ತುಮಕೂರು: ಹೆರಿಗೆಯ ಬಳಿಕ ಬಾಲ್ಯವಿವಾಹ ಪತ್ತೆ; ಅಪ್ರಾಪ್ತೆ ಪತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು
ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಅಪ್ರಾಪ್ತೆಗೆ ಹೆಣ್ಣು ಮಗುವಾಗಿದ್ದು, ಈ ವೇಳೆ ಬಾಲ್ಯವಿವಾಹವಾಗಿರುವುದು ಬೆಳಕಿಗೆ ಬಂದಿದೆ.
ತುಮಕೂರು: ಹೆರಿಗೆಯ ಬಳಿಕ ಬಾಲ್ಯವಿವಾಹ ಪತ್ತೆಯಾದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ನಡೆದಿದೆ. ಅಪ್ರಾಪ್ತೆ ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾಗ ಬಾಲ್ಯವಿವಾಹವಾಗಿರುವುದು ಬೆಳಕಿಗೆ ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಅಪ್ರಾಪ್ತೆಯ ಪತಿಯನ್ನು ಪೊಲೀಸರು ಬಂಧಿಸಿದ್ದು, ಅಪ್ರಾಪ್ತೆ ಪತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಅಪ್ರಾಪ್ತೆಗೆ ಹೆಣ್ಣು ಮಗುವಾಗಿದ್ದು, ಈ ವೇಳೆ ಬಾಲ್ಯವಿವಾಹವಾಗಿರುವುದು ಬೆಳಕಿಗೆ ಬಂದಿದೆ. ಅಪ್ರಾಪ್ತೆಯ ಪತಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾನೆ. ಸದ್ಯ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ.
ಚಾಮರಾಜನಗರ: ವಿವಾಹ ಪೂರ್ವ ಸಮ್ಮತಿ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ;ಜಿಲ್ಲಾ ಸೆಷನ್ಸ್ ಕೋರ್ಟ್‌ನಿಂದ ಮಹತ್ವದ ತೀರ್ಪು ಚಾಮರಾಜನಗರ: ವಿವಾಹ ಪೂರ್ವ ಸಮ್ಮತಿ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಚಾಮರಾಜನಗರ ಜಿಲ್ಲಾ ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ. ನಂದಕುಮಾರ್ ಮತ್ತು ಶೋಭ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯ ಈ ತೀರ್ಪು ನೀಡಿದೆ. ನಂದಕುಮಾರ್ ಮತ್ತು ಶೋಭ ಪರಸ್ಪರ ಪ್ರೀತಿಸುತ್ತಿದ್ದರು. ಪರಸ್ಪರ ಇಬ್ಬರೂ ಒಪ್ಪಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದರು. ಆದರೆ ನಂದಕುಮಾರ್ ಬೇರೆ ವಿವಾಹವಾಗಿದ್ದಾರೆ. ಹೀಗಾಗಿ ಶೋಭ 2018ರಲ್ಲಿ ಅನ್ಯಾಯವಾಗಿದೆ ಎಂದು ದೂರು ನೀಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಾಹ ಪೂರ್ವ ಸಮ್ಮತಿ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಕೋರ್ಟ್ ತೀರ್ಪು ನೀಡಿದೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪೇದೆಗಳಾಗಿ ಕಾರ್ಯನಿರ್ವಹಿಸುತ್ತಿದ್ದ ನಂದಕುಮಾರ್ ಮತ್ತು ಶೋಭ ಕುರಿತ ಪ್ರಕರಣದಲ್ಲಿ ಕೋರ್ಟ್ ಮಹತ್ವದ ಆದೇಶ ನೀಡಿದೆ. ನಂದಕುಮಾರ್ ಮತ್ತು ಶೋಭ ಮದುವೆಯಾಗುವುದಕ್ಕೆ ನಿರ್ಧಾರ ಮಾಡಿದ್ದರು. ಆದರೆ ಜಾತಿ ಕಾರಣದಿಂದಾಗಿ ಮದುವೆ ಮುರಿದುಬಿದ್ದಿತ್ತು. ಹೀಗಾಗಿ ನಂದಕುಮಾರ್ ಮತ್ತೊಂದು ಮದುವೆಯಾಗಿದ್ದರು. ಇದರಿಂದ ತನಗೆ ಅನ್ಯಾಯವಾಗಿದೆ ಎಂದು ನಂದಕುಮಾರ್ ವಿರುದ್ಧ 2018ರಲ್ಲಿ ಶೋಭ ದೂರು ನೀಡಿದ್ದರು.
ನಂದಕುಮಾರ್ ವಿರುದ್ಧ ಅತ್ಯಾಚಾರ, ವಂಚನೆ, ಜಾತಿನಿಂದನೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ವಾದ -ವಿವಾದವನ್ನು ಆಲಿಸಿ ಇಬ್ಬರ ಸಹಮತಿಯಿಂದ ದೈಹಿಕ ಸಂಪರ್ಕವಾಗಿದೆ ಎಂದು ಪರಿಗಣಿಸಿದೆ. ಹೀಗಾಗಿ ಇದು ಅತ್ಯಾಚಾರ ಪ್ರಕರಣದ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಾಲಯ ಆದೇಶ ನೀಡಿದೆ. ಸದ್ಯ ನಂದಕುಮಾರ್ ಚಾಮರಾಜನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ, ಶೋಭ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪೇದೆಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ: ಕೊವಿಡ್ ಸಮಯದಲ್ಲಿ ಬಾಲ್ಯವಿವಾಹ ಹೆಚ್ಚಾಗಿದೆ: ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್
ಬಾಗಲಕೋಟೆ: ಇಂದು ಒಂದೇ ದಿನ 3 ಬಾಲ್ಯವಿವಾಹ ತಡೆದ ಅಧಿಕಾರಿಗಳು
Published On - 8:04 am, Tue, 12 October 21