AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂಜು ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ವಿಶೇಷ ಚೇತನ ವ್ಯಕ್ತಿ ಮೇಲೆ ಪೊಲೀಸರಿಂದ ಹಲ್ಲೆ ಆರೋಪ

ಜೂಜಿನ ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ವಿಶೇಷಚೇತನ ರಘು ಎಂಬುವವರ ಮೇಲೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಠಾಣೆಯ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಘು ಅವರ ತಾಯಿ ದೂರು ದಾಖಲಿಸಿದ್ದು, ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಹಲ್ಲೆಯಲ್ಲಿ ರಘು ಅವರ ಕಾಲು ಮುರಿದಿದೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಲ್ಲಿ ಕೂಡ ಮಹಿಳೆಯೊಬ್ಬಳಿಗೆ ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಮಾಡಲಾಗಿದೆ.

ಜೂಜು ಅಡ್ಡೆ ಬಗ್ಗೆ ಮಾಹಿತಿ ನೀಡಿದ್ದಕ್ಕೆ ವಿಶೇಷ ಚೇತನ ವ್ಯಕ್ತಿ ಮೇಲೆ ಪೊಲೀಸರಿಂದ ಹಲ್ಲೆ ಆರೋಪ
ಹಲ್ಲೆಗೊಳಗಾದ ರಘು
Jagadisha B
| Updated By: ವಿವೇಕ ಬಿರಾದಾರ|

Updated on:Jul 15, 2025 | 3:48 PM

Share

ತುಮಕೂರು, ಜುಲೈ 15: ಜೂಜು ಅಡ್ಡೆ ಬಗ್ಗೆ ಮೇಲಧಿಕಾರಿಗೆ ಮಾಹಿತಿ ನೀಡಿದ್ದಕ್ಕೆ ತಿಪಟೂರು (Tipatur) ತಾಲೂಕಿನ ಹೊನ್ನವಳ್ಳಿ ಠಾಣೆಯ ಪೊಲೀಸರು (Police) ವಿಶೇಷ ಚೇತನ ವ್ಯಕ್ತಿಯ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ತುಮಕೂರು (Tumakur) ಜಿಲ್ಲೆಯ ತಿಪಟೂರು ತಾಲೂಕಿನ ಚೌಲಿಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ​ಚೌಲಿಹಳ್ಳಿ ಗ್ರಾಮದಲ್ಲಿ ನಡೆಯುತ್ತಿದ್ದ ಅಕ್ರಮ ಜೂಜಾಟದ ಬಗ್ಗೆ ರಘು ಅವರು ತಿಪಟೂರು ಸರ್ಕಲ್​ ಇನ್ಸ್​ಪೆಕ್ಟರ್​ಗೆ ಮಾಹಿತಿ ನೀಡಿದ್ದರು. ಈ ಕಾರಣದಿಂದ ಹೊನ್ನವಳ್ಳಿ ಠಾಣೆ ಎಸ್​ಐ ರಾಜೇಶ್​, ಸಿಬ್ಬಂದಿ ಯೋಗೀಶ್ ವಿಶೇಷ ಚೇತನರಾದ ರಘು ಅವರ ಮನೆಗೆ ನುಗ್ಗಿ ಬೂಟ್​​ ಕಾಲಿನಿಂದ ಒದ್ದು, ನಿಂದಿಸಿ ಹಲ್ಲೆ ಮಾಡಿದ್ದಾರೆ.

ಈ ವೇಳೆ ತಡೆಯಲು ಬಂದ ಕುಟುಂಬದ ಮಹಿಳೆಯರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ರಘು ತಾಯಿ ತುಮಕೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕೆ.ವಿ.ಅಶೋಕ್​ ಅವರಿಗೆ ದೂರು ನೀಡಿದ್ದಾರೆ. ಎಸ್​ಐ ರಾಜೇಶ್​, ಸಿಬ್ಬಂದಿ ಯೋಗೀಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೊಲೀಸರ ಹಲ್ಲೆಯಿಂದ ರಘು ಬಲಗಾಲು‌ ಮುರಿದಿದ್ದು, ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಣ್ಣಿಗೆ ಕಾರದಪುಡಿ ಎರಚಿ ಮಹಿಳೆ ಮೇಲೆ ಹಲ್ಲೆ

ಹುಬ್ಬಳ್ಳಿ: ಮಹಿಳೆಯ ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಮಾಡಿರುವ ಘಟನೆ ಮಂಟೂರ್ ರಸ್ತೆಯ ಮೌಲಾಲಿ ದರ್ಗಾ ಬಳಿ ನಡೆದಿದೆ. ಮಹಿಳೆ ಮಾವುಬಿ ಬಿಜಾಪುರ್ ಹಲ್ಲೆಗೊಳಗಾದವರು. ಇಂದು (ಜು.15) ಬೆಳಗ್ಗೆ ಮಾವುಬಿ ಬಿಜಾಪುರ್ ಅವರು ತಮ್ಮ ತಾಯಿಯ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಾಸ್ಕ್ ಧರಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತರು ಮಾವುಬಿ ಬಿಜಾಪುರ್ ಅವರ ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ
Image
ಪತಿಯನ್ನೇ ಕೊಂದ ಪತ್ನಿ: ಕೊಲೆ ಸುಳಿವು ಕೊಟ್ಟ ಖಾರದಪುಡಿ
Image
ಪ್ರೇಮಿಗಳ ನಡುವೆ ಕಿರಿಕ್: ಆ ವಿಡಿಯೋದಿಂದಲೇ ದುರಂತ ಸಾವುಕಂಡ ಪ್ರೇಯಸಿ
Image
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
Image
ಜೈಲಿನಿಂದ ಹೊರಬಂದ ಎರಡೇ ದಿನದಲ್ಲಿ ಮತ್ತೆ ಕಂಬಿ ಹಿಂದೆ ಹೋದ 25ರ ಯುವಕ

ಇದನ್ನೂ ಓದಿ: ಪತ್ನಿಯ ಕುತ್ತಿಗೆ, ಮುಖಕ್ಕೆ 20 ಕ್ಕೂ ಹೆಚ್ಚು ಬಾರಿ ಇರಿದು ಕೊಂದ ಪತಿ

ಸಾಕ್ಷಿ ಹೇಳಲು ಮುಂದಾಗಿದ್ದಕ್ಕೆ ಹಲ್ಲೆ?

ಕಳೆದ ವಾರ ಹುಬ್ಬಳ್ಳಿಯಲ್ಲಿ ರೌಡಿಗಳ ಗ್ಯಾಂಗ್ ವಾರ್ ನಡೆದಿತ್ತು. ಗ್ಯಾಂಗ್​ ವಾರ್​ ನಡೆದ ಸ್ಥಳದಲ್ಲಿ ಮಾವುಬಿ ಬಿಜಾಪುರ್ ಇದ್ದರು. ಗಲಾಟೆ ವೇಳೆ ಮಾವುಬಿ ಬಿಜಾಪುರ್ ಅವರ ಕಾಲಿಗೆ ಕಲ್ಲು ತಗುಲಿತ್ತು. ಈ ಹಿನ್ನೆಲೆಯಲ್ಲಿ ಮಾವುಬಿ ಬಿಜಾಪುರ್ ಅವರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಮುಂದಾಗಿದ್ದರು.

ಆಗ ಪೊಲೀಸರು, ಗಲಾಟೆಗೆ ಸಾಕ್ಷಿಯಾಗುವಂತೆ ಹೇಳಿದ್ದರು. ಇದೇ ಕಾರಣದಿಂದ ಮಾವುಬಿ ಬಿಜಾಪುರ್ ಅವರ ಮೇಲೆ ಹಲ್ಲೆ ನಡೆದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಗಾಯಗೊಂಡ ಮಾವುಬಿ ಬಿಜಾಪುರ್ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Tue, 15 July 25