Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಕ್ರೂಸರ್-ಲಾರಿ ನಡುವೆ ಅಪಘಾತ: 9 ಮಂದಿ ಸಾವು, 11 ಮಂದಿಗೆ ಗಾಯ

ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿ ಡಿಕ್ಕಿಯಾಗಿ ಒಟ್ಟು 9 ಜನರು ಸಾವನ್ನಪ್ಪಿರುವಂತಹ ಘಟನೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದಿದೆ. ಕ್ರೂಸರ್​ನಲ್ಲಿ 20 ಜನರಿದ್ದು, ರಾಯಚೂರು ಜಿಲ್ಲೆಯರು ಎನ್ನಲಾಗುತ್ತಿದೆ. 

Accident: ಕ್ರೂಸರ್-ಲಾರಿ ನಡುವೆ ಅಪಘಾತ: 9 ಮಂದಿ ಸಾವು, 11 ಮಂದಿಗೆ ಗಾಯ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 25, 2022 | 9:23 AM

ತುಮಕೂರು: ಕ್ರೂಸರ್ ಓವರ್ ಟೇಕ್ ಮಾಡಲು ಹೋಗಿ ಲಾರಿ ಡಿಕ್ಕಿಯಾಗಿ ಒಟ್ಟು 9 ಜನರು ಸಾವನ್ನಪ್ಪಿರುವಂತಹ ಘಟನೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಬೆಳಗಿನ ಜಾವ 4ಗಂಟೆ ಸುಮಾರಿಗೆ ನಡೆದಿದೆ. ಕ್ರೂಸರ್​ನಲ್ಲಿ 20 ಜನರಿದ್ದು, ರಾಯಚೂರು ಜಿಲ್ಲೆಯರು ಎನ್ನಲಾಗುತ್ತಿದೆ. ಮೃತರಲ್ಲಿ ಮೂವರು ಮಹಿಳೆಯರು, ನಾಲ್ವರು ಪುರುಷರು, ಇಬ್ಬರು ಮಕ್ಕಳು ಸೇರಿ ಒಟ್ಟು 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 11 ಜನ ಗಾಯಾಳುಗಳನ್ನ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳ್ಳಂಬೆಳ್ಳ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತರ ಹೆಸರು ಊರಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಬರುವ ಬಡ ಕಾರ್ಮಿಕರು ಕ್ರೂಸರ್​ಗಳನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ. ಕಳ್ಳಂಬೆಳ್ಳ ಚೆಕ್​ಪೋಸ್ಟ್ ಹಾಗೂ ಟೋಲ್​ ಬಳಿ ಪದೇಪದೆ ಇಂಥ ಅಪಘಾತಗಳು ಸಂಭವಿಸಿವೆ.

ಕೃಷಿ ಕೆಲಸಗಳಿದ್ದಾಗ ಹಳ್ಳಿಗಳಿಗೆ ಹಿಂದಿರುಗುವ ರೈತರು, ನಂತರ ಕ್ರೂಸರ್​ಗಳ ಮೂಲಕ ಬೆಂಗಳೂರಿನ ಗುಡಿಸಲು, ಬಾಡಿಗೆ ಶೆಡ್, ಮನೆಗಳಿಗೆ ಹಿಂದಿರುಗುವುದು ವಾಡಿಕೆ. ಹಿಂದೊಮ್ಮೆ ಇಂಥ ಅಪಘಾತ ಸಂಭವಿಸಿದ್ದಾಗ ಜೋಳದ ಕಾಳುಗಳು ಶವದ ಮೇಲೆಲ್ಲಾ ಚೆಲ್ಲಾಡಿದ್ದನ್ನು ಕಂಡಿದ್ದ ದಾರಿಹೋಕರು ಕಣ್ಣೀರು ಮಿಡಿದಿದ್ದರು. ಈ ಮಾರ್ಗದಲ್ಲಿ ಬಸ್​ಗಳು ಸಾಕಷ್ಟು ಪ್ರಮಾಣದಲ್ಲಿ ಇದ್ದರೂ, ತಮ್ಮ ಸಾಮಾನು ಹಾಗೂ ಬೇಕಿರುವ ಸ್ಥಳಕ್ಕೆ ತಲುಪುವುದು ಸುಲಭ ಎನ್ನುವ ಕಾರಣಕ್ಕೆ ಕ್ರೂಸರ್​ಗಳನ್ನೇ ಬಡ ಕಾರ್ಮಿಕರು ಅವಲಂಬಿಸಿದ್ದಾರೆ.

ಕ್ರೂಸರ್​ನವರದೇ ತಪ್ಪು: ಪ್ರತ್ಯಕ್ಷದರ್ಶಿ ಸರಿತಾ

ಅಪಘಾತವಾದ ಬಳಿಕ ಕಾಪಾಡಿ ಕಾಪಾಡಿ ಅಂತಾ ಕೂಗೋ ಶಬ್ದ ಕೇಳಿಸಿತು. ನಾವು ಬಂದು ನೋಡಿದ್ವಿ. ಕ್ರೂಸರ್ ಲಾರಿ ನಡುವೆ ಅಪಘಾತವಾಗಿತ್ತು. ಮಕ್ಕಳು ಮಹಿಳೆಯರು ಸೇರಿದಂತೆ ಒಟ್ಟು 20 ಕ್ಕೂ ಹೆಚ್ಚು ಜನರು ಇದ್ದರು. ಕಾರಿನಲ್ಲಿ ಸಿಲುಕಿ ಒದ್ದಾಡುತ್ತಿದ್ದರು. ಸ್ಥಳದಲ್ಲೇ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಇನ್ನುಳಿದವರು ಆಸ್ಪತ್ರೆ ಗೆ ಕಳಿಸಲಾಯಿತು. ನಾವು ಜೊತೆಗೆ ಬರುವ ವಾಹನಗಳು ನಿಲ್ಲಿಸಿ ಗಾಯಾಳುಗಳನ್ನ ಆಸ್ಪತ್ರೆ ಕಳಿಸಲಾಯಿತು. ಅಂಬುಲೇನ್ಸ್ ಕರೆ ಮಾಡಿದ್ವಿ ಅಷ್ಟರಲ್ಲಿ ಪೊಲೀಸರು ಕೂಡ ಸ್ಥಳಕ್ಕೆ ಬಂದರು. ಕ್ರೂಸರ್​ನವರದ್ದು ತಪ್ಪಿದ್ದು, ಓವರ್ ಟೇಕ್ ಮಾಡಲು ಹೋಗಿ ಘಟನೆ ನಡೆದಿದೆ ಎಂದು ಟಿವಿ9 ಗೆ ಪ್ರತ್ಯಕ್ಷದರ್ಶಿ ಸರಿತಾ ಹೇಳಿಕೆ ನೀಡಿದರು.

ತುಮಕೂರು ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಭೇಟಿ 

ತುಮಕೂರು ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಡಿಸಿ ವೈ.ಎಸ್.ಪಾಟೀಲ್ ಭೇಟಿ ನೀಡಿ, ಪರಿಶೀಲಿಸಿದ್ದು, ಬಳಿಕ ಮಾತನಾಡಿದ ಅವರು ರಾಯಚೂರು ಜಿಲ್ಲೆಯಿಂದ ನಿನ್ನೆ 24 ಜನರು ಹೊರಟಿದ್ದರು. ಲಾರಿ ಓವರ್​​ ಟೇಕ್​ ಮಾಡಿ ಮುಂದೆ ಹೋಗುವಾಗ ಡಿಕ್ಕಿಯಾಗಿದೆ. ಕ್ರೂಸರ್​​ಗೆ ಹಿಂದಿನಿಂದ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. 9 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರನ್ನು ಬೆಂಗಳೂರಿನ ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ರೂಸರ್​​ನಲ್ಲಿದ್ದ ಇನ್ನುಳಿದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದರು.

ಮುಗಿಲು ಮುಟ್ಟಿದ ಆಕ್ರಂದನ

ಶಿರಾ ಆಸ್ಪತ್ರೆಯ ಶವಾಗಾರದಲ್ಲಿ 9 ಮಂದಿಯ ಮೃತದೇಹಗಳನ್ನು ಇರಿಸಲಾಗಿದೆ. ಬೆಂಗಳೂರನಿಂದ ಕ್ರೂಷರ್ ಚಾಲಕ ಕೃಷ್ಣ ಪತ್ನಿ ಶವಾಗಾರಕ್ಕೆ ಆಗಮಿಸಿದ್ದು, ಶವಾಗಾರದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಪತಿ ಕೃಷ್ಣನ ಮೃತದೇಹ ಕಂಡು ಪತ್ನಿ ಕಣ್ಣೀರು ಹಾಕಿದ್ದಾಳೆ.

ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಒಡವಟ್ಟಿ ಮೂಲದ ಕೃಷ್ಣ, ಕೂಲಿ ಕಾರ್ಮಿಕರನ್ನ ಕರೆದುಕೊಂಡು ರಾಯಚೂರಿನಿಂದ ಹೊರಟ್ಟಿದ್ದ. ನಿನ್ನೆ ಸ್ನೇಹಿತ ಜೊತೆ ಮಾತನಾಡಿದ್ದೆ ಇಂದು ಹೀಗೆ ಆಗಿದೆ ಎಂದ ಚಾಲಕನ ಸ್ನೇಹಿತ ಬಸವರಾಜ್ ಹೇಳಿಕೆ ನೀಡಿದ್ದಾರೆ.

Published On - 7:02 am, Thu, 25 August 22

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!