ನಾವೊಬ್ಬರೇ ತೈಲ ಬೆಲೆ ಇಳಿಕೆ ಮಾಡೋಕೆ ಆಗಲ್ಲ, ಆದ್ರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸ್ತೇವೆ -ಸಿಎಂ ಬಸವರಾಜ ಬೊಮ್ಮಾಯಿ

ನಾವೊಬ್ಬರೇ ಇಳಿಕೆ ಮಾಡೋಕೆ ಆಗಲ್ಲ. ಕಳೆದ ಬಾರಿ 7 ರೂಪಾಯಿ ಇಳಿಕೆ‌ ಮಾಡಿದ್ವಿ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ‌ ದರ ಏರಿಕೆ‌ ಹಿನ್ನೆಲೆ ಎಫೆಕ್ಟ್ ಆಗಿದೆ. ನಮ್ಮಲ್ಲೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾಗುತ್ತಿದೆ. ಮುಂದಿನ ದಿನಗಳಲ್ಲಿ ಇಳಿಕೆ ಮಾಡುವ ಬಗ್ಗೆ ಯೋಚಿಸ್ತೇವೆ. -ಸಿಎಂ ಬಸವರಾಜ ಬೊಮ್ಮಾಯಿ

ನಾವೊಬ್ಬರೇ ತೈಲ ಬೆಲೆ ಇಳಿಕೆ ಮಾಡೋಕೆ ಆಗಲ್ಲ, ಆದ್ರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸ್ತೇವೆ -ಸಿಎಂ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ
Follow us
TV9 Web
| Updated By: ಆಯೇಷಾ ಬಾನು

Updated on: Apr 10, 2022 | 12:52 PM

ತುಮಕೂರು: ಸತತ ಏರಿಕೆ ಕಾಣುತ್ತಿದ್ದ ತೈಲ ಬೆಲೆ ಸದ್ಯ ನಾಲ್ಕು ದಿನಗಳಿಂದ ಸ್ಥಿರವಾಗಿದೆ. ಹಲವು ರಾಜ್ಯದಲ್ಲಿ ಹೀಗಾಗಲೇ ಡೀಸೆಲ್ ಬೆಲೆ 100 ರೂ ಗಡಿ ದಾಟಿದೆ. ಮಾರ್ಚ್ 22ರಿಂದ ಈ ವರೆಗೆ ಎರಡು ವಾರಗಳಲ್ಲಿ ಒಟ್ಟು 15 ಬಾರಿ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ತಲಾ 10 ರೂ ಏರಿಕೆ ಕಂಡಿದೆ. ಸದ್ಯ ಈ ಸಂಬಂಧ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ನಾವೊಬ್ಬರೇ ತೈಲ ಬೆಲೆ ಇಳಿಕೆ ಮಾಡುವುದಕ್ಕೆ ಆಗುವುದಿಲ್ಲ. ಕಳೆದ ಬಾರಿ ತೈಲ ದರ 7 ರೂಪಾಯಿ ಇಳಿಕೆ‌ ಮಾಡಿದ್ದೆವು ಎಂದು ತುಮಕೂರು ಜಿಲ್ಲೆ ಕುಣಿಗಲ್ನಲ್ಲಿ ಹೇಳಿಕೆ ನೀಡಿದ್ದಾರೆ.

ನಾವೊಬ್ಬರೇ ಇಳಿಕೆ ಮಾಡೋಕೆ ಆಗಲ್ಲ. ಕಳೆದ ಬಾರಿ 7 ರೂಪಾಯಿ ಇಳಿಕೆ‌ ಮಾಡಿದ್ವಿ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ‌ ದರ ಏರಿಕೆ‌ ಹಿನ್ನೆಲೆ ಎಫೆಕ್ಟ್ ಆಗಿದೆ. ನಮ್ಮಲ್ಲೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾಗುತ್ತಿದೆ. ಮುಂದಿನ ದಿನಗಳಲ್ಲಿ ಇಳಿಕೆ ಮಾಡುವ ಬಗ್ಗೆ ಯೋಚಿಸ್ತೇವೆ. ಜನರಿಗೆ ಬಾರ ಆಗಬಾರದು ಅನ್ನುವ ಉದ್ದೇಶ ನಮ್ಮದು ಎಂದರು.

ಇನ್ನು ಇದೇ ವೇಳೆ ಕಾಂಗ್ರೆಸ್ ಕೇಸರಿ ಶಾಲು ಧರಿಸಿ ರಾಮನವಮಿ ಆಚರಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿರುವ ಸಿಎಂ ಬೊಮ್ಮಾಯಿ, ಆಚರಣೆ ಮಾಡಿರೋದು ಒಳ್ಳೆಯದು. ಅದು ಪರಿವರ್ತನೆಯ ಸಂಕೇತ. ಶ್ರೀರಾಮ ಚಂದ್ರನೇ ಈ ಜಗತ್ತನ್ನ ನಡೆಸ್ತಿರೋದು. ಅವರು ಪರಿವರ್ತನೆ ಆದ್ರೆ ಎಲ್ಲವೂ ಒಳ್ಳೆಯದು. ಅವರು ಶ್ರೀರಾಮನಿಂದಲೇ ಪರಿವರ್ತನೆ ಆಗಿದ್ದಾರೆ ಎಂದರು. ಗೃಹ ಸಚಿವರು ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್ ಹೇಳಿಕೆ ವ್ಯತ್ಯಾಸ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಸಿಎಂ, ಕೆಲವು ಮಾಹಿತಿ ಮೂಲಕ ಅದು ವ್ಯತ್ಯಾಸ ಉಂಟಾಗಿದೆ. ಯಾವುದೇ ರೀತಿಯ ಗೊಂದಲ ಇಲ್ಲ. ಅದನ್ನ ಸಿಐಡಿಗೆ ತನಿಖೆ ನಡೆಸಲು ಕೊಟ್ಟಿದ್ದೇವೆ. ಸಿಐಡಿ ತನಿಖೆಯಿಂದ ಸತ್ಯ ಹೊರಬರುತ್ತೆ ಎಂದರು.

ಮುಂಬೈಯಲ್ಲಿ ಪೆಟ್ರೋಲ್, ಡೀಸೆಲ್ಗೆ ದಾಖಲೆಯ ರೇಟ್ ದೆಹಲಿ: ಭಾರತದಲ್ಲಿ ಕಳೆದ ಮೂರು ದಿನಗಳಿಂದ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಏರಿಕೆ ಕಾಣದೆ ಸ್ಥಿರವಾಗಿದೆ. ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿತ್ತು. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇತ್ತು. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಏರುತ್ತಲೇ ಇತ್ತು. ಈ ಮಧ್ಯೆ, ಇಂದು (ಏಪ್ರಿಲ್ 9, 2022) ಇಂಧನ ದರದಲ್ಲಿ ಯಾವುದೇ ಏರಿಕೆ ಕಂಡುಬಂದಿಲ್ಲ. ಪರಿಣಾಮವಾಗಿ ಕಳೆದ 19 ದಿನಗಳಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿದೆ. ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಗಿಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗುತ್ತಿದೆ. ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲಯಲ್ಲಿ ಏರಿಕೆ ಮಾಡಲಾಗಿಲ್ಲ.

ದೆಹಲಿಯಲ್ಲಿಂದು ಪೆಟ್ರೋಲ್ ಬೆಲೆ ಒಂದು ಲೀಟರ್ಗೆ ₹ 105.41 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ ₹ 96.67 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.95 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.04 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 115.12 ರೂ. ಡೀಸೆಲ್ ಬೆಲೆ ಲೀಟರ್ಗೆ 99.83 ರೂ. ಆಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.79 ರೂಪಾಯಿ ದಾಖಲಾಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ: ಧ್ವನಿವರ್ಧಕದಲ್ಲಿ ಹನುಮಾನ್​ ಚಾಲೀಸಾ, ಭಕ್ತಿಗೀತೆಗಳನ್ನು ಹಾಕಿದ ರಾಜ್ ಠಾಕ್ರೆ ಪಕ್ಷದ ಕಾರ್ಯಕರ್ತರು; ಕೂಡಲೇ ಬಂದು ತಡೆದ ಪೊಲೀಸರು

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್