AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime Updates: ಚಾಕಲೇಟ್ ಬಾಕ್ಸ್ ಕದ್ದೊಯ್ದ ಕಳ್ಳ, ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಮಕ್ಕಳು ಆತ್ಮಹತ್ಯೆ

ಚಾಕಲೇಟ್ ಬಾಕ್ಸ್ ದೋಚಿ ಬೈಕ್ ಮೇಲೆ ಪರಾರಿ ಆಗಿದ್ದಾನೆ. ಬಾಗಲಕೋಟೆ ವಿದ್ಯಾಗಿರಿ ಬಡಾವಣೆಯಲ್ಲಿ ಇರುವ ರಾಜ್ ಪಾನ್ ಶಾಪನಲ್ಲಿ ಕಳ್ಳತನ ನಡೆಸಲಾಗಿದೆ. ಚಾಕೊಲೇಟ್ ಡಬ್ಬಿ ಎತ್ತಿಕೊಂಡು ಬೈಕ್ ನಲ್ಲಿ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.

Crime Updates: ಚಾಕಲೇಟ್ ಬಾಕ್ಸ್ ಕದ್ದೊಯ್ದ ಕಳ್ಳ, ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಮಕ್ಕಳು ಆತ್ಮಹತ್ಯೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Feb 26, 2022 | 5:06 PM

Share

ತುಮಕೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಮೂವರು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಉಪ್ಪಾರಹಳ್ಳಿ ತಾಂಡಾದಲ್ಲಿ ನಡೆದಿದೆ. ಇಬ್ಬರು ಮಕ್ಕಳ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಜ್ಜಿಬಾಯಿ (35), ಖುಷಿ (9), ಹರ್ಷಿತಾ (6) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಪತಿ ವೆಂಕಟೇಶ್ ನಿತ್ಯ ಗಲಾಟೆ ಮಾಡುತ್ತಿದ್ದ. ನಿನ್ನೆ ರಾತ್ರಿಯೂ ಕುಡಿದು ಬಂದು ಗಲಾಟೆ ಮಾಡಿದ್ದ ಎಂದು ತಿಳಿದುಬಂದಿದೆ. ಇದರಿಂದ ಮನನೊಂದು ಮಕ್ಕಳ ಜತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಾಗಲಕೋಟೆ: ಕಳ್ಳನೊಬ್ಬ ನಗರದ ವಿದ್ಯಾಗಿರಿ ಬಡಾವಣೆಯ ಅಂಗಡಿಯಲ್ಲಿ ಚಾಕಲೇಟ್ ಬಾಕ್ಸ್ ಕದ್ದೊಯ್ದ ಘಟನೆ ಇಲ್ಲಿ ನಡೆದಿದೆ. ಬಂಗಾರ, ಬೆಳ್ಳಿ, ಆಭರಣ, ಹಣವಲ್ಲ. ಬದಲಿಗೆ ಕಳ್ಳ ಚಾಕಲೇಟ್ ದೋಚಿದ್ದಾನೆ. ಚಾಕಲೇಟ್ ಬಾಕ್ಸ್ ದೋಚಿ ಬೈಕ್ ಮೇಲೆ ಪರಾರಿ ಆಗಿದ್ದಾನೆ. ಬಾಗಲಕೋಟೆ ವಿದ್ಯಾಗಿರಿ ಬಡಾವಣೆಯಲ್ಲಿ ಇರುವ ರಾಜ್ ಪಾನ್ ಶಾಪನಲ್ಲಿ ಕಳ್ಳತನ ನಡೆಸಲಾಗಿದೆ. ಚಾಕೊಲೇಟ್ ಡಬ್ಬಿ ಎತ್ತಿಕೊಂಡು ಬೈಕ್ ನಲ್ಲಿ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ.

ನೆಲಮಂಗಲ: ಲಾರಿ ಹಾಗೂ ಕಂಟೇನರ್ ನಡುವೆ ಅಪಘಾತ ಸಂಭವಿಸಿ, ಕಂಟೇನರ್ ರಸ್ತೆಯಲ್ಲೇ ಉರುಳಿ ಬಿದ್ದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4 ಅಡಕಮಾರನಹಳ್ಳಿ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಅಪಘಾತ ಸಂಭವಿಸಿದೆ. ಬೃಹತ್ ಕ್ರೇನ್ ಬಳಸಿ ಪಕ್ಕಕ್ಕೆ ಸರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದೀಗ ಹೆದ್ದಾರಿಯಲ್ಲಿ ವಾಹನಗಳು ನಿಧಾನಗತಿಯಲ್ಲಿ ಚಲಿಸುತ್ತಿವೆ. ಈ ಅಪಘಾತದಿಂದ ನೈಸ್ ರಸ್ತೆಯೂ ಜಾಮ್ ಆಗಿ ವಾಹನ ಸವಾರರಿಗೆ ತೀವ್ರ ಸಂಕಷ್ಟ ಎದುರಾಗಿದೆ.

ಮೈಸೂರು: ಹುಣಸೂರು ತಾಲೂಕಿನ ಬಿಳಿಗೆರೆ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಮಂಜು ಎಂಬುವರ ಮೇಲೆ ಗ್ರಾಮ ಪಂಚಾಯತ್ ಸದಸ್ಯ ಪ್ರಭಾಕರ, ಸುನಿಲ್, ಹರೀಶ್​, ಭರತ್, ಸ್ವಾಮಿಗೌಡ, ಅನಿಲ್, ವಸಂತನಿಂದ ಹಲ್ಲೆ ಆರೋಪ ಕೇಳಿಬಂದಿದೆ. ಮಗನ ಸಹಾಯಕ್ಕೆ ಬಂದ ಮಂಜು ತಾಯಿ ಪುಟ್ಟಮ್ಮಗೂ ಗಾಯ ಆಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೆಳಗಾವಿ: ಅಕ್ರಮ ಸಂಬಂಧದ ಶಂಕೆಯಿಂದ ಕುಡಿದ ಮತ್ತಿನಲ್ಲಿ ಪತಿ, ಸೀರೆಯಿಂದ ಕುತ್ತಿಗೆ ಬಿಗಿದು ತನ್ನ ಪತ್ನಿಯನ್ನೇ ಹತ್ಯೆಗೈದ ದುರ್ಘಟನೆ ಸಂಭವಿಸಿದೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಆಶಾ ಕಾಂಬಳೆ (35) ಹತ್ಯೆ ಮಾಡಲಾಗಿದೆ. ಆರೋಪಿ ಪ್ರತಾಪ್ ಅಲಿಯಾಸ್ ಪ್ರದೀಪ ಕಾಂಬಳೆ ಎಂಬಾತನನ್ನು ರಾಯಬಾಗ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ: ಹರಿಹರ ತಾಲೂಕಿನ‌ ಹನಗವಾಡಿ ಬಳಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ವೃದ್ಧೆ ಸಾವನ್ನಪ್ಪಿದ ಘಟನೆ ನಡೆದಿದೆ. ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಗಲಕೋಟೆಯ ಇಳಕಲ್ ನಗರದ ಪ್ರವಾಸಿ ಮಂದಿರದ ಹಳೇ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಸಂಭವಿಸಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಇತ್ತ, ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ಕಡಲೆ, ಮೇವಿನ ಬಣವೆಗೆ ಬೆಂಕಿ ಬಿದ್ದು 10 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಬೆಳೆ ಸುಟ್ಟು ಭಸ್ಮ ಆಗಿದೆ.

ಇದನ್ನೂ ಓದಿ: Crime Updates: ತಲಾ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಬಿಬಿಎಂಪಿ ಸಿಬ್ಬಂದಿ, ಬೆಸ್ಕಾಂ ಅಧಿಕಾರಿ ಎಸಿಬಿ ಬಲೆಗೆ

ಇದನ್ನೂ ಓದಿ: Crime News: ನೀನು ಜಗತ್ತಿನ ಬೆಸ್ಟ್​ ಅಮ್ಮ, ನನ್ನ ದೇವತೆ; ಸೂಸೈಡ್ ನೋಟ್ ಬರೆದಿಟ್ಟು 15ನೇ ಮಹಡಿಯಿಂದ ಹಾರಿದ ಬಾಲಕ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?