AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ಸರ್ಕಾರಿ ವೈದ್ಯರ ನಿರ್ಲಕ್ಷ್ಯ ಆರೋಪ; ತಾಯಿ, ನವಜಾತ ಶಿಶು ಸಾವು

ಮೃತ ಕಮಲಮ್ಮ ಹೆರಿಗೆಗೆಂದು ಹೊಸಕೆರೆ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಯಾವ ವೈದ್ಯರೂ ಇಲ್ಲದ ಕಾರಣ ಕುಟುಂಬಸ್ಥರು ಪರದಾಡಿದ್ದಾರೆ. ಬಳಿಕ ನರ್ಸ್ಗಳೇ ಚಿಕಿತ್ಸೆ ಕೊಟ್ಟಿದ್ದಾರೆ. ನರ್ಸ್ಗಳ ಚಿಕಿತ್ಸೆ ಬಳಿಕ ನವಜಾತ ಶಿಶು ಮೃತಪಟ್ಟಿದ್ದು ತಾಯಿ ಸ್ಥಿತಿ ಚಿಂತಾಜನಕವಾಗಿದೆ.

ತುಮಕೂರಿನಲ್ಲಿ ಸರ್ಕಾರಿ ವೈದ್ಯರ ನಿರ್ಲಕ್ಷ್ಯ ಆರೋಪ; ತಾಯಿ, ನವಜಾತ ಶಿಶು ಸಾವು
ತುಮಕೂರಿನಲ್ಲಿ ಸರ್ಕಾರಿ ವೈದ್ಯರ ನಿರ್ಲಕ್ಷ್ಯ ಆರೋಪ; ತಾಯಿ, ನವಜಾತ ಶಿಶು ಸಾವು
TV9 Web
| Edited By: |

Updated on: Feb 24, 2022 | 1:47 PM

Share

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಹೊಸಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ. ಹೊಸಕೆರೆ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಎದುರಾಗಿದ್ದು ಸರ್ಕಾರಿ ಆಸ್ಪತ್ರೆ ವೈದ್ಯರ ಎಡವಟ್ಟಿನಿಂದ ತಾಯಿ-ಮಗು ಬಲಿಯಾದ ಘಟನೆ ನಡೆದಿದೆ. ಮಧುಗಿರಿ ತಾಲೂಕಿನ‌ ಬ್ರಹ್ಮದೇವರಹಳ್ಳಿ ಗ್ರಾಮದ ನಿವಾಸಿ ಕಮಲಮ್ಮ ಮತ್ತು ನವಜಾತ ಶಿಶು ಮೃತಪಟ್ಟಿದೆ.

ಮೃತ ಕಮಲಮ್ಮ ಹೆರಿಗೆಗೆಂದು ಹೊಸಕೆರೆ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಆಸ್ಪತ್ರೆಯಲ್ಲಿ ಯಾವ ವೈದ್ಯರೂ ಇಲ್ಲದ ಕಾರಣ ಕುಟುಂಬಸ್ಥರು ಪರದಾಡಿದ್ದಾರೆ. ಬಳಿಕ ನರ್ಸ್ಗಳೇ ಚಿಕಿತ್ಸೆ ಕೊಟ್ಟಿದ್ದಾರೆ. ನರ್ಸ್ಗಳ ಚಿಕಿತ್ಸೆ ಬಳಿಕ ನವಜಾತ ಶಿಶು ಮೃತಪಟ್ಟಿದ್ದು ತಾಯಿ ಸ್ಥಿತಿ ಚಿಂತಾಜನಕವಾಗಿದೆ. ಈ ವೇಳೆ ತಾಯಿಯನ್ನು ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಇಲ್ಲದೇ ಕಮಲಮ್ಮ ಕುಟುಂಬಸ್ಥರು ಒದ್ದಾಡಿದ್ದಾರೆ. ಕೊನೆಗೆ ಕಾರಿನಲ್ಲಿ ತಾಲೂಕು ಆಸ್ಪತ್ರೆಗೆ ಕರಿದೊಯ್ಯುವ ಮಾರ್ಗ ಮಧ್ಯೆ ಕಮಲಮ್ಮ ಪ್ರಾಣ ಬಿಟ್ಟಿದ್ದಾರೆ. ಹೊಸಕೆರೆ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಆರೋಪ ಕೇಳಿ ಬಂದಿದ್ದು ವೈದ್ಯರ ನಿರ್ಲಕ್ಷ್ಯಕ್ಕೆ ಹಸುಗೂಸು ಹಾಗೂ ತಾಯಿ ಬಲಿಯಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ವೈದ್ಯರ ಹಾಗೂ ಸಿಬ್ಬಂದಿ ವಿರುದ್ಧ ಮೃತ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಸ್ಪತ್ರೆಯಲ್ಲಿ ಡಾಕ್ಟರೇ ಇರಲಿಲ್ಲ. ನರ್ಸ್ಗಳೇ ನಾರ್ಮಲ್ ಡಿಲೇವರಿ ಮಾಡ್ತೀನಿ ಅಂದ್ರು. ಆ ಮೇಲೆ ಮಗುನ ಹೊರಕ್ಕೆ ತೆಗೆದ್ರು. ಮಗು ಅಳ್ತಾ ಇರಲಿಲ್ಲ. ತಲೆಯಲ್ಲಿ ನೀರು ತುಂಬ್ಕೊಂಡಿದೆ ದೊಡ್ಡ ಆಸ್ಪತ್ರೆಗೆ ಕರ್ಕೊಂಡು ಹೋಗಿ ಅಂದ್ರು. ಆಂಬುಲೆನ್ಸ್ಗೆ ಫೋನ್ ಮಾಡುದ್ರೆ ಸರಿಯಾದ ಪ್ರತಿಕ್ರಿಯೆ ಇಲ್ಲ. ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ-ಮಗು ಪ್ರಾಣ ಬಿಟ್ಟಿದ್ದಾರೆ ಎಂದು ಮೃತ ಮಹಿಳೆಯ ಗಂಡ ಕಣೀರು ಹಾಕಿದ್ದಾರೆ.

ಇದನ್ನೂ ಓದಿ: 2022 March Bank Holidays: 2022ರ ಮಾರ್ಚ್​ ತಿಂಗಳಲ್ಲಿ ಬ್ಯಾಂಕ್​ಗಳಿಗೆ 13 ದಿನ ರಜಾ

ಮನುಷ್ಯ ಸಾಯುವಾಗ ಯಾವ ರೀತಿ ಅನುಭವ ಪಡೆಯುತ್ತಾನೆ ಎಂದು ಕಂಡುಹಿಡಿದ ವಿಜ್ಞಾನಿಗಳು: ಸಂಶೋಧನೆಯಲ್ಲಿ ಹೇಳಿದ್ದೇನು?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್