AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

FIR: ಪ್ರಚೋದನಾಕಾರಿ ಭಾಷಣ ಮಾಡಿದ್ದ ಶರಣ ಪಂಪ್​ ವೇಲ್ ವಿರುದ್ಧ ಎಫ್ಐಆರ್​ ದಾಖಲು

ಪ್ರಚೋದನಕಾರಿ ಭಾಷಣ ಮಾಡಿದ್ದ ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಕಾರ್ಯದರ್ಶಿ ಶರಣ್ ಪಂಪ್​ವೆಲ್​ ವಿರುದ್ಧ ತುಮಕೂರು ಜಿಲ್ಲೆಯ ತಿಲಕ್​ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ.

FIR: ಪ್ರಚೋದನಾಕಾರಿ ಭಾಷಣ ಮಾಡಿದ್ದ ಶರಣ ಪಂಪ್​ ವೇಲ್ ವಿರುದ್ಧ ಎಫ್ಐಆರ್​ ದಾಖಲು
ಶರಣ್ ಪಂಪವೇಲ್ Image Credit source: daijiworld.com
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 01, 2023 | 4:05 PM

Share

ತುಮಕೂರು: ಪ್ರಚೋದನಕಾರಿ ಭಾಷಣ ಮಾಡಿದ್ದ ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಕಾರ್ಯದರ್ಶಿ ಶರಣ್ ಪಂಪ್​ವೆಲ್ (Sharan Pumpwell) ವಿರುದ್ಧ ಜಿಲ್ಲೆಯ ತಿಲಕ್​ಪಾರ್ಕ್​ ಪೊಲೀಸ್ ಠಾಣೆಯಲ್ಲಿ ಕಲಾಂ 157, ಸಿಆರ್ಪಿಸಿ (a)(b) ಅಡಿಯಲ್ಲಿ ಎಫ್​ಐಆರ್​ ದಾಖಲು ಮಾಡಲಾಗಿದೆ. ನಗರದ ಬಾರ್​ಲೈನ್​ ನಿವಾಸಿಯಾಗಿರುವ ಸೈಯದ್ ಬುರ್ಹಾನ್​ ಉದ್ದೀನ್​​ ಎನ್ನುವವರಿಂದ ದೂರು ನೀಡಿದಲಾಗಿದೆ. ಜ. 28ರಂದು ವಿಹೆಚ್​ಪಿ, ಬಜರಂಗದಳದಿಂದ ನಗರದಲ್ಲಿ ಶೌರ್ಯ ಸಂಚಲನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ್ದ, ಶರಣ್ ಪಂಪ್​ವೆಲ್ ಸಾರ್ವಜನಿಕ ವೇದಿಕೆಯಲ್ಲಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದರು. ಜಿಲ್ಲೆಯನ್ನು ಹಿಂದುತ್ವದ ಫ್ಯಾಕ್ಟರಿ ಮಾಡುತ್ತೇವೆ. ಗುಜರಾತ್ ಹತ್ಯಾಕಾಂಡವನ್ನು ಹಿಂದೂ ಪರಾಕ್ರಮ ಎಂದು ಹೊಗಳಿದ್ದರು. ಶರಣ್ ಭಾಷಣದಿಂದ ತುಮಕೂರಿನಲ್ಲಿ ಶಾಂತಿಭಂಗವಾಗಿ ಎಂದು ಆರೋಪಿಸಿದ್ದು, ಪ್ರಕರಣ ದಾಖಲಿಸಿಕೊಂಡು ತಿಲಕ್​ಪಾರ್ಕ್​ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದೆ.

ಶರಣ್ ಪಂಪ್​​ವೆಲ್​ನನ್ನು ಬಂಧಿಸುವಂತೆ ಫಾಜಿಲ್ ತಂದೆ ಆಗ್ರಹ 

ಇನ್ನು ಇತ್ತೀಚೆಗೆ ಬಿಜೆಪಿ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆಯಾಗಿದೆ ಎಂದು ಶರಣ್ ಪಂಪ್​​ವೆಲ್ ಇತ್ತೀಚೆಗೆ ಉಳ್ಳಾಲದಲ್ಲಿ ನಡೆದ ಶೌರ್ಯ ಯಾತ್ರೆಯಲ್ಲಿ ಹೇಳಿದ್ದರು. ಈ ವಿಚಾರವಾಗಿ ಫಾಜಿಲ್ ತಂದೆ ಉಮಾರ್ ಫಾರೂಕ್​ ಮಂಗಳೂರು ಕಮಿಷನರ್ ಶಶಿಕುಮಾರ್​ರನ್ನು ಭೇಟಿ ಮಾಡಿ, ಶರಣ್ ಪಂಪ್​ವೆಲ್​ನನ್ನು ಬಂಧಿಸಿ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದರು. ಬಳಿಕ ಮಾಧ್ಯಮದವರೊಂದಿ ಮಾತನಾಡಿ, ಮಗನ ಹತ್ಯೆ ಕೇಸ್​ನಲ್ಲಿ ಎಂಟು ಜನರನ್ನು ಬಂಧಿಸಿ ಕೋರ್ಟ್​ಗೆ ಚಾರ್ಜ್ ಶೀಟ್ ಹಾಕಲಾಗಿದೆ. ಪ್ರಕರಣದ ಸೂತ್ರಧಾರಿಗಳ ತನಿಖೆಗೆ ನಾನು ಮನವಿ ಮಾಡುತ್ತಲೇ ಇದ್ದೇನೆ. ಆದರೆ ಈವರೆಗೆ ತನಿಖಾಧಿಕಾರಿ ಸೂತ್ರಧಾರಿ ಯಾರೆಂದು ತನಿಖೆ ನಡೆಸಿಲ್ಲ. ಇದೀಗ ಬಜರಂಗದಳ ಮುಖಂಡ ಶರಣ್ ಪಂಪ್​ವೆಲ್ ನನ್ನ ಮಗನ ಹತ್ಯೆಯನ್ನು ಸಮರ್ಥಿಸಿದ್ದಾನೆ ಎಂದು ಉಮಾರ್ ಫಾರೂಕ್​ ಆರೋಪಿಸಿದ್ದರು.

ಇದನ್ನೂ ಓದಿ: ಪ್ರವೀಣ್​ ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆ ಎಂದಿದ್ದ ಶರಣ್​ ಪಂಪ್​​ವೆಲ್​ಗೆ ಸಂಕಷ್ಟ

ಶರಣ್ ಪಂಪ ವೆಲ್​ಗೆ ಸವಾಲ್​ ಹಾಕಿದ ಫಾಜಿಲ್ ತಂದೆ  

ನನ್ನ ಮಗ ಸತ್ತಾಗ ಸರಕಾರದಿಂದ ಒಬ್ಬರೂ ಬಂದಿಲ್ಲ ಸರಕಾರದ ಮೇಲೆ ನಂಬಿಕೆ ಇಲ್ಲ. ಈ ಪ್ರಕರಣದಲ್ಲಿ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ. ಶರಣ್ ಪಂಪ್​ವೆಲ್ ಅಪ್ಪನಿಗೆ ಹುಟ್ಟಿರೋದು ಹೌದಾದರೆ ನನ್ನನ್ನು ಕೊಲೆ ಮಾಡಲು ಒಬ್ಬನೇ ಬರಲಿ ಎಂದು ಸವಾಲು ಹಾಕಿದ್ದರು. ಹಿಂದೂ ಮುಸ್ಲಿಂ ಎಂದು ಗಲಾಟೆ‌ ಮಾಡಿಸಿ ಸಾಯಿಸಬೇಡಿ. ಇವನಿಗೆ ಹಿಂದೂಗಳು ಎಂದು ಹೇಳುವ ಯೋಗ್ಯತೆಯಿಲ್ಲ. ಶರಣ್ ಪಂಪ್​ವೆಲ್ ಗಂಡಸು ಆಗಿದ್ರೆ ಈ ರೀತಿ ಮಾಡುತ್ತಿರಲಿಲ್ಲ. ಫಾಝಿಲ್ ತಂದೆಯಾಗಿ ದೂರು ಕೊಡುದು ನನ್ನ ಕರ್ತವ್ಯ. ಮೇಲೆ ಇರುವ ದೇವರೆ ನೋಡಿಕೊಳ್ಳುತ್ತಾನೆ ಎಂದು ಉಮಾರ್ ಫಾರೂಕ್ ಹೇಳಿದ್ದರು.

ಇದನ್ನೂ ಓದಿ: ಪ್ರವೀಣ್ ‌ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆ: ಶರಣ್ ಪಂಪ್​ವೆಲ್

ಶರಣ್ ಪಂಪ್​ವೆಲ್​ ವಿರುದ್ಧ ಯು.ಟಿ ಖಾದರ್ ಕಿಡಿ

ಶರಣ್ ಪಂಪ್​ವೆಲ್ ಹೇಳಿಕೆ ವಿಚಾರವಾಗಿ ವಿಪಕ್ಷ ಉಪನಾಯಕ ಯು.ಟಿ ಖಾದರ್​ ಪ್ರತಿಕ್ರಿಯಿಸಿದ್ದು, ಈ ರೀತಿಯ ಹೇಳಿಕೆ ಕೊಡುವವರನ್ನು ಗಡಿಪಾರು ಮಾಡಿ ಎಂದು ಆಗ್ರಹಿಸಿದರು. ಕೊಲೆ ಘಟನೆಗಳಿಗೆ ಪ್ರೇರಣೆ ಕೊಡುವ ಹೇಳಿಕೆ ಸಮಾಜಕ್ಕೆ ಅತ್ಯಂತ ಅಪಾಯಕಾರಿ. ಈ ಹೇಳಿಕೆ ಕೊಡುವವರು ನಿಜವಾದ ದೇಶದ್ರೋಹಿಗಳು. ಸಮಾಜ‌ ಒಗ್ಗಾಟಾಗಿರಬೇಕೆಂಬುದು ಸಮಾಜದ ನಿಲುವು. ಹಿಂದೂ, ಮುಸ್ಲಿಂ, ಕ್ರೈಸ್ಥ ಯಾರ ಕೊಲೆಯು ಆಗಬಾರದು ಎಂದು ಪ್ರಯತ್ನ ಪಡಬೇಕು. ಬಿಜೆಪಿಯವರು ಕೊಲೆ ಆಗುವುದಕ್ಕೆ ಕಾಯುತ್ತಿದ್ದಾರೆ. ಒಂದಾದರೆ ಎರಡು ಆಗಬೇಕೆಂಬ ಮನಸ್ಥಿತಿ ಯಾಕೆ ಎಂದು ಕಿಡಿಕಾರಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:56 pm, Wed, 1 February 23

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ