ಇಂದು ತುಮಕೂರಿಗೆ ಸಿಎಂ ಬೊಮ್ಮಾಯಿ ಭೇಟಿ: 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಸಮಾರಂಭದಲ್ಲಿ ಭಾಗಿ

ರಾಜ್ಯಾದ್ಯಂತ ಇಂದಿನಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿವೆ. ಕೊರೊನಾ ಕಾರಣಕ್ಕೆ ಎರಡು ವರ್ಷ ಶಾಲೆಗಳು ಸರಿಯಾಗಿ ನಡೆದಿಲ್ಲದ ಹಿನ್ನಲೆ ಈ ವರ್ಷ ಮೇ ತಿಂಗಳ ಎರಡನೇ ವಾರದಲ್ಲಿಯೇ ಶಾಲೆಗಳು ಆರಂಭವಾಗಲಿವೆ.

ಇಂದು ತುಮಕೂರಿಗೆ ಸಿಎಂ ಬೊಮ್ಮಾಯಿ ಭೇಟಿ: 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಸಮಾರಂಭದಲ್ಲಿ ಭಾಗಿ
ಸಿಎಂ ಬಸವರಾಜ ಬೊಮ್ಮಾಯಿImage Credit source: oneindia.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: May 16, 2022 | 8:22 AM

ತುಮಕೂರು: ಇಂದು ಮಧ್ಯಾಹ್ನ 12.20ಕ್ಕೆ ಮಂಡ್ಯದ ಬೆಳ್ಳೂರು ಕ್ರಾಸ್​ನಿಂದ ತುಮಕೂರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಹೆಲಿಕಾಪ್ಟರ್ ಮೂಲಕ ತುಮಕೂರು ವಿವಿ ಹೆಲಿಪ್ಯಾಡ್​ಗೆ ಆಗಮಿಸಲಿದ್ದು, ಜಿಲ್ಲೆಯ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆಯಲಿರುವ 2022-23 ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯ ಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ವರ್ಷದ ಪ್ರಾರಂಭೋತ್ಸವ ಉದ್ವಾಟನಾ ಸಮಾರಂಭದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಜೊತೆಗೆ ವಿವಿಧ ಕಾರ್ಯಕ್ರಮಗಳಲ್ಲೂ ಭಾಗಿಯಾಗಲಿದ್ದು, ಸಿಎಂಗೆ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿಸಿ ನಾಗೇಶ್, ಮಾಧುಸ್ವಾಮಿ ಸೇರಿದಂತೆ ಜಿಲ್ಲೆಯ ಶಾಸಕರು ಸಾಥ್ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 2.30ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.

ರಾಜ್ಯಾದ್ಯಂತ ಇಂದಿನಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭ:

ರಾಜ್ಯಾದ್ಯಂತ ಇಂದಿನಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿವೆ. ಕೊರೊನಾ ಕಾರಣಕ್ಕೆ ಎರಡು ವರ್ಷ ಶಾಲೆಗಳು ಸರಿಯಾಗಿ ನಡೆದಿಲ್ಲದ ಹಿನ್ನಲೆ ಈ ವರ್ಷ ಮೇ ತಿಂಗಳ ಎರಡನೇ ವಾರದಲ್ಲಿಯೇ ಶಾಲೆಗಳು ಆರಂಭವಾಗಲಿವೆ. ಎರಡು ವಾರಗಳ ಬೇಸಿಗೆ ರಜೆಗೆ ಬ್ರೇಕ್ ಹಾಕಿ ಶಾಲೆಗಳ ಆರಂಭಗೊಳ್ಳಲಿದ್ದು, ಮೊದಲ ದಿನದಿಂದಲೇ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಿಗಲಿದೆ. ಇಂದಿನಿಂದ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಗುತ್ತಿದೆ. ಕೊರೊನಾದಿಂದ ಕಲಿಕಾ ಹಿನ್ನಡೆ ಸರಿದೂಗಿಸಲು ಮಕ್ಕಳಿಗೆ ವರ್ಷ ಪೂರ್ತಿ ಕಲಿಕಾ ಚೇತರಿಕೆ ನಡೆಯಲಿದೆ. ಮಕ್ಕಳನ್ನು ಬಹಳ ಸಂತೋಷದಿಂದ ಬರಮಾಡಿಕೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ. ಶಾಲೆಗಳಲ್ಲಿ ಸಿಹಿ ಖಾದ್ಯವನ್ನು ನೀಡಿ ಮಕ್ಕಳ ಸ್ವಾಗತಕ್ಕೆ ತಯಾರಿ ಮಾಡಲಾಗುತ್ತಿದೆ. ಕೋವಿಡ್‌ನಿಂದಾಗಿ ಕಳೆದ ಎರಡೂವರೆ ವರ್ಷಗಳಲ್ಲಿ ಶಾಲೆಗಳಲ್ಲಿ ಸರಿಯಾಗಿ ಭೌತಿಕ ತರಗತಿಗಳು ನಡೆದಿಲ್ಲ. ವಿದ್ಯಾರ್ಥಿಗಳು ಸಹ ಶೈಕ್ಷಣಿಕವಾಗಿ ಬಹಳ ಹಿಂದೆ ಉಳಿದಿದ್ದಾರೆ. ಇದರಿಂದಾಗಿ 2022-23 ನೇ ಶೈಕ್ಷಣಿಕ ವರ್ಷವನ್ನು ಮೇ 16ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಇಂದಿನಿಂದ 1 ರಿಂದ 10 ನೇ ತರಗತಿವರೆಗೂ ಶಾಲಾರಂಭವಾಗಲಿದ್ದು, ಕೊರೊನಾ ಬಳಿಕ ಶೈಕ್ಷಣಿಕ ಅವಧಿಗೂ ಎರಡು ವಾರ ಮುಂಚಿತವಾಗಿ ಶಾಲೆ ಆರಂಭವಾಗುತ್ತಿವೆ. ಮೊದಲ ದಿನವೇ ಮಕ್ಕಳಿಗಾಗಿ ಕ್ಷೀರಾಭಾಗ್ಯ, ಮಧ್ಯಾಹ್ನದ ಬಿಸಿಊಟ, ಮತ್ತು ಕಲಿಕಾ ಚೇತರಿಕೆ ಪ್ರಾರಂಭಗೊಳ್ಳಲಿದ್ದು, 15 ದಿನಗಳ ಕಾಲ ಕಲಿಕಾ ಚೇತರಿಕೆ ನಡೆಯಲಿದೆ. ಈ ಬ್ರಿಡ್ಜ್ ಕೋರ್ಸ್​ನಲ್ಲಿ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ ಬೇಕಾದ ರೀತಿಯಲ್ಲಿ ಟ್ರೈನ್ ಮಾಡಲಗುವುದಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ