Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಹಣದ ಬದಲು 10 ಕೆಜಿ ಅಕ್ಕಿ ಕೊಡಿ, ಇಲ್ಲದಿದ್ದರೆ ಹೊಟ್ಟೆ ಹಸಿವಿನಿಂದ ಇರಬೇಕಾಗುತ್ತೆ” ಜನತಾ ದರ್ಶನದಲ್ಲಿ ಪರಮೇಶ್ವರ್​ ಮುಂದೆ ರೈತನ ಅಳಲು

ಕುಣಿಗಲ್ ಶಾಸಕ ಡಾ.ರಂಗನಾಥ್, ಜಿಲ್ಲಾಧಿಕಾರಿ ಕೆ ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರಭು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲಾ ಉಸ್ತುವಾರಿ, ಗೃಹ ಸಚಿವ ಡಾ. ಜಿ ಪರಮೇಶ್ವರ್​​ ಅವರು ಇಂದು (ಅ.31) ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ ಜನತಾ ದರ್ಶನ ನಡೆಸಿದರು.

ಹಣದ ಬದಲು 10 ಕೆಜಿ ಅಕ್ಕಿ ಕೊಡಿ, ಇಲ್ಲದಿದ್ದರೆ ಹೊಟ್ಟೆ ಹಸಿವಿನಿಂದ ಇರಬೇಕಾಗುತ್ತೆ ಜನತಾ ದರ್ಶನದಲ್ಲಿ ಪರಮೇಶ್ವರ್​ ಮುಂದೆ ರೈತನ ಅಳಲು
ಜನತಾ ದರ್ಶನದಲ್ಲಿ ರೈತನ ಮನವಿ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ವಿವೇಕ ಬಿರಾದಾರ

Updated on:Oct 31, 2023 | 1:20 PM

ತುಮಕೂರು ಅ.31: ಜಿಲ್ಲಾ ಉಸ್ತುವಾರಿ, ಗೃಹ ಸಚಿವ ಡಾ. ಜಿ ಪರಮೇಶ್ವರ್ (G Parameshwara)​ ಅವರು ಇಂದು (ಅ.31) ಕುಣಿಗಲ್ (Kunigal) ತಾಲೂಕಿನ ಹುಲಿಯೂರುದುರ್ಗದಲ್ಲಿ ಜನತಾ ದರ್ಶನ (Janata Darshana) ನಡೆಸಿದರು. ಈ ವೇಳೆ ಓರ್ವ ರೈತ ನಮಗೆ ಹಣದ ಬದಲು 10 ಕೆಜಿ ಅಕ್ಕಿ ಕೊಡಿ ಎಂದು ಮನವಿ ಮಾಡಿದರು. ಕೇವಲ ಮೂರು ಕೆಜಿ ಕೊಡುತ್ತಾರೆ. ಹೊಟ್ಟೆ ತುಂಬ ಅನ್ನ ಊಟ ಮಾಡೋಕೆ ಆಗುತ್ತಿಲ್ಲ. ದಯವಿಟ್ಟು ನಮಗೆ ಹಣದ ಬದಲು 10 ಕೆಜಿ ಅಕ್ಕಿ ಕೊಡಿ. ಮಕ್ಕಳು ಮರಿ ಎಲ್ಲರು ಹೊಟ್ಟೆ ತುಂಬಾ ಊಟ ಮಾಡುತ್ತಾರೆ. ಇಲ್ಲದಿದ್ದರೆ ಹೊಟ್ಟೆ ಹಸಿವಿನಿಂದ ಇರಬೇಕಾಗುತ್ತೆ ಎಂದು ಅಂಗಲಾಚಿದರು.

ಸಿದ್ದತೆಯಿಲ್ಲದೆ ಸಭೆಗೆ ಬಂದ‌ ಅಧಿಕಾರಿಗಳಿಗೆ ಪರಮೇಶ್ವರ್​ ಕ್ಲಾಸ್

ಕುಣಿಗಲ್ ಶಾಸಕ ಡಾ.ರಂಗನಾಥ್, ಜಿಲ್ಲಾಧಿಕಾರಿ ಕೆ ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಸಿಇಒ ಪ್ರಭು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಿತು. ಜನತಾ ದರ್ಶನದಲ್ಲಿ ಜಿ ಪರಮೇಶ್ವರ ಅಧಿಕಾರಿಗಳಿಗೆ ಕ್ಲಾಸ್​ ತೆಗೆದುಕೊಂಡ ಪ್ರಸಂಗವೂ ಕಂಡುಬಂದಿತು.

ಹೌದು ಸಚಿವ ಜಿ.ಪರಮೇಶ್ವರ್​ ಅವರು ಕೃಷಿ ಅಧಿಕಾರಿಗಳಿಗೆ ಬರ ಪರಿಸ್ಥಿತಿ ನಿರ್ವಹಣೆಯ ಮಾಹಿತಿ ಕೇಳಿದರು. ಕುಣಿಗಲ್ ತಾಲೂಕಿನಲ್ಲಿ 70 ಸಾವಿರ ನೋಂದಾಯಿತ ರೈತರಿದ್ದಾರೆ. 600 ರೈತರು ಮಾತ್ರ ಬೆಳೆ‌ ವಿಮೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಕಳೆದ ವರ್ಷ ಎಷ್ಟು ವಿಮೆ ನೀಡಿದ್ದೀರಾ ಎಂದು ಕೃಷಿ ಅಧಿಕಾರಿಗಳಿಗೆ ಪ್ರಶ್ನಿಸಿದರು. ಈ ವೇಳೆ ಕೃಷಿ ಇಲಾಖೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಹಾಗೂ ಉಪನಿರ್ದೇಶಕ ಮಾಹಿತಿ ನೀಡಲು ತಡವರಿಸಿದರು.

ಇದನ್ನೂ ಓದಿ: ಅಕ್ಕಿ ಬದಲು ಹಣ ನೀಡುವುದರ ವಿರುದ್ಧ ಸಿಡಿದ ಪಡಿತರ ವಿತರಕರು: ರಾಜ್ಯಾದ್ಯಂತ ನ್ಯಾಯಬೆಲೆ‌ ಅಂಗಡಿಗಳು ಬಂದ್

ಇದರಿಂದ ಕುಪಿತಗೊಂಡ ಸಚಿವರು ಇಬ್ಬರು ಅಧಿಕಾರಿಗಳಿಗೆ ಮಾತ್ರವಲ್ಲದೇ ಕುಣಿಗಲ್ ತಹಶೀಲ್ದಾರ್​ ವಿಶ್ವನಾಥ್ ಅವರಿ​ಗೂ ತರಾಟೆಗೆ ತೆಗೆದುಕೊಂಡರು. “ರಜೆಗೆ ಪ್ರವಾಸಕ್ಕೆ ತೆರಳುವಂತೆ ಇಲ್ಲಿಗೆ ಬಂದಿದ್ದೀರಾ, ಏನು ಅರೇಜ್​​ಮೆಂಟ್ ಮಾಡಿದ್ದೀಯಾ? ಏಯ್ ವಾಟ್ ನಾನ್ಸೆನ್ ಯು ಟಾಕಿಂಗ್” ಎಂದು ಗೃಹ ಸಚಿವ ಜಿ.ಪರಮೇಶ್ವರ್ ಕ್ಲಾಸ್ ತೆಗೆದುಕೊಂಡರು. ‌

ಅಧಿಕಾರಿಗಳ ವರ್ತನೆ ಕಂಡು ಗೃಹ ಸಚಿವ ಡಾ.ಪರಮೇಶ್ವರ್ ಬೇಸರಗೊಂಡರು. ಕುಣಿಗಲ್ ತಾಲೂಕು ಅಧಿಕಾರಿಗಳು ಪೂರ್ವಸಿದ್ಧತೆ ಇಲ್ಲದ ಬಂದಿದ್ದರು. ಇದರಿಂದ ಬೇಸರಗೊಂಡ ಸಚಿವರು ಯಾವ ತಾಲೂಕಿನಲ್ಲೂ ಇಷ್ಟೊಂದು ಮಟ್ಟಕ್ಕೆ ಸಭೆ ನಡೆದಿಲ್ಲ. ತಹಶೀಲ್ದಾರ್ ವಿಶ್ವನಾಥ್ ಹಾಗೂ ಇಒ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಜಿ ಪರಮೇಶ್ವರ ಸೂಚನೆ ನೀಡಿದರು.

ಅಕ್ಕಿ ಬದಲು ಹಣ

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಹೆಚ್ಚುವರಿ ಐದು ಕೆಜೆ ಅಂದರೆ ಒಟ್ಟು 10 ಕೆಜಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ್ದರು. ಆದರೆ ಅಧಿಕಾರಕ್ಕೆ ಬಂದ್​ ನಂತರ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ಫಲಾನುಭವಿಗಳ ಅಕೌಂಟ್​ಗೆ ಐದು ಕೆಜಿ ಅಕ್ಕಿಯ ಹಣವನ್ನು ನೇರ ನಗದು ಪಾವತಿ (ಡಿಬಿಟಿ) ಮೂಲಕ ಪಾವತಿ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:13 pm, Tue, 31 October 23

ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ಹಸುವನ್ನು ಓಡಿಸಿಕೊಂಡು ಬೆಡ್ ರೂಂಗೆ ನುಗ್ಗಿದ ಗೂಳಿ; ವಿಡಿಯೋ ವೈರಲ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ದರ್ಶನ್ ತೆರೆಮೇಲೆ ಕಾಣಿಸಿದ ಕೂಡಲೇ ಮೈಮರೆತು ಕುಣಿದಾಡಿದ ಫ್ಯಾನ್ಸ್
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಲಿಂಗಾಯತರು ಬಿಜೆಪಿನ ಪುನಃ ಅಧಿಕಾರಕ್ಕೆ ತರಬೇಕೆಂದುಕೊಂಡಿದ್ದರು: ಸ್ವಾಮೀಜಿ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
ಫ್ಯಾನ್ಸ್ ಪ್ರಕಾರ ಆರ್​ಸಿಬಿ- ಸಿಎಸ್​ಕೆ ಕಾಳಗದ ಸ್ಮರಣೀಯ ಕ್ಷಣ ಇದೆ
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
‘ಮನದ ಕಡಲು’ ನಟ-ನಟಿಯರಿಗೆ ಶಾಪ ಹಾಕಿದ ರಂಗಾಯಣ ರಘು
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಹನಿ ಟ್ರ್ಯಾಪ್ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಿದನ್ನು ಸ್ವಾಗತಿಸಿದ ರಾಜಣ್ಣ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ರೈತರಿಗೆ ಡಬಲ್​ ಗುಡ್​ನ್ಯೂಸ್ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ..!
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ