Tumkur: ಪಾವಗಡ ಸೋಲಾರ್ ಪಾರ್ಕ್ ವಿಸ್ತರಣೆಗೆ ನಿರ್ಧಾರ: ಡಿಸಿಎಂ ಡಿಕೆ ಶಿವಕುಮಾರ್
Tumakuru News: ಪಾವಗಡ ತಾಲೂಕಿನ ತಿರುಮಣಿಯ ಸೋಲಾರ್ ಪಾರ್ಕ್ 10 ಸಾವಿರ ಎಕರೆಗೆ ವಿಸ್ತರಿಸಲು ನಿರ್ಧಾರ ಮಾಡಿದ್ದೇವೆ. ರೈತರು ಮುಂದೆ ಬಂದರೆ ವಿಸ್ತರಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ತುಮಕೂರು: ಪಾವಗಡ ತಾಲೂಕಿನ ತಿರುಮಣಿಯ ಸೋಲಾರ್ ಪಾರ್ಕ್ (Solar Park) 10 ಸಾವಿರ ಎಕರೆಗೆ ವಿಸ್ತರಿಸಲು ನಿರ್ಧಾರ ಮಾಡಿದ್ದೇವೆ. ರೈತರು ಮುಂದೆ ಬಂದರೆ ವಿಸ್ತರಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಸೋಲಾರ್ಪಾರ್ಕ್ ಬಳಿ ಮಾತನಾಡಿದ ಅವರು, ಸೋಲಾರ್ ಪಾರ್ಕ್ 10 ಸಾವಿರ ಎಕರೆಗೆ ವಿಸ್ತರಿಸಲು ನಿರ್ಧಾರ ಮಾಡಿರುವುದಾಗಿ ತಿಳಿಸಿದರು.
ನಾನು ಮತ್ತು ಇಂಧನ ಸಚಿವ ಕೆಜೆ ಜಾರ್ಜ್ ಅವರು ಹೆಲಿಕಾಪ್ಟರ್ ಮೂಲಕ ಸೋಲಾರ್ ಪಾರ್ಕ್ ವೀಕ್ಷಣೆ ಮಾಡಿದ್ದೇವೆ. ಸೋಲಾರ್ ಪಾರ್ಕ್ಗೆ ಭೂಮಿ ನೀಡಿದ ರೈತರಿಗೆ ಸಮಾಧಾನವಿದೆ. ಅಗ್ರಿಮೆಂಟ್ನಂತೆ ಜಮೀನು ನೀಡಿದ ರೈತರ ಖಾತೆಗೆ ಹಣ ಹೋಗುತ್ತಿದೆ, ಪ್ರತಿ ವರ್ಷ 25 ಸಾವಿರ ಬಾಡಿಗೆ ಪಡೆಯುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಇದನ್ನೂ ಓದಿ: ಕರ್ನಾಟಕ ಸರ್ಕಾರ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರ: ಕುಮಾರಸ್ವಾಮಿ
ನಮ್ಮ ಸೋಲಾರ್ ಪಾರ್ಕ್ ವಿಶ್ವದಲ್ಲೇ ನಂಬರ್ 1 ಇತ್ತು, ಈಗ ರಾಜಸ್ಥಾನದ ನಡುವೆ ಪೈಪೋಟಿಯಿದೆ. 10 ಸಾವಿರ ಎಕರೆ ವಿಸ್ತರಣೆ ಮಾಡಲು ನಿರ್ಧಾರ ಮಾಡಿದ್ದೇವೆ. ಹಿಂದಿನ ನಿಯಮದಂತೆ ರೈತರು ಮುಂದೆ ಬಂದರೆ ಸೋಲಾರ್ ಪಾರ್ಕ್ ವಿಸ್ತರಣೆ ಮಾಡುತ್ತೇವೆ. ರಾಜ್ಯದ ಉದ್ದಗಲಕ್ಕೂ ಕುಸುಮ ಯೋಜನೆ ಮಾಡುತ್ತಿದ್ದೇವೆ. ರೈತರ ಪಂಪ್ ಸೆಟ್‌ಗೆ ಅವರೇ ವಿದ್ಯುತ್ ಉತ್ಪಾದನೆ ಮಾಡಿಕೊಳ್ಳಲು ಯೋಜನೆ ರೂಪಿಸಿದ್ದೇವೆ ಎಂದರು.
ಬಿಬಿಪಿಎಂ ಸಭೆಗೂ ಸುರ್ಜೇವಾಲಗೂ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಬಿಬಿಎಂಪಿ ಸಭೆಯಲ್ಲಿ ಸುರ್ಜೇವಾಲ ಕಾಣಿಸಿಕೊಂಡ ವಿಚಾರವಾಗಿ ಮಾತನಾಡಿದ ಡಿಕೆ ಶಿವಕುಮಾರ್, ಯಾರು ಯಾರಿಗೆ ಬೇಕಾದರೂ ದೂರು ನೀಡಲಿ. ನಾನು ಸಿಟಿ ರೌಂಡ್ನಲ್ಲಿ ಇದ್ದೆ. ನನ್ನನ್ನು ಕರೆದುಕೊಂಡು ಹೋಗಲು ಅವರು ಬಂದಿದ್ದರು. ಬಿಬಿಪಿಎಂ ಸಭೆಗೂ ಸುರ್ಜೇವಾಲಗೂ ಸಂಬಂಧವಿಲ್ಲ. ನಾನು ಯಾವುದೇ ಸಭೆ ನಡೆಸಿಲ್ಲ. ಯಾರಿಗೆ ಬೇಕಾದರೂ ದೂರು ನೀಡಲಿ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:50 pm, Wed, 14 June 23