AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಗಲ್​ನಲ್ಲಿ ರಂಗೇರಿದ ಚುನಾವಣೆ ಕಾವು: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ತುಂಬಿದ್ದ ವಾಹನವನ್ನು ವಶಕ್ಕೆ ಪಡೆದ ಜಿಎಸ್​ಟಿ ಅಧಿಕಾರಿಗಳು

ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ವಾಹನದ ಮೇಲೆ ಜಿಎಸ್​ಟಿ ಅಧಿಕಾರಿಗಳು ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಅಮೃತೂರು ಗ್ರಾಮದಲ್ಲಿ ನಡೆದಿದೆ.

ಕುಣಿಗಲ್​ನಲ್ಲಿ ರಂಗೇರಿದ ಚುನಾವಣೆ ಕಾವು: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ತುಂಬಿದ್ದ ವಾಹನವನ್ನು ವಶಕ್ಕೆ ಪಡೆದ ಜಿಎಸ್​ಟಿ ಅಧಿಕಾರಿಗಳು
ಕುಕ್ಕರ್ ವಾಹನದ ಮೇಲೆ ದಾಳಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 18, 2023 | 8:34 PM

Share

ತುಮಕೂರು: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ (Cooker) ವಾಹನದ ಮೇಲೆ ಜಿಎಸ್​ಟಿ ಅಧಿಕಾರಿಗಳು ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಅಮೃತೂರು ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಕುಣಿಗಲ್ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಡಾ.ರಂಗನಾಥ್ ಭಾವಚಿತ್ರವಿರುವ ಕುಕ್ಕರ್ ಬಾಕ್ಸ್ ಜಪ್ತಿ ಮಾಡಲಾಗಿದೆ. ಕುಣಿಗಲ್ ಕ್ಷೇತ್ರದ ಮತದಾರರಿಗೆ ಹಂಚಲು ತಂದಿದ್ದ ಆರೋಪ ಮಾಡಲಾಗಿದೆ. ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

Assembly Polls: ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಚುನಾವಣೆ ದಿನಾಂಕ ಪ್ರಕಟವಾಗುವ ಮೊದಲೇ ಗಿಫ್ಟ್​ಗಳ ವಿತರಣೆ!

ಬೆಳಗಾವಿ: ಸ್ಟಾರ್ಟ್ ಅಪ್​ಗಳನ್ನು ಆರಂಭಿಸುವ ಯೋಚನೆಯಿರುವ ಯುವಕರು ರಾಜ್ಯ ವಿಧಾನ ಸಭಾ ಚುನಾವಣೆ ಮುಗಿಯುವವರೆಗೆ ಆ ಯೋಜನೆಯನ್ನು ಕೈಬಿಟ್ಟು ಬೆಳಗಾವಿ ಜಿಲ್ಲೆಯಲ್ಲಿ ಸೀರೆ ಮತ್ತು ಮಿಕ್ಸರ್ ಗ್ರೈಂಡರ್​ಗಳ ಸಗಟು ವ್ಯಾಪಾರ ಮಾಡುವುದರಲ್ಲಿ ಹೆಚ್ಚು ಲಾಭವಿದೆ ಅಂತ ನಮಗನಿಸುತ್ತಿದೆ. ಚುನಾವಣೆ ದಿನಾಂಕ ಇನ್ನೂ ಪ್ರಕಟಗೊಂಡಿಲ್ಲ. ಆದರೆ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳ ಸಂಭವನೀಯ ಅಭ್ಯರ್ಥಿಗಳು ಮತದಾರರನ್ನು ಓಲೈಸಿಕೊಳ್ಳಲು ಗಿಫ್ಟ್​​ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ED Raid: ಬೆಂಗಳೂರು, ಮುಂಬೈ, ಚೆನ್ನೈನಲ್ಲಿರವ ವಿಹಾನ್ ಡೈರೆಕ್ಟ್ ಸೆಲ್ಲಿಂಗ್ ಇಂಡಿಯಾ ಕಚೇರಿ ಮೇಲೆ ಇಡಿ ದಾಳಿ: 90 ಕೋಟಿ ರೂ. ನಗದು ಜಪ್ತಿ

ರಮೇಶ್​ ಜಾರಕಿಹೊಳಿ ಆಪ್ತನಿಂದ ಸೀರೆ ಹಂಚಿಕೆ

ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಒಂದಲ್ಲ ಒಂದು ರಣತಂತ್ರ ರೂಪಿಸುತ್ತಿರುತ್ತವೆ. ಅದರಲ್ಲಿ ಗಿಫ್ಟ್ ಪಾಲಿಟಿಕ್ಸ್​ (Gift Politics) ಕೂಡ ಒಂದು. ಈ ಪದ್ಧತಿ ಅನಾದಿ ಕಾಲದಿಂದ ನಡೆದುಕೊಂಡು ಬಂದಿದ್ದು, ಮತದಾರರನ್ನು ಸೆಳೆಯಲು ಆಮಿಷ ಮಾರ್ಗ ಹಿಡಿದಿದ್ದಾರೆ. ಬೆಳಗಾವಿ (Belagavi) ಗ್ರಾಮಾಂತರ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್​ ಮುಂದುವರಿದಿದೆ.

ಈ ಹಿಂದೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತೆಂಗಿನ ಕಾಯಿ ಮೇಲೆ ಪ್ರಮಾಣ ಮಾಡಿಸಿಕೊಂಡು ಗಿಫ್ಟ್​ ನೀಡಿದ್ದರು. ಈಗ ಗೋಕಾಕ್​ ಬಿಜೆಪಿ ಶಾಸಕ ರಮೇಶ್​ ಜಾರಕಿಹೊಳಿ ಆಪ್ತ ಮತದಾರರ ಓಲೈಕೆಗೆ ಗಿಫ್ಟ್ ಹಂಚಿಕೆ ಮಾಡಿದ್ದಾನೆ. ಹಿಂಡಲಗಾ ಗ್ರಾ.ಪಂ ಅಧ್ಯಕ್ಷ, ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ನಾಗೇಶ್​ ಮನೋಳ್ಕರ್​ನಿಂದ ಗಿಫ್ಟ್ ವಿತರಣೆ ಮಾಡಿದ್ದಾರೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ ಮನೋಳ್ಕರ್ ಅರಿಶಿನ ಕುಂಕುಮ ಕಾರ್ಯಕ್ರಮ ನಡೆಸಿ ಮಹಿಳೆಯರಿಗೆ ಸೀರೆ, ಒಂದು ಹಾಟ್ ಬಾಕ್ಸ್ ವಿತರಿಸಿದ್ದಾರೆ. ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಮತದಾರರನ್ನು ಸೆಳೆಯಲು ಕಸರತ್ತು ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ