ತುಮಕೂರು: ತಂಗುದಾಣ‌ ನಿರ್ಮಾಣ‌ ವಿಚಾರದಲ್ಲಿ ಗಲಾಟೆ; ಗ್ರಾ.ಪಂ‌ಚಾಯತಿ ಉಪಾಧ್ಯಕ್ಷೆಯ ಗಂಡನಿಗೆ‌ ಶಿಕ್ಷಕನಿಂದ ಕಪಾಳ‌ಮೋಕ್ಷ

ತುಮಕೂರು ಜಿಲ್ಲೆಯ ಕೊರಟಗೆರೆ‌ ತಾಲೂಕಿನ ಜೆಟ್ಟಿ ಅಗ್ರಹಾರ ಗ್ರಾಮದ ತಂಗುದಾಣ‌ ನಿರ್ಮಾಣ‌ ವಿಚಾರದಲ್ಲಿ ಗಲಾಟೆಯಾಗಿ, ಗ್ರಾಮ ಪಂ‌ಚಾಯತಿ ಉಪಾಧ್ಯಕ್ಷೆಯ ಗಂಡನಿಗೆ‌ ಶಿಕ್ಷಕರೊಬ್ಬರು ಕಪಾಳ‌ಮೋಕ್ಷ ಮಾಡಿರುವ ಘಟನೆ ನಡೆದಿದೆ. ಬಳಿಕ ಜೆಟ್ಟಿ ಅಗ್ರಹಾರ ಗ್ರಾಮದ ನಿವಾಸಿಗಳು ಮಧ್ಯಪ್ರವೇಶಿಸಿ ಗಲಾಟೆ ಬಿಡಿಸಿದ್ದಾರೆ.

ತುಮಕೂರು: ತಂಗುದಾಣ‌ ನಿರ್ಮಾಣ‌ ವಿಚಾರದಲ್ಲಿ ಗಲಾಟೆ; ಗ್ರಾ.ಪಂ‌ಚಾಯತಿ ಉಪಾಧ್ಯಕ್ಷೆಯ ಗಂಡನಿಗೆ‌ ಶಿಕ್ಷಕನಿಂದ ಕಪಾಳ‌ಮೋಕ್ಷ
ಗಲಾಟೆ ದೃಶ್ಯ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 05, 2023 | 6:40 PM

ತುಮಕೂರು, ಸೆ.05: ಇಂದು ದೇಶಾದ್ಯಂತ ಶಿಕ್ಷಕರ ದಿನಾಚರಣೆಯನ್ನು ಆಚರಿಸಿದ್ದಾರೆ. ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ತಳಹದಿ ಹಾಕುವ ಶಿಕ್ಷಕರಿಗೆ ಶುಭಾಶಯ ಕೋರಿದ್ದಾರೆ. ಇನ್ನು ಇದೇ ದಿನ ತುಮಕೂರು (Tumakur) ಜಿಲ್ಲೆಯ ಕೊರಟಗೆರೆ‌ ತಾಲೂಕಿನ ಜೆಟ್ಟಿ ಅಗ್ರಹಾರ ಗ್ರಾಮದ ತಂಗುದಾಣ‌ ನಿರ್ಮಾಣ‌ ವಿಚಾರದಲ್ಲಿ ಗಲಾಟೆಯಾಗಿ, ಗ್ರಾಮ ಪಂ‌ಚಾಯತಿ ಉಪಾಧ್ಯಕ್ಷೆಯ ಗಂಡನಿಗೆ‌ ಶಿಕ್ಷಕರೊಬ್ಬರು ಕಪಾಳ‌ಮೋಕ್ಷ ಮಾಡಿರುವ ಘಟನೆ ನಡೆದಿದೆ. ಇನ್ನು ರಾಜಶೇಖರ್‌ ಎಂಬ ಶಿಕ್ಷಕರೊಬ್ಬರು ಕಪಾಳ‌ಮೋಕ್ಷ ಮಾಡಿದವರು.

ಮಾತಿನ‌ ಚಕಮಕಿ ವಿಕೋಪಕ್ಕೆ ತಿರುಗಿ ಮಂಜುನಾಥ್‌ಗೆ ಕಪಾಳ‌ಮೋಕ್ಷ

ತಂಗುದಾಣ ನಿರ್ಮಾಣಕ್ಕೆ ಜಾಗ ಗುರುತಿಸಲು ಗ್ರಾಮ ಪಂ‌ಚಾಯತಿ ಉಪಾಧ್ಯಕ್ಷೆ ಪತಿ ಮಂಜುನಾಥ್‌ ಮುಂದಾಗಿದ್ದರು. ನಂತರ ಇಬ್ಬರ ನಡುವೆ ತಂಗುದಾಣ ನಿರ್ಮಾಣದಿಂದ‌ ಮನೆಗೆ ಅಡ್ಡಿಯಾಗುವ ಕಾರಣಕ್ಕೆ ಗಲಾಟೆ ಶುರುವಾಗಿದೆ. ಮಾತಿನ‌ ಚಕಮಕಿ ವಿಕೋಪಕ್ಕೆ ತಿರುಗಿ ಮಂಜುನಾಥ್‌ಗೆ ಶಿಕ್ಷಕರೊಬ್ಬರು ಕಪಾಳ‌ಮೋಕ್ಷ ಮಾಡಿದ್ದಾರೆ. ಬಳಿಕ ಜೆಟ್ಟಿ ಅಗ್ರಹಾರ ಗ್ರಾಮದ ನಿವಾಸಿಗಳು ಮಧ್ಯಪ್ರವೇಶಿಸಿ ಗಲಾಟೆ ಬಿಡಿಸಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಮದ್ಯ ನೀಡಲು ನಿರಾಕರಿಸಿದ್ದಕ್ಕೆ ಬಾರ್​ ಸಿಬ್ಬಂದಿ ಮೇಲೆ ಹಲ್ಲೆ

ಒಂದೇ ದಿನ ಎರಡು ಮನೆಗಳಿಗೆ ಕನ್ನ ಹಾಕಿದ ಖದೀಮರು

ಆನೇಕಲ್: ಒಂದೇ ದಿನ ಖದೀಮರು ಎರಡು ಮನೆಗಳಿಗೆ ಕನ್ನ ಹಾಕಿದ ಘಟನೆ ಬೆಂಗಳೂರು ಹೊರಲವಯ ಆನೇಕಲ್ ಪಟ್ಟಣದ ಲಕ್ಷ್ಮಿ ಚಿತ್ರಮಂದಿರ ಸಮೀಪ ಹಾಗೂ ನಗರ್ತರ ಪೇಟೆಯಲ್ಲಿ ನಡೆದಿದೆ. ಮನೆಗೆ ಬೀಗ ಹಾಕಿಕೊಂಡು ಕುಟುಂಬದವರು ಚಿಕ್ಕ ತಿರುಪತಿಗೆ ಹೋಗಿದ್ದರು. ಇದನ್ನು ಗಮನಿಸಿ, ದ್ವಿಚಕ್ರ ವಾಹನದಲ್ಲಿ ಬಂದಿದ್ದ ಖದೀಮರ ಗ್ಯಾಂಗ್, ಲಕ್ಷ್ಮಿ ಚಿತ್ರಮಂದಿರ ಮುಖ್ಯರಸ್ತೆಯಲ್ಲಿನ ಮನೆ ಬೀಗ ಮುರಿದು, ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ.

ನಗರ್ತರ ಪೇಟೆಯ ಮನೆಯೊಂದರಲ್ಲೂ ಕಳ್ಳತನ

ನಗರ್ತರ ಪೇಟೆಯ ಪ್ರಶಾಂತ್ ಎಂಬುವರ ಮನೆಯಲ್ಲೂ ಕಳ್ಳತನ ನಡೆದಿದ್ದು, ಮನೆಯಲ್ಲಿದ್ದ ಬೆಳ್ಳಿ ಹಾಗೂ ಬೆಲೆಬಾಳುವ ವಸ್ತುಗಳು ಕಳ್ಳರು ಕದ್ದಿದ್ದಾರೆ. ಈ ಸರಣಿ ಕಳ್ಳತನಕ್ಕೆ ನೇಕಲ್ ಜನತೆ ಬೆಚ್ಚಿ ಬಿದ್ದಿದೆ. ದಿನನಿತ್ಯ ನಡೆಯುತ್ತಿರುವ ದ್ವಿಚಕ್ರ ವಾಹನ ಹಾಗೂ ಮನೆ ಕಳ್ಳತನಕ್ಕೆ ಬ್ರೆಕ್​ ಹಾಕದ ಪೋಲಿಸ್ ಇಲಾಖೆಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಆನೇಕಲ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಓಡಾಟದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?