AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿಗೆ ಕಾರು ಡಿಕ್ಕಿ: ಜವರಾಯನ ಅಟ್ಟಹಾಸಕ್ಕೆ ಕುಣಿಗಲ್​​ ಬಳಿ ದಾರಿಯಲ್ಲೇ ಪ್ರಾಣಬಿಟ್ಟ ನಾಲ್ವರು

ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ಗೊಬ್ಬರ ತುಂಬಿದ ಲಾರಿಗೆ ಆಲ್ಟೋ ಕಾರು ಡಿಕ್ಕಿಯಾದ ಪರಿಣಾಮ ಕಾರಲ್ಲಿದ್ದ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂ ಆಗಿದ್ದು, ಮೃತ ದುರ್ದೈವಿಗಳನ್ನು ಮಂಡ್ಯ ಮೂಲದವರೆಂದು ಗುರುತಿಸಲಾಗಿದೆ.

ಲಾರಿಗೆ ಕಾರು ಡಿಕ್ಕಿ: ಜವರಾಯನ ಅಟ್ಟಹಾಸಕ್ಕೆ ಕುಣಿಗಲ್​​ ಬಳಿ ದಾರಿಯಲ್ಲೇ ಪ್ರಾಣಬಿಟ್ಟ ನಾಲ್ವರು
ಸಂಪೂರ್ಣ ಜಖಂ ಆಗಿರುವ ಕಾರುImage Credit source: Tv9 Kannada
ಜಗದೀಶ ಬಿ.
| Edited By: |

Updated on:May 09, 2026 | 8:56 PM

Share

ತುಮಕೂರು, ಮೇ 09: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ. ಗೊಬ್ಬರ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರು ಛಿದ್ರ ಛಿದ್ರವಾಗಿದ್ದು, ಕಾರು ಚಾಲಕ ಸೇರಿದಂತೆ ಮಂಡ್ಯ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

  • ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ
  • ಅಪಘಾತದ ರಭಸಕ್ಕೆ ಆಲ್ಟೋ ಕಾರಲಿದ್ದ ನಾಲ್ವರು ಸಾವು
  • ಮೃತರು ಮಂಡ್ಯದ ಸ್ವರ್ಣಸಂದ್ರ ನಿವಾಸಿಗಳೆಂಬ ಮಾಹಿತಿ

ಇದನ್ನೂ ಓದಿ: ತುಮಕೂರಿನಲ್ಲಿ ಹೆಚ್ಚಾಯ್ತು ಹಕ್ಕಿ ಜ್ವರದ ಭೀತಿ; 50ಕ್ಕೂ ಹೆಚ್ಚು ನವಿಲುಗಳ ಸಾವು!

ವಿವಾಹ ವಾರ್ಷಿಕೋತ್ಸವದ ದಿನದಂದೇ ದುರ್ಮರಣ

ಮೃತರನ್ನು ಮಂಡ್ಯದ ಸ್ವರ್ಣಸಂದ್ರ ನಿವಾಸಿಯಾದ ಕುಮಾರ ನರಸಿಂಹಸ್ವಾಮಿ, ಅವರ ಪತ್ನಿ ಗಾಯತ್ರಿ (60), ಸಹೋದರಿ ಗಾಯತ್ರಿ (55) ಹಾಗೂ ಮತ್ತೋರ್ವ ಪುರುಷ ಎಂದು ಗುರುತಿಸಲಾಗಿದೆ. ನಿನ್ನೆ ಪತ್ನಿ ಹಾಗೂ ತಂಗಿ ಜೊತೆ ತುಮಕೂರಿಗೆ ಬಂದಿದ್ದ ಕುಮಾರ ನರಸಿಂಹಸ್ವಾಮಿ ಇಂದು ಮದುವೆ ವಾರ್ಷಿಕೊತ್ಸವದ ಹಿನ್ನೆಲೆ ದೇವರಾಯನದುರ್ಗಕ್ಕೆ ತೆರಳಿ ದೇವರ ದರ್ಶನ ಪಡೆದು ವಾಪಸ್​​ ಊರಿಗೆ ಹಿಂದಿರುಗುವಾಗ ಅವಘಡ ನಡೆದಿದೆ.

ಮತ್ತೋರ್ವನ ಗುರುತು ಪತ್ತೆ

ಕಾರಲ್ಲಿದ್ದ ನಾಲ್ವರ ಪೈಕಿ ಮತ್ತೊಬ್ಬ ಪುರುಷ ಯಾರೆಂಬ ಬಗ್ಗೆ ಆರಂಭದಲ್ಲಿ ನಿಖರ ಮಾಹಿತಿ ಸಿಕ್ಕಿರಲಿಲ್ಲ. ಹೀಗಾಗಿ ಆತನ ಬಗ್ಗೆ ಪೊಲೀಸರು ವಿಚಾರಣೆ ಮುಂದುವರಿಸಿದ್ದರು. ಆದರೆ ಮೃತ ಮತ್ತೋರ್ವರ ಅವರ ಕಾರು ಚಾಲಕ ಎಂಬ ವಿಚಾರವೀಗ ಗೊತ್ತಾಗಿದೆ. ಮೃತದೇಹಗಳನ್ನು ಕುಣಿಗಲ್​​ನ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:15 pm, Sat, 9 May 26

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ