ತುಮಕೂರಲ್ಲಿ ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ

ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ನಡೆದಿದೆ.

ತುಮಕೂರಲ್ಲಿ ರಾಜಕೀಯ ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ
ಗಲಾಟೆಯಲ್ಲಿ ಸುಟ್ಟು ಕರಕಲಾದ ಬೈಕ್​
Follow us
| Updated By: ವಿವೇಕ ಬಿರಾದಾರ

Updated on: May 30, 2023 | 10:22 AM

ತುಮಕೂರು: ರಾಜಕೀಯ (Politics) ದ್ವೇಷಕ್ಕಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಮಧುಗಿರಿ ತಾಲೂಕಿನ ಕಡಗತ್ತೂರು ಗ್ರಾಮದಲ್ಲಿ ನಡೆದಿದೆ. ಮಧುಗಿರಿ ಕ್ಷೇತ್ರದಲ್ಲಿ ಜೆಡಿಎಸ್ (JDS)​ ಸೋತಿರುವ ವಿಚಾರಕ್ಕೆ ಜೆಡಿಎಸ್​​ ಮುಖಂಡ ಮುದ್ದಪ್ಪ ಹಾಗೂ ಕಾಂಗ್ರೆಸ್ (Congress) ಮುಖಂಡ ಕೃಷ್ಣಪ್ಪ ಮಧ್ಯೆ ವಾಗ್ವಾದ ನಡೆದಿದೆ. ಈ ಬಳಿಕ ಕೃಷ್ಣಪ್ಪನ ಕಡೆಯವರು ಮುದ್ದಪ್ಪ ಬೈಕ್​ಗೆ ಬೆಂಕಿ ಹಚ್ಚಿದ್ದಾರೆ ಆರೋಪ ಕೇಳಿಬಂದಿದೆ. ಇದಕ್ಕೆ ಪ್ರತೀಕಾರವಾಗಿ ಮುದ್ದಪ್ಪನ ಕಡೆಯವರು ಕೃಷ್ಣಪ್ಪ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪವಿದೆ. ಇದರಿಂದ ಕೃಷ್ಣಪ್ಪನ ತಲೆಗೆ ಗಾಯ‌ವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೊಲೀಸ್ ಠಾಣೆ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ

ರಾಯಚೂರು: ಪೊಲೀಸ್ ಠಾಣೆ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಗಬ್ಬೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ನರಸಿಂಹಲು ಹಲ್ಲೆಗೊಳಗಾದ ಪೊಲೀಸ್ ಕಾನ್ಸಟೇಬಲ್. ಘಟನೆ ಸಂಬಂಧ ಗಬ್ಬೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಸಿದ್ದಾರೆ. ಸೈಯದ್ ಫರೀದ್, ಸೈಯದ್ ವಹೀದ್, ಸೈಯದ್ ದಸ್ತಗಿರಿ ಬಂಧಿತ ಆರೋಪಿಗಳು.

ಲಾರಿ ಹಾಗೂ ಟಾಟಾ ಏಸ್ ನಡುವೆ ನಡೆದಿದ್ದ ಅಪಘಾತ ನಡೆದಿತ್ತು. ಪ್ರಕರಣ ಸಂಬಂಧ ಪೊಲೀಸ್​ ಠಾಣೆಯಲ್ಲಿ ಮಾತುಕತೆ ನಡೆಯುವಾಗ ಪೊಲೀಸ್ ಕಾನ್ಸಟೇಬಲ್ ಲಾರಿ ಚಾಲಕ ಪರ ಮಾತನಾಡುತ್ತಿದ್ದರು ಅಂತ ಹಲ್ಲೆ ಮಾಡಿದ್ದಾರೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರಿ ಮಳೆ; ಎಲ್ಲೆಲ್ಲಿ, ಏನು ಹಾನಿ? ಇಲ್ಲಿದೆ ಮಾಹಿತಿ

ಬಸ್ ಡಿಪೋ ಹಿಂಭಾಗ ಚಿರತೆ ಪ್ರತ್ಯಕ್ಷ

ಮಂಡ್ಯ: ಜಿಲ್ಲೆಯ ಕೆ.ಆರ್​.ಪೇಟೆ ಬಸ್ ಡಿಪೋ ಹಿಂಭಾಗ ಇರುವ ಶಿಕ್ಷಕಿ ರತ್ನಾ ನಿವಾಸದ ಬಳಿ ತಡರಾತ್ರಿ ಚಿರತೆ ಕಾಣಿಸಿಕೊಂಡಿದೆ. ಚಿರತೆ ಓಡಾಟದ ದೃಶ್ಯ ಮನೆ ಮುಂದಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಪ್ರದೇಶದಲ್ಲಿ ಒಂಟಿಯಾಗಿ ಓಡಾಡದಂತೆ ತಾಲೂಕು ಆಡಳಿತ ಎಚ್ಚರಿಕೆ ನೀಡಿದೆ. ಇನ್ನು ಅರಣ್ಯ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಇಡಲು ಮುಂದಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್