ರಾಜಕಾಲುವೆಯಲ್ಲಿ ಕೊಚ್ಚಿಹೋಗಿದ್ದ ಆಟೋ ಚಾಲಕ ಶವ ಪತ್ತೆ: ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡುವಂತೆ ಗೃಹ ಸಚಿವ ಜ್ಞಾನೇಂದ್ರ ಆದೇಶ
ಅಮ್ಜದ್ ಖಾನ್ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಡಿಸಿಗೆ ಆರಗ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ನಿರ್ದೇಶನ ನೀಡಿದ್ದಾರೆ.
ತುಮಕೂರು: ಕಳೆದ ಎರಡು ದಿನಗಳ ಹಿಂದೆ ರಾಜಕಾಲುವೆಯಲ್ಲಿ ಕೊಚ್ಚಿಹೋಗಿದ್ದ ಆಟೋ ಚಾಲಕನ ಶವ ಪತ್ತೆಯಾಗಿದೆ. ತುಮಕೂರಿನ ಭೀಮಸಂದ್ರ ಬಳಿ ಅಮ್ಜದ್(45) ಮೃತದೇಹ ಸಿಕ್ಕಿದೆ. ಎನ್ಡಿಆರ್ಎಫ್ ತಂಡ 2 ದಿನದಿಂದ ಕಾರ್ಯಾಚರಣೆ ನಡೆಸುತ್ತಿತ್ತು. ಸದ್ಯ ಈಗ ಮೃತ ದೇಹ ಪತ್ತೆಯಾಗಿದೆ.
ಶನಿವಾರ ಸುರಿದ ಭಾರಿ ಮಳೆಯಿಂದಾಗಿ ರಾಜಾಕಾಲುವೆ ತುಂಬಿ ಹರಿಯುತ್ತಿತ್ತು. ಹರಿಯುವ ನೀರನ್ನ ನೋಡಲು ಹೋಗಿದ್ದಾಗ ಆಟೋ ಚಾಲಕ ಅಮ್ಜದ್ ಕೊಚ್ಚಿಹೋಗಿದ್ದರು. ತಿಲಕ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಘಟನೆ ಬಳಿಕ ತುಮಕೂರು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದರು. ಎನ್ಡಿಆರ್ಎಫ್ ತಂಡ ಕಾರ್ಯಾಚರಣೆ ನಡೆಸುತ್ತಿತ್ತು. ಸದ್ಯ ಸತತ 2 ದಿನಗಳ ಕಾರ್ಯಾಚರಣೆ ಬಳಿಕ ಅಮ್ಜದ್ ಮೃತ ದೇಹ ಭೀಮಸಂದ್ರ ಬಳಿ ಪತ್ತೆಯಾಗಿದೆ.
ಅಮ್ಜದ್ ಖಾನ್ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ
ಇನ್ನು ಅಮ್ಜದ್ ಖಾನ್ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಡಿಸಿಗೆ ಆರಗ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ನಿರ್ದೇಶನ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಕೊಚ್ಚಿ ಹೋದ ಬಾಲಕಿ ಇನ್ನೂ ಸಿಕ್ಕಿಲ್ಲ ಜುಲೈ 4ರಂದು ಚಿಕ್ಕಮಗಳೂರು (Chikkamagaluru) ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ಶಾಲೆಯಿಂದ (School) ಅಣ್ಣನ (Brother) ಜೊತೆ ಮನೆಗೆ ವಾಪಸ್ಸಾಗುವಾಗ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಳು. ಬಾಲಕಿಗಾಗಿ ತೀವ್ರ ಶೋಧ ನಡೆಯುತ್ತಿದ್ದು ಇನ್ನೂ ಕೂಡ ಬಾಲಕಿ ಪತ್ತೆಯಾಗಿಲ್ಲ. ಹೀಗಾಗಿ ಶೋಧ ಕಾರ್ಯ ಮುಂದುವರೆದಿದೆ. ಬಾಲಕಿಯ ಶೋಧ ಕಾರ್ಯದಲ್ಲಿ ಅಗ್ನಿಶಾಮಕ ದಳ, ಧರ್ಮಸ್ಥಳ ಶೌರ್ಯ ವಿಪತ್ತು ಪಡೆಯ ಸಿಬ್ಬಂದಿ ಭಾಗಿಯಾಗಿದ್ದಾರೆ.
Published On - 5:03 pm, Mon, 18 July 22