಯಾಗಿದ್ದಾರೆ.

ನಿಕ್ರಾ ದೇಶದಲ್ಲಿ ಇದೇ ಯೋಜನೆಯಡಿ 100 ಹಳ್ಳಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಅದರಂತೆ ರಾಜ್ಯದಲ್ಲಿ 4 ಹಳ್ಳಿಗಳನ್ನು ಆಯ್ಕೆ ಮಾಡಲಾಗಿದೆ. ಕಳೆದ 11 ವರ್ಷಗಳಿಂದ ಗ್ರಾಮದಲ್ಲಿ ಯೋಜನೆ ಅನುಷ್ಠಾನಗೊಂಡು ಸಫಲವಾದ್ದರಿಂದ ನಾಗೇನಹಳ್ಳಿ 100 ಪರ್ಸೆಂಟ್‌ ಯೋಜನೆಯನ್ನು ಕಾರ್ಯಗತಗೊಳಿಸಿದ ಮೊದಲ ಗ್ರಾಮವಾಗಿದೆ. ಹೀಗಾಗಿ ಗ್ರಾಮಕ್ಕೆ ಕೇಂದ್ರ ಸರ್ಕಾರ ಪುರಸ್ಕಾರ ಲಭಿಸಿದೆ.

ವರದಿ: ಮಹೇಶ್

ಇದನ್ನೂ ಓದಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅಂತ್ಯಸಂಸ್ಕಾರ; ಪೊಲೀಸ್ ಬ್ಯಾಂಡ್​ನೊಂದಿಗೆ ರಾಷ್ಟ್ರಗೀತೆ ನುಡಿಸಿ ಗೌರವ ಸಮರ್ಪಣೆ

ಕರ್ನಾಟಕಕ್ಕೆ ಮತ್ತೊಂದು ಹೆಮ್ಮೆ; ಕೊವಿಡ್ ವಾರ್ ರೂಂ ಮುಖ್ಯಸ್ಥ ಐಎಎಸ್ ಅಧಿಕಾರಿ ಮೌನೀಶ್ ಮೌದ್ಗಿಲ್​ಗೆ ರಾಷ್ಟ್ರ ಪ್ರಶಸ್ತಿ

Published On - 9:56 am, Wed, 12 January 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ