ಈ ಬಾರಿ ದೇಶಕ್ಕೆ ಮಹಿಳಾ ಪ್ರಧಾನಿ; ಸ್ಫೋಟಕ ಭವಿಷ್ಯ ನುಡಿದ ನೊಣವಿನಕೆರೆ ಯಶ್ವಂತ ಗುರೂಜಿ

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯ ಯಶ್ವಂತ ಗುರೂಜಿ ಅವರು ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬೀಗಲಿದ್ದು ದೇಶಕ್ಕೆ ಮಾಹಿಳಾ ಪ್ರಧಾನಿ ಸಿಗಲಿದ್ದಾರೆ. ಬಳಿಕ ಅವರು ಪುರುಷರಿಗೆ ಬಿಟ್ಟುಕೊಡಲಿದ್ದಾರೆ ಎಂದು ಯಶ್ವಂತ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಈ ಬಾರಿ ದೇಶಕ್ಕೆ ಮಹಿಳಾ ಪ್ರಧಾನಿ; ಸ್ಫೋಟಕ ಭವಿಷ್ಯ ನುಡಿದ ನೊಣವಿನಕೆರೆ ಯಶ್ವಂತ ಗುರೂಜಿ
ನೊಣವಿನಕೆರೆ ಯಶ್ವಂತ ಗುರೂಜಿ
Follow us
TV9 Web
| Updated By: ಆಯೇಷಾ ಬಾನು

Updated on: Mar 10, 2024 | 9:32 AM

ತುಮಕೂರು, ಮಾರ್ಚ್​.10: ಲೋಕಸಭಾ ಚುನಾವಣೆಗೆ (Lok Sabha Election) ರಣಕಣ ರಂಗೇರಿದೆ. ರಾಜಕೀಯ ಪಕ್ಷಗಳು ಗೆಲುವಿಗಾಗಿ ನಾನಾ ಸರ್ಕಸ್ ಮಾಡ್ತಿದ್ದಾರೆ. ಈ ನಡುವೆ ತಿಪಟೂರು ತಾಲೂಕಿನ ನೊಣವಿನಕೆರೆಯ ಯಶ್ವಂತ ಗುರೂಜಿ (Yashwanth Guruji) ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದು ಈ ಬಾರಿ ಮಾಹಿಳಾ ಪ್ರಧಾನಿ ದೇಶಕ್ಕೆ ಸಿಗಲಿದ್ದಾರೆ ಎಂದಿದ್ದಾರೆ. ಈ ಬಾರಿ‌ ದೇಶದ ಚುಕ್ಕಾಣಿಯನ್ನು ಕಾಂಗ್ರೆಸ್ (Congress) ಪಕ್ಷ ಹಿಡಿಯಲಿದೆ. ಮಹಿಳಾ ಪ್ರಧಾನಿಯಾಗಿ ಪ್ರಿಯಾಂಕ ಗಾಂಧಿ (Priyanka Gandhi) ದೇಶದ ಗದ್ದುಗೆ ಏರಲಿದ್ದಾರೆ ಎಂದು ಯಶ್ವಂತ ಗುರೂಜಿ ಶಿವರಾತ್ರಿಯ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ 135 ಸೀಟು ಪಡೆಯಲಿದೆ ಎಂದು‌ ಈ ಹಿಂದೆ ಯಶ್ವಂತ ಗುರೂಜಿ ನಿಖರ ಭವಿಷ್ಯ ನುಡಿದಿದ್ದರು. ಅಲ್ಲದೆ ಕೊರೊನಾ ಮಹಾಮಾರಿ ಬರುವ ಬಗ್ಗೆ, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋ ಬಗ್ಗೆ ಗುರೂಜಿ ಭವಿಷ್ಯ ನುಡಿದಿದ್ದರು. ಸದ್ಯ ಈಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಈ‌ ಬಾರಿ ಒಬ್ಬಳು ಸ್ತ್ರೀ, ಪುರುಷನ ಎದುರು ದುರ್ಗಿಯಾಗಿ ನಿಂತು ಪುರುಷನಿಗೆ ಭಯ ಹುಟ್ಟಿಸಿ ತಾನೇ ಅಧಿಕಾರವನ್ನ ಮಾಡುವಳು. ತಾಯಿ ಮಮತೆಯಿಂದ ತನ್ನ ಅಧಿಕಾರವನ್ನ ಮಾತೃ ವಾತ್ಸಲ್ಯದಿಂದ ಪರರಿಗೆ ಬಿಟ್ಟುಕೊಡುವಳು. ಹೀಗಂತಾ ಕಾಲಜ್ಞಾನದಲ್ಲಿ ಉಲ್ಲೇಖವಾದ ಚುನಾವಣಾ ಭವಿಷ್ಯವನ್ನು ಯಶ್ವಂತ ಗುರೂಜಿ ನುಡಿದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಹೆದ್ದಾರಿಯಲ್ಲಿ ವೀಲಿಂಗ್ ಮಾಡ್ತಿದ್ದ 6ಜನ ಪುಂಡರ ಬಂಧನ; 13 ಬೈಕ್ ಜಪ್ತಿ

ಕಾಲಜ್ಞಾನದ ಪ್ರಕಾರ ಪ್ರಧಾನಿಯಾಗೋ ಯೋಗ ಹೊಂದಿರೋದು ಪ್ರಿಯಾಂಕ ಗಾಂಧಿ ಅವರು. ಬಳಿಕ ರಾಹುಲ್ ಗಾಂಧಿಗೆ ಬಿಟ್ಟು ಕೊಡುವ ಸಾಧ್ಯತೆ ಇದೆ. ಶಿವರಾತ್ರಿಗೂ ಮುನ್ನ ಚುನಾವಣೆ ನಡೆದಿದ್ದರೇ ಮೋದಿ ಅವರಿಗೆ ಪ್ರಧಾನಿಯಾಗೋ ಯೋಗವಿತ್ತು. ಆದರೇ ಈಗ ಮೋದಿ ಅವರಿಗೆ ಆ ಯೋಗ ಇಲ್ಲ. ಅವರಿಗೆ ಅನಾರೋಗ್ಯ ಕಾಡಬಹುದು. ಸದ್ಯ ಪ್ರಿಯಾಂಕ ಗಾಂಧಿಗೆ ಹಂಸಕ, ಚಂದ್ರಮಂಗಳ, ಬುಧಾಧಿತ್ಯ ಯೋಗ ಶುರುವಾಗಿದೆ. ಈ ಯೋಗದಿಂದಲೇ ಪ್ರಧಾನಿ ಪಟ್ಟ ಸಿಗೋ ಅವಕಾಶ ಒದಗಿಬರಲಿದೆ. ಅನ್ಯ ಪಕ್ಷಗಳ ಬಲದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತಾ ಭವಿಷ್ಯ ಇದೆ ಎಂದು ಯಶ್ವಂತ ಗುರೂಜಿ ನೊಣವಿನಕೆರೆಯಲ್ಲಿ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ