AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ಒಂದು 500 ರೂ. ನಕಲಿ ನೋಟಿನ ಬೆನ್ನುಬಿದ್ದ ಪೊಲೀಸರಿಗೆ ಬಯಲಾಯ್ತು ರಾಜ್ಯವ್ಯಾಪಿ ಖೋಟಾ ನೋಟಿನ ಬೃಹತ್ ಜಾಲ!

ತುಮಕೂರಿನ ಚಿಕ್ಕನಾಯಕನಹಳ್ಳಿಯಲ್ಲಿ ಸಿಗರೇಟ್ ಖರೀದಿಸಲು ನೀಡಿದ ಒಂದೇ ಒಂದು 500 ರೂಪಾಯಿ ನಕಲಿ ನೋಟಿನ ಸುಳಿವು ಹಿಡಿದ ಪೊಲೀಸರು, ರಾಜ್ಯವ್ಯಾಪಿ ಹರಡಿದ್ದ ಕಳ್ಳನೋಟು ದಂಧೆಯನ್ನು ಭೇದಿಸಿದ್ದಾರೆ. ಬೆಂಗಳೂರಿನಲ್ಲಿ ಮುದ್ರಣ ಮಾಡಿ, ಮೈಸೂರು ಹಾಗೂ ಇತರೆಡೆ ಮಾರಾಟ ಮತ್ತು ಚಲಾವಣೆ ಮಾಡುತ್ತಿದ್ದ ಆರು ಮಂದಿ ಖತರ್ನಾಕ್ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಚುರುಕುಗೊಂಡಿದೆ.

ಕೇವಲ ಒಂದು 500 ರೂ. ನಕಲಿ ನೋಟಿನ ಬೆನ್ನುಬಿದ್ದ ಪೊಲೀಸರಿಗೆ ಬಯಲಾಯ್ತು ರಾಜ್ಯವ್ಯಾಪಿ ಖೋಟಾ ನೋಟಿನ ಬೃಹತ್ ಜಾಲ!
ಕೇವಲ ಒಂದು 500 ರೂ. ನಕಲಿ ನೋಟಿನ ಬೆನ್ನುಬಿದ್ದ ಪೊಲೀಸರಿಗೆ ಬಯಲಾಯ್ತು ರಾಜ್ಯವ್ಯಾಪಿ ಖೋಟಾ ನೋಟಿನ ಬೃಹತ್ ಜಾಲ!
ಜಗದೀಶ ಬಿ.
| Edited By: |

Updated on: Jul 10, 2026 | 9:01 AM

Share

ಮುಖ್ಯಾಂಶಗಳು

  • ತುಮಕೂರಿನಲ್ಲಿ ಸಿಗರೇಟ್ ಖರೀದಿಸಲು ನೀಡಿದ ನಕಲಿ ನೋಟಿನಿಂದ ದೊಡ್ಡ ದಂಧೆ ಬಯಲು
  • ಬೆಂಗಳೂರಿನಲ್ಲಿ ನೋಟು ಮುದ್ರಿಸಿ ಮೈಸೂರಿನಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿದ ಪೊಲೀಸರು
  • ಕಳ್ಳನೋಟು ದಂಧೆಯಲ್ಲಿ ಭಾಗಿಯಾಗಿದ್ದ ಆರು ಮಂದಿ ಆರೋಪಿಗಳ ಬಂಧನ

ತುಮಕೂರು, ಜುಲೈ 10: ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪೊಲೀಸರು ಸಿನಿಮಾ ಕಥೆ ಹಾಗೂ ಕ್ರೈಂ ವೆಬ್ ಸೀರೀಸ್‌ಗಳನ್ನೂ ಮೀರಿಸುವಂತಹ ರಾಜ್ಯವ್ಯಾಪಿ ಕಾರ್ಯನಿರ್ವಹಿಸುತ್ತಿದ್ದ ಖೋಟಾ ನೋಟಿನ (Fake Note) ಬೃಹತ್ ಜಾಲವನ್ನು ಅತ್ಯಂತ ಚಾಣಾಕ್ಷತನದಿಂದ ಭೇದಿಸಿದ್ದಾರೆ. ಕೇವಲ ಒಂದೇ ಒಂದು 500 ರೂಪಾಯಿ ಮುಖಬೆಲೆಯ ನಕಲಿ ನೋಟಿನ ಸುಳಿವು ಬೆನ್ನತ್ತಿದ ಖಾಕಿ ಪಡೆ, ಬೆಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ನೆಟ್‌ವರ್ಕ್ ಹೊಂದಿದ್ದ ಮುದ್ರಣ, ಮಾರಾಟ ಮತ್ತು ಚಲಾವಣೆಯ ಪ್ರತ್ಯೇಕ ವ್ಯವಸ್ಥಿತ ಜಾಲವನ್ನು ಜಾಲಾಡಿ ಆರು ಮಂದಿ ಖತರ್ನಾಕ್ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ.

ಒಂದು ನೋಟಿನ ಸುಳಿವು; ಬಯಲಾಯ್ತು ಜಾಲ!

ಹುಳಿಯಾರಿನ ಅಂಗಡಿಯೊಂದರಲ್ಲಿ ಇಬ್ಬರು ಕಿಡಿಗೇಡಿಗಳು ಸಿಗರೇಟ್ ಖರೀದಿಸಿ 500 ರೂಪಾಯಿಯ ನಕಲಿ ನೋಟು ನೀಡಿ ಪರಾರಿಯಾಗಿದ್ದರು. ಅಂಗಡಿ ಮಾಲೀಕ ನೀಡಿದ ದೂರಿನ ಮೇರೆಗೆ ತನಿಖೆ ಆರಂಭಿಸಿದ ಹುಳಿಯೂರು ಮತ್ತು ಚಿಕ್ಕನಾಯಕನಹಳ್ಳಿ ಪೊಲೀಸರು, ಕೇವಲ ಒಂದೇ ಒಂದು ನೋಟಿನ ಸುಳಿವು ಹಿಡಿದು ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಮುದ್ರಣ, ಮಾರಾಟ ಮತ್ತು ಚಲಾವಣೆಯ ಪ್ರತ್ಯೇಕ ವ್ಯವಸ್ಥಿತ ಜಾಲ ಪತ್ತೆಯಾಗಿದೆ.

ಆರೋಪಿಗಳ ಕಾರ್ಯವೈಖರಿ

ಬಂಧಿತ ಆರು ಮಂದಿಯಲ್ಲಿ ಬೆಂಗಳೂರಿನ ರುದ್ರೇಶ್ ಎಂಬಾತ ನಕಲಿ ನೋಟುಗಳನ್ನು ಮುದ್ರಿಸುತ್ತಿದ್ದರೆ, ಮೈಸೂರಿನ ರವಿ ಅದನ್ನು ಮಾರಾಟ ಮಾಡುವ ಜವಾಬ್ದಾರಿ ಹೊತ್ತಿದ್ದ. ಅನಂತಪುರದ ಕುಬೇರಪ್ಪ ಹಾಗೂ ಹನುಮಂತಪ್ಪ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದರು. ಇವರಿಂದ ನೋಟು ಖರೀದಿಸುತ್ತಿದ್ದ ವೆಂಕಟೇಶ್ ಮತ್ತು ತಿಲಕ್ ಕುಮಾರ್ ಸಾರ್ವಜನಿಕರ ನಡುವೆ ಚಲಾವಣೆ ಮಾಡುತ್ತಿದ್ದರು ಎಂಬುದು ಕಾರ್ಯಾಚರಣೆ ವೇಳೆ ತಿಳಿದುಬಂದಿದೆ.

ಬಂಧಿತರಿಂದ ಸದ್ಯ 500 ರೂ. ಮುಖಬೆಲೆಯ 60ಕ್ಕೂ ಹೆಚ್ಚು ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ವೇಳೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ನೋಟು ಚಲಾವಣೆಯಾಗಿರುವ ಮಾಹಿತಿ ಲಭ್ಯವಾಗಿದ್ದು, ಇದರ ಹಿಂದೆ ಇರುವ ದೊಡ್ಡ ನೆಟ್‌ವರ್ಕ್ ಮತ್ತು ಇದರ ಸಂಪೂರ್ಣ ಬೇರು ಪತ್ತೆಹಚ್ಚಲು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ