ಬಾಣಂತಿ, ಶಿಶುವನ್ನು ಊರಿಂದ ಹೊರಗಿಟ್ಟ ಕಾಡುಗೊಲ್ಲ ಕುಟುಂಬ; ನಮ್ಮ ದೇವರಿಗೆ ಸೂತಕ ಆಗಲ್ಲ, ನಾವು ಬಿಟ್ಟುಕೊಳ್ಳಲ್ಲ ಎಂದ ಹಿರಿಯರು

ತುಮಕೂರು ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯ ವಸಂತಾ ಅನ್ನೋ ಬಾಣಂತಿ ಹಾಗೂ ನವಜಾತ ಶಿಶುವನ್ನು ಊರಾಚೆಯ ಜಮೀನಿನಲ್ಲಿ ನಿರ್ಮಿಸಿರುವ ತಾತ್ಕಾಲಿಕ ಗುಡಿಸಲಿನಲ್ಲಿ ಇರಿಸಲಾಗಿದೆ.

ಬಾಣಂತಿ, ಶಿಶುವನ್ನು ಊರಿಂದ ಹೊರಗಿಟ್ಟ ಕಾಡುಗೊಲ್ಲ ಕುಟುಂಬ; ನಮ್ಮ ದೇವರಿಗೆ ಸೂತಕ ಆಗಲ್ಲ, ನಾವು ಬಿಟ್ಟುಕೊಳ್ಳಲ್ಲ ಎಂದ ಹಿರಿಯರು
ಗುಡಿಸಲಲ್ಲಿ ಬಾಣಂತಿ, ಶಿಶು ವಾಸ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಆಯೇಷಾ ಬಾನು

Updated on: Jul 19, 2023 | 8:19 AM

ತುಮಕೂರು: ಇತ್ತೀಚಿನ ಬದಲಾದ ಕಾಲಮಾನದಲ್ಲಿ ಆಧುನಿಕತೆ ಅನ್ನೋದು ದಿನದಿಂದ ದಿನಕ್ಕೆ ವೇಗ ಪಡೆದುಕೊಳ್ತಿದೆ. ಏನೆಲ್ಲಾ ಬದಲಾದರೂ ನಾವು ಮಾತ್ರ ಮೌಢ್ಯ(Superstition) ಮರೆಯಲ್ಲಾ ಅಂತಿದ್ದಾರೆ ತುಮಕೂರಿನ(Tumkur) ಈ ಗ್ರಾಮದ ಜನ. ಸೂತಕ ಸಂಪ್ರದಾಯದ ಆಚರಣೆ ಮಾಡೋ ಮೂಲಕ ಇಲ್ಲೊಂದು ಕಾಡು ಗೊಲ್ಲರ ಕುಟುಂಬ ಹಸಿ ಬಾಣಂತಿ ಹಾಗೂ ಎಳೆ ಕಂದಮ್ಮನನ್ನ ಮೌಢ್ಯಕ್ಕೆ ನೂಕಿದೆ.

ತುಮಕೂರು ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯ ವಸಂತಾ ಅನ್ನೋ ಬಾಣಂತಿ ಹಾಗೂ ನವಜಾತ ಶಿಶುವನ್ನು ಊರಾಚೆಯ ಜಮೀನಿನಲ್ಲಿ ನಿರ್ಮಿಸಿರುವ ತಾತ್ಕಾಲಿಕ ಗುಡಿಸಲಿನಲ್ಲಿ ಇರಿಸಲಾಗಿದೆ. ಸಂಪ್ರದಾಯದ ಹೆಸರಿನಲ್ಲಿ ತಾಯಿ, ಮಗುವಿನ ಜೀವಕ್ಕೆ ಕುತ್ತು ತರುವಂತಾ ಮೌಢ್ಯಾಚರಣೆಗೆ ನಡೆಯುತ್ತಿದೆ. ಪುಟ್ಟ ಗುಡಿಸಿಲಿನಲ್ಲಿ 5 ದಿನಗಳಿಂದ ಹಸಿ ಬಾಣಂತಿ, ನವಜಾತ ಶಿಶು ವಾಸ ಮಾಡ್ತಿದ್ದಾರೆ. ಬಾಣಂತಿ ಹಾಗೂ ಪುಟ್ಟ ಮಗುವನ್ನು ಊರಿನಿಂದ ಹೊರಗಿಟ್ಟ ಸಮುದಾಯ ಈ ಪುಟ್ಟ ಗುಡಿಸಿನಲ್ಲಿ ಏಕಾಂಕಿಯಾಗಿ ವಾಸ ಮಾಡುವಂತೆ ಕಟ್ಟಪ್ಪಣೆ ಮಾಡಿದೆ.

ಇದನ್ನೂ ಓದಿ: ದಾವಣಗೆರೆ: ಮುಖ್ಯಶಿಕ್ಷಕರ ಬೇಜವಾಬ್ದಾರಿತನಕ್ಕೆ ಬಿಸಿಯೂಟದಿಂದ ವಂಚಿತರಾದ ಶಾಲೆ ಮಕ್ಕಳು, ವಿದ್ಯಾರ್ಥಿಗಳಿಂದಲೇ ಅಡುಗೆ ತಯಾರಿ

ಇದೇ ಗ್ರಾಮದ ವಸಂತ ಎಂಬ ಗರ್ಭಿಣಿ, 5 ದಿನಗಳ ಹಿಂದೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಅವಳಿ‌ ಶಿಶುವಿಗೆ ಜನ್ಮ ನೀಡಿದ್ದರು. ಹೆರಿಗೆ ಸಂದರ್ಭದಲ್ಲಿ ಗಂಡು‌ ಮಗು ಸಾವನ್ನಪ್ಪಿದ್ದು, ಹೆಣ್ಣು ಮಗು ಆರೋಗ್ಯವಾಗಿದೆ. ಹೆರಿಗೆ ಮುಗಿಸಿ ವಾಪಸ್ ಬಂದ ವಸಂತ ಮನೆಗೆ ತೆರಳದೇ ಊರ ಹೊರಗಿನ ಗುಡಿಸಲಿನಲ್ಲಿ ತನ್ನ ಚೊಚ್ಚಲ ಬಾಣಂತನ ಆರಂಭಿಸಿದ್ದಾರೆ. ಸದ್ಯ ಬದುಕಿರುವ ನವಜಾತ ಹೆಣ್ಣು ಮಗುವಿನೊಂದಿಗೆ ತಾಯಿ ವಸಂತಾ ವಾಸ ಮಾಡುತ್ತಿದ್ದು, ನಮ್ಮ ದೇವರಿಗೆ ಸೂತಕ ಆಗಲ್ಲ ಹಾಗಾಗಿ ನಾವು ಒಳಗೆ ಬಿಟ್ಟುಕೊಳ್ಳುವುದಿಲ್ಲ, ಸೂತಕದ ಬಾಣಂತಿ ಊರಿಗೆ ಬಂದರೆ ಕೇಡು. ಜುಂಜಪ್ಪ ಹಾಗೂ ಯತ್ತಪ್ಪ ದೇವರಿಗೆ ಆಗಲ್ಲ, ಹಿಂದಿನಿಂದಲೂ ಈ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ ಎಂದು ಕಾಡುಗೊಲ್ಲ ಸಮುದಾಯದ ಮುಖಂಡರು ತಮ್ಮ ಮೌಢ್ಯಾಚರಣೆ ಮುಂದುವರೆಸಿದ್ದಾರೆ.

ಸದ್ಯ ವಸಂತಾಳ ಗುಡಿಸಲು ವಾಸಕ್ಕೆ 5 ದಿನಗಳು ಕಳೆದಿದ್ದು, ಇನ್ನೂ ಎರಡು ತಿಂಗಳು‌ ಇಲ್ಲೇ ಇರಲಿದ್ದಾರೆ. ಬಾಲಕಿಯರು ಋತುಮತಿಯಾದಾಗ, ಮಹಿಳೆಯರ ಮಾಸಿಕ ಋತುಚಕ್ರ ಮತ್ತು ಹೆರಿಗೆ ಸಂದರ್ಭದಲ್ಲಿ ನಿರ್ದಿಷ್ಟ ದಿನಗಳವರೆಗೆ ಗ್ರಾಮದಿಂದ ಹೊರಗೆ ಗುಡಿಸಲಿನಲ್ಲಿ ಇರುವ ಪದ್ಧತಿ ಬುಡಕಟ್ಟು ಸಂಪ್ರದಾಯ ಪಾಲಿಸುವ ಗೊಲ್ಲ ಸಮುದಾಯದಲ್ಲಿ ಬಹಳ ಹಿಂದಿನಿಂದಲ್ಲೂ ನಡೆದುಕೊಂಡು ಬಂದಿದೆ. ಬಾಣಂತಿ ತಾಯಿ ಮತ್ತು ಮಗುವಿನ ಆರೈಕೆಗೆ ಸಾಕಷ್ಟು ಪ್ರಾಮುಖ್ಯತೆ ನೀಡೋ ಈ ಆಧುನಿಕತೆಯಲ್ಲಿ ಹೀಗೆ ಅಪಾಯದ ಹಾದಿಗೆ ದೂಡಿರೋದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ತುಮಕೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು