ಒತ್ತುವರಿ ಜಾಗ ವೀಕ್ಷಣೆ ಮಾಡಿದ್ದಕ್ಕೆ ಗ್ರಾ.ಪಂ. ಸದಸ್ಯನ ಮೇಲೆ ಹಲ್ಲೆ, ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಗ್ರಾಮದಲ್ಲಿ ಸರ್ಕಾರಿ ಜಾಗ ಒತ್ತುವರಿ ಆಗಿದ್ದರ ವೀಕ್ಷಣೆಗೆ ತೆರಳಿದ ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಸ್ಥಳೀಯ ಗ್ರಾಮಸ್ಥರು ಕುಟುಂಬ ಸಮೇತವಾಗಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದು, ಗ್ರಾಮ ಪಂಚಾಯತ್ ಸದಸ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಒತ್ತುವರಿ ಜಾಗ ವೀಕ್ಷಣೆ ಮಾಡಿದ್ದಕ್ಕೆ ಗ್ರಾ.ಪಂ. ಸದಸ್ಯನ ಮೇಲೆ ಹಲ್ಲೆ, ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಹೊಸಹಳ್ಳಿ ಗ್ರಾಮದ ಗ್ರಾಮ ಪಂಚಾಯಿತ್ ಸದಸ್ಯ ಎಚ್.ಎಸ್. ವಿಶ್ವನಾಥ್

ತುಮಕೂರು: ಗ್ರಾಮಗಳಲ್ಲಿ ಸರ್ಕಾರಿ ಜಾಗ ಒತ್ತುವರಿಗಳು ಕಾಮನ್ ಆಗಿಬಿಟ್ಟಿವೆ. ಸರ್ಕಾರವೂ ಒತ್ತುವರಿ ತೆರವು ಮಾಡಿ ಅಂತಾ ಪದೇ ಪದೇ ಹೇಳಿದರೂ ಅದು ಜನಕ್ಕೆ ಪ್ರಯೋಜನಕ್ಕೆ ಬರುತ್ತಿಲ್ಲ. ಇದಕ್ಕೆ ಕಾರಣ ಹಳ್ಳಿಗಳಲ್ಲಿ ಪ್ರಭಾವಿಗಳೇ ಹೆಚ್ಚು ಸರ್ಕಾರಿ ಜಾಗವನ್ನ ಒತ್ತುವರಿ ಮಾಡಿರುತ್ತಾರೆ. ಸದ್ಯ ಸರ್ಕಾರಿ ಜಾಗವನ್ನ ತೆರವುಗೊಳಿಸಲು ಗ್ರಾಮ ಪಂಚಾಯತ್​ ಸದಸ್ಯರೊಬ್ಬರು ಮುಂದಾದಾಗ ಅವರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದವರು ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಂಗಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದ ಗ್ರಾಮ ಪಂಚಾಯಿತ್ ಸದಸ್ಯ ಎಚ್.ಎಸ್. ವಿಶ್ವನಾಥ್.

ಗ್ರಾಮದಲ್ಲಿ ಸರ್ಕಾರಿ ಜಾಗ ಒತ್ತುವರಿ ಆಗಿದ್ದರ ವೀಕ್ಷಣೆಗೆ ತೆರಳಿದ ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಸ್ಥಳೀಯ ಗ್ರಾಮಸ್ಥರು ಕುಟುಂಬ ಸಮೇತವಾಗಿ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದು, ಗ್ರಾಮ ಪಂಚಾಯತ್ ಸದಸ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಶ್ವನಾಥ್ ಗ್ರಾಮದಲ್ಲಿ ಸರ್ಕಾರಿ ಜಾಗ ಒತ್ತುವರಿ ಆಗಿದ್ದ ಸ್ಥಳ ವೀಕ್ಷಣೆಗೆ ತೆರಳಿದ ಸಂದರ್ಭದಲ್ಲಿ ಅದೇ ಗ್ರಾಮದ ಗಂಗಾಧರ ಮತ್ತು ಮಕ್ಕಳು ಸೇರಿ ವಿನಾಕಾರಣ ಜಗಳ ತೆಗೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಗ್ರಾಮಸ್ಥರು ಜಗಳ ಬಿಡಿಸಿ ನಗರದ ವಿಶ್ವನಾಥ್​ರನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ವಿಶ್ವನಾಥ್ ಕೈಗೆ ಗಾಯವಾಗಿದೆ ಎನ್ನಲಾಗಿದೆ. ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. – ಮಹೇಶ್

Click on your DTH Provider to Add TV9 Kannada