ಕಂದಾಯ ಇಲಾಖೆಯ ಯಡವಟ್ಟು: ಯುವಕನ ಅಂತ್ಯಸಂಸ್ಕಾರಕ್ಕೆ ಪರದಾಟ

ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮದ ಸರ್ವೆ ನಂ 43 ರಲ್ಲಿ ಸ್ಮಶಾನಕ್ಕಾಗಿ 20 ಗುಂಟೆ ಜಮೀನು ಮಂಜೂರು ಮಾಡಿದೆ. ಹಾಗೆಂದೇ, 2019 ರಲ್ಲಿ ಗ್ರಾಮ ಪಂಚಾಯತ್​ಗೆ ಭೂಮಿ ಹಸ್ತಾಂತರ ಮಾಡಲಾಗಿತ್ತು. ಆದರೆ ಅದೇ ಕಂದಾಯ ಇಲಾಖೆಯು ಸಸ್ಯಕ್ಷೇತ್ರಕ್ಕೆಂದು 1983 ರಲ್ಲಿಯೇ ಇದೇ ಜಮೀನನ್ನು ಅರಣ್ಯ ಇಲಾಖೆಗೆ ಮಂಜೂರು ಮಾಡಿರುವ ಮಾಹಿತಿಯೂ ಇದೆ.

ಕಂದಾಯ ಇಲಾಖೆಯ ಯಡವಟ್ಟು: ಯುವಕನ ಅಂತ್ಯಸಂಸ್ಕಾರಕ್ಕೆ ಪರದಾಟ
ಕಂದಾಯ ಇಲಾಖೆಯ ಯಡವಟ್ಟು: ಯುವಕನ ಅಂತ್ಯಸಂಸ್ಕಾರಕ್ಕೆ ಪರದಾಟ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಸಾಧು ಶ್ರೀನಾಥ್​

Updated on:Oct 27, 2023 | 12:55 PM

ತುಮಕೂರು, ಅಕ್ಟೋಬರ್​ 27: ಅನಾರೋಗ್ಯದಿಂದ ಸಾವನ್ನಪ್ಪಿದ ಸುರೇಶ್ ಎಂಬ ಯುವಕನ (Dalit Youth) ಅಂತ್ಯಸಂಸ್ಕಾರಕ್ಕೆ ಪರದಾಡುವ ಪ್ರಸಂಗ ರಾಜ್ಯ ಗೃಹ ಸಚಿವರ ಜಿಲ್ಲೆಯಲ್ಲಿ (karnataka home minister district) ನಡೆದಿದೆ. ಕಂದಾಯ ಇಲಾಖೆಯ ಯಡವಟ್ಟಿನಿಂದಾಗಿ ಈ ಪರಿಸ್ಥಿತಿ ಉದ್ಭವಿಸಿದೆ. ಸಸ್ಯಕ್ಷೇತ್ರದ ಭೂಮಿ ಸ್ಮಶಾನಕ್ಕೆ ನೀಡಿ ಕಂದಾಯ ಇಲಾಖೆ ಯಡವಟ್ಟು (negligence of Revenue Department) ಮಾಡಿದೆ. ಅಂದಹಾಗೆ ಇದು ಒಂದೆರಡು ವರ್ಷದ ಮಾತಲ್ಲ, ಸ್ಮಶಾನದ ಭೂಮಿಗಾಗಿ ಬೈಚಾಪುರ ದಲಿತ ಕುಟುಂಬಸ್ಥರು 40 ವರ್ಷದಿಂದ ಹೀಗೆ ಪರದಾಡುತ್ತಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮದಲ್ಲಿ ವಸ್ತುಸ್ಥಿತಿಯಲ್ಲಿ ಸಸ್ಯಕ್ಷೇತ್ರದ ಭೂಮಿಗಾಗಿ ಸಾಮಾಜಿಕ ವಲಯ ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ. ಹಾಗಾಗಿ ಇದು ಅರಣ್ಯ ಇಲಾಖೆ ಮತ್ತು ಗ್ರಾಮಸ್ಥರ ನಡುವೆ ಸಂಘರ್ಷವಾಗಿ ಮಾರ್ಪಟ್ಟಿದ್ದು, ಕಂದಾಯ ಇಲಾಖೆ ಬೇಜವಾಬ್ದಾರಿತನ ಇಲ್ಲಿ ಎದ್ದುಕಾಣುತ್ತಿದೆ.

Also Read: ಮೂರು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ, ಆದರೆ ಈಗ ಪತ್ನಿಗೆ ಚಿತ್ರಹಿಂಸೆ ನೀಡ್ತಿದ್ದಾನಂತೆ

ಬೈಚಾಪುರ ಗ್ರಾಮದ ದಲಿತ ಯುವಕ ಮೃತ ಸುರೇಶ್ (24) ಅಂತ್ಯಸಂಸ್ಕಾರಕ್ಕಾಗಿ ಪರದಾಟ ನಡೆಸಿದ್ದಾರೆ. ಗ್ರಾಮದ ಸರ್ವೆ ನಂ 43 ರಲ್ಲಿ ಸ್ಮಶಾನಕ್ಕಾಗಿ 20 ಗುಂಟೆ ಜಮೀನು ಮಂಜೂರು ಮಾಡಿದೆ. ಹಾಗೆಂದೇ, 2019 ರಲ್ಲಿ ಗ್ರಾಮ ಪಂಚಾಯತ್​ಗೆ ಭೂಮಿ ಹಸ್ತಾಂತರ ಮಾಡಲಾಗಿತ್ತು. ಆದರೆ ಅದೇ ಕಂದಾಯ ಇಲಾಖೆಯು ಸಸ್ಯಕ್ಷೇತ್ರಕ್ಕೆಂದು 1983 ರಲ್ಲಿಯೇ ಇದೇ ಜಮೀನನ್ನು ಅರಣ್ಯ ಇಲಾಖೆಗೆ ಮಂಜೂರು ಮಾಡಿರುವ ಮಾಹಿತಿಯೂ ಇದೆ.

ಹಾಗಾಗಿ ಸದ್ಯದ ವಿವಾದಗ್ರಸ್ತ ಆ ಭೂಮಿ ತಮಗೆ ಮಂಜೂರು ಆಗಿದೆ ಎಂದು ಸಾಮಾಜಿಕ ವಲಯ ಅರಣ್ಯ ಸಿಬ್ಬಂದಿ ಸದರಿ ಜಾಗವನ್ನು ಗ್ರಾಮಸ್ಥರಿಗೆ ಬಿಟ್ಟುಕೊಡಲು ತಯಾರಿಲ್ಲ. ಯುವಕ ಸುರೇಶ್ ಅಂತ್ಯಕ್ರಿಯೆ ಮಾಡಲು ಅರಣ್ಯ ಸಿಬ್ಬಂದಿ ಅವಕಾಶ ನೀಡಿಲ್ಲ. ಕಂದಾಯ ಇಲಾಖೆಯ ಆ ಯಡವಟ್ಟಿನಿಂದ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಸ್ಮಶಾನಕ್ಕೂ ಹಾಗೂ ಸಸ್ಯಕ್ಷೇತ್ರಕ್ಕೂ ಒಂದೇ ಜಾಗ ತೋರಿಸಿರುವ ಕಂದಾಯ ಇಲಾಖೆ ಜನರನ್ನು ಪರದಾಡುವಂತೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:51 pm, Fri, 27 October 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ