AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ 11 ಮಂಗಗಳ ನಿಗೂಢ ಸಾವು! ವಿಷಪ್ರಾಶನ ಮಾಡಿಸಿರುವ ಶಂಕೆ

ತುಮಕೂರಿನ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ವಿಷ ಪ್ರಾಶನದಿಂದಲೇ ಈ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಅರಣ್ಯಾಧಿಕಾರಿಗಳು ಸ್ಥಳೀಯರ ಮಾಹಿತಿ ಆಧರಿಸಿ ನಡೆಸಿದ ಶೋಧ ಕಾರ್ಯದಲ್ಲಿ ಎರಡು ದಿನಗಳಲ್ಲಿ 9 ಮಂಗಗಳು ಹಾಗೂ 2 ಲಂಗೂರ್‌ಗಳ ಮೃತದೇಹ ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆಯಲ್ಲಿ ಕಾಯಿಲೆ ಇಲ್ಲವೆಂದು ತಿಳಿದುಬಂದಿದ್ದು, ಹೆಚ್ಚಿನ ತನಿಖೆಗಾಗಿ ಮಾದರಿಗಳನ್ನು ಬೆಂಗಳೂರಿಗೆ ರವಾನಿಸಲಾಗಿದೆ.

ತುಮಕೂರಿನಲ್ಲಿ 11 ಮಂಗಗಳ ನಿಗೂಢ ಸಾವು! ವಿಷಪ್ರಾಶನ ಮಾಡಿಸಿರುವ ಶಂಕೆ
ತುಮಕೂರಿನಲ್ಲಿ 11 ಮಂಗಗಳ ನಿಗೂಢ ಸಾವು!
Jagadish PB
| Edited By: |

Updated on: Jan 05, 2026 | 8:44 AM

Share

ತುಮಕೂರು, ಜನವರಿ 05: ಒಂದು ತಿಂಗಳ ಹಿಂದೆಯಷ್ಟೇ ಬೆಳಗಾವಿಯಲ್ಲಿ 30 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿರುವುದು ಆತಂಕ ಮೂಡಿಸಿತ್ತು. ಇದೀಗ ತುಮಕೂರಿನಲ್ಲಿಯೂ ಅಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ. ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಕೇವಲ ಎರಡು ದಿನಗಳಲ್ಲಿ 11 ಮಂಗಗಳು ನಿಗೂಢವಾಗಿ ಮೃತಪಟ್ಟಿದ್ದು, ವಿಷಪ್ರಾಶನವಾಗಿರುವ ಶಂಕೆ ವ್ಯಕ್ತವಾಗಿದೆ.

ಮಂಗಗಳು ಯಾವುದೇ ಸೋಂಕಿನಿಂದ ಮೃತಪಟ್ಟಿಲ್ಲವೆಂಬುದು ದೃಢ

ದೇವರಾಯನದುರ್ಗ ಹಾಗೂ ದುರ್ಗದ ಹಳ್ಳಿ ನಡುವಿನ ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನಗಳಲ್ಲಿ ಮಂಗಗಳ ಮೃತದೇಹಗಳು ಪತ್ತೆಯಾಗಿವೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಒಂದರ ನಂತರ ಮತ್ತೊಂದರಂತೆ ಮಂಗಗಳ ಮೃತದೇಹಗಳು ಪತ್ತೆ ಮಾಡಿದ್ದಾರೆ. ಅರಣ್ಯ ಪ್ರದೇಶದಲ್ಲಿ ನಡೆಸಿದ ಶೋಧ ಕಾರ್ಯದ ವೇಳೆ ಮೊದಲ ದಿನ ಏಳು ಮಂಗಗಳು, ಎರಡನೇ ದಿನ ನಾಲ್ಕು ಮಂಗಗಳ ಮೃತದೇಹಗಳು ಪತ್ತೆಯಾಗಿವೆ. ಪತ್ತೆಯಾದ ೧೧ ಮೃತದೇಹಗಳಲ್ಲಿ ಒಂಬತ್ತು ಸಾಮಾನ್ಯ ಮಂಗಗಳು ಹಾಗೂ ಎರಡು ಲಂಗೂರಗಳು ಎನ್ನಲಾಗಿದೆ. ಪ್ರಾಥಮಿಕ ಪರಿಶೀಲನೆಯಲ್ಲಿ ಮಂಗಗಳು ಯಾವುದೇ ಸೋಂಕು ಅಥವಾ ಕಾಯಿಲೆಯಿಂದ ಮೃತಪಟ್ಟಿಲ್ಲ ಎಂಬುದು ತಿಳಿದುಬಂದಿದೆ.

ಇದನ್ನೂ ಓದಿ ಕೃಷ್ಣ ಮೃಗಗಳ ಸರಣಿ ಸಾವು: ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗದ ಭೀತಿ

ಬೆಂಗಳೂರಿನ ಪಶು ವೈದ್ಯಕೀಯ ವಿದ್ಯಾಲಯಕ್ಕೆ ಸ್ಯಾಂಪಲ್ ರವಾನೆ

ಅರಣ್ಯಾಧಿಕಾರಿಗಳು ಸಾವಿನ ಕಾರಣ ಪತ್ತೆ ಹಚ್ಚಲು ಮುಂದಾಗಿ, ಊರ್ಡಿಗೆರೆಯ ಪಶು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಪರೀಕ್ಷೆಯ ವೇಳೆ ಮಂಗಗಳ ಕರುಳಿನಲ್ಲಿ ಅನ್ನ ಪತ್ತೆಯಾಗಿದ್ದು, ವಿಷ ಪ್ರಾಶನದಿಂದ ಸಾವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇದನ್ನು ದೃಢಪಡಿಸಲು ಕೆಲವು ಮಾದರಿಗಳನ್ನು ಬೆಂಗಳೂರಿನ ಪಶು ವೈದ್ಯಕೀಯ ವಿದ್ಯಾಲಯ (IAH, VB)ಕ್ಕೆ ರವಾನೆ ಮಾಡಲಾಗಿದೆ. ಈ ಘಟನೆ ಸಂಬಂಧ ತುಮಕೂರು ಪ್ರಾದೇಶಿಕ ವಲಯದ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ಮಂಗಗಳ ಸಾವಿನ ಹಿಂದಿರುವ ಕಾರಣ ಹಾಗೂ ದುಷ್ಕೃತ್ಯವಿದೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್