ಡಿಸಿಸಿ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಕೈಕಾಲು ಕಟ್ಟಿಹಾಕಿ ಹತ್ಯೆ; ಎಟಿಎಂನಲ್ಲಿದ್ದ ಹಣ ದೋಚಿ ಕಳ್ಳರು ಪರಾರಿ
ಸೆಕ್ಯೂರಿಟಿ ಗಾರ್ಡ್ ರಂಗಾಪುರ ಗ್ರಾಮದ ಸಿದ್ದಪ್ಪ(55)ನ ಹತ್ಯೆ ಬಳಿಕ, ಡಿಸಿಸಿ ಬ್ಯಾಂಕ್ (ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್) ಎಟಿಎಂನಲ್ಲಿದ್ದ ಹಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ತುಮಕೂರು: ಡಿಸಿಸಿ ಬ್ಯಾಂಕ್ (DCC Bank) ಸೆಕ್ಯೂರಿಟಿ ಗಾರ್ಡ್ ಕೈಕಾಲು ಕಟ್ಟಿಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ನಾಗವಲ್ಲಿ ಗ್ರಾಮದಲ್ಲಿ ನಡೆದಿದೆ. ಸೆಕ್ಯೂರಿಟಿ ಗಾರ್ಡ್ (Security Guard) ರಂಗಾಪುರ ಗ್ರಾಮದ ಸಿದ್ದಪ್ಪ(55)ನ ಹತ್ಯೆ ಬಳಿಕ, ಡಿಸಿಸಿ ಬ್ಯಾಂಕ್ (ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್) ಎಟಿಎಂನಲ್ಲಿದ್ದ ಹಣ ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಎಸ್ಪಿ ರಾಹುಲ್ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಂಗಳೂರು:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪಿ ಬಂಧನ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಆರೋಪಿ ಸಿಸಿಬಿ ಪೊಲೀಸರ ಕಾರ್ಯಾಚರಣೆ ವೇಳೆ ಸೆರೆ ಸಿಕ್ಕಿದ್ದಾನೆ. ಸಿಸಿಬಿ ಪೊಲೀಸರು ಟಿ ಟ್ವೆಂಟಿ ಕ್ರಿಕೆಟ್ ಫೈನಲ್ ಪಂದ್ಯದ ಜೂಜಾಟ ಆಡುತ್ತಿದ್ದ ಹೇಮಂತ್ ನನ್ನು ಬಂಧಿಸಿದ್ದಾರೆ. ಬಂಧಿತನಿಂದ 6 ಲಕ್ಷ ನಗದು ಹಾಗೂ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಜಯನಗರದ ಆರ್ ಪಿಸಿ ಲೇಔಟ್ ಬಳಿ ಮೊಬೈಲ್ ಮೂಲಕ ಹಣವನ್ನು ಪಣವಾಗಿ ಕಟ್ಟಿಸಿಕೊಂಡು ಆಡಿಸುತ್ತಿದ್ದ ಆರೋಪಿ ಸದ್ಯ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು: ರೈತರ ಹೊಲದಲ್ಲಿ ಪಂಪಸೆಟ್ ಕಳ್ಳತನ ಮಾಡುತ್ತಿದ್ದವರು ಲಾಕ್ ರೈತರ ಹೊಲದಲ್ಲಿ ಪಂಪ್‌ಸೆಟ್ ಕಳ್ಳತನ ಮಾಡುವಾಗ ರೆಡ್‌ಹ್ಯಾಂಡಾಗಿ ಕಳ್ಳರು ಗ್ರಾಮಸ್ಥರ ಬಳಿ ಸಿಕ್ಕಿ ಹಾಕಿಕೊಂಡಿದ್ದಾರೆ. ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ನಾಗಲದಿನ್ನಿ ಗ್ರಾಮದಲ್ಲಿ ಇಬ್ಬರು ಕಳ್ಳರನ್ನು ಹಿಡಿದು ಗ್ರಾಮಸ್ಥರು ಪೊಲೀಸರಿಗೊಪ್ಪಿಸಿದ್ದಾರೆ. ಈ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ: ಅಡಿಕೆ ಕಳ್ಳರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ತೇಜಸ್ವಿ ಪಟೇಲ್ ದಾವಣಗೆರೆ ಜಿಲ್ಲೆಯಲ್ಲಿ ಅಡಿಕೆ ಕಳ್ಳತನ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಅಡಿಕೆ ಕಳ್ಳರ ವಿರುದ್ಧ ಕ್ರಮಕ್ಕೆ ರೈತ ಮುಖಂಡ ತೇಜಸ್ವಿ ಪಟೇಲ್ ಆಗ್ರಹಿಸಿದ್ದಾರೆ. ಕ್ವಿಂಟಾಲ್ ಅಡಕೆ 50 ಸಾವಿರ ರೂಪಾಯಿ ಗಡಿ ದಾಟಿದ ಹಿನ್ನೆಲೆ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ಮಾಯಕೊಂಡ ಸಂತೆಬೆನ್ನೂರು ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಹೆಚ್ಚಾಗಿದೆ.
ಇದನ್ನೂ ಓದಿ: ಮನೆ, ಉದ್ಯೋಗ ಕೊಟ್ಟಿದ್ದ ಸಹಾಯಕ ಪ್ರಾಧ್ಯಾಪಕನ ಪತ್ನಿಯನ್ನೇ ಕೊಲೆ ಮಾಡಿದ ಕಾರು ಚಾಲಕ !
ಬೀದರ್: ತಲೆಗೆ ಹಾಗೂ ಮರ್ಮಾಂಗಕ್ಕೆ ಕಲ್ಲಿನಿಂದ ಜಜ್ಜಿ ಪ್ರಾಥಮಿಕ ಶಾಲೆಯ ಶಿಕ್ಷಕನ ಕೊಲೆ
Published On - 1:12 pm, Mon, 15 November 21