AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಪತರು ನಾಡಿನಲ್ಲಿ ಮರ ಕಡಿಯುವ ಶಬ್ದ ಆಲಿಸಿಕೊಂಡು ಹೋಗಿ ಶ್ರೀ ಗಂಧ ಕಳ್ಳರ ಮೇಲೆ ಫೈರಿಂಗ್, ತಮಿಳುನಾಡಿನ ಮೂವರು ಅರೆಸ್ಟ್

ಶ್ರೀ ಗಂಧ ಕಳ್ಳರ ಮೇಲೆ ಫೈರಿಂಗ್ ಮಾಡಲಾಗಿದ್ದು, ಈ ವೇಳೆ ಮೂರ್ತಿ ಎಂಬುವನಿಗೆ ಗುಂಡು ತಗಲಿ ಗಾಯಗೊಂಡಿದ್ದಾನೆ. ಕೃಷ್ಣ ಮತ್ತು ಮಲ್ಲಪ್ಪ ಎಂಬ ಕಳ್ಳರನ್ನು ಬಂಧಿಸಲಾಗಿದೆ. ಗಾಯಗಿಂಡ ಮೂರ್ತಿಯನ್ನು ತುಮಕೂರು ಜಿಲ್ಲಾಸ್ಪತ್ರೆ ಗೆ ದಾಖಲು ಮಾಡಲಾಗಿದೆ. ಶ್ರೀ ಗಂಧದ ಕಳ್ಳರು ತಮಿಳುನಾಡು ಮೂಲದವರು ಎನ್ನಲಾಗಿದೆ.

ಕಲ್ಪತರು ನಾಡಿನಲ್ಲಿ ಮರ ಕಡಿಯುವ ಶಬ್ದ ಆಲಿಸಿಕೊಂಡು ಹೋಗಿ ಶ್ರೀ ಗಂಧ ಕಳ್ಳರ ಮೇಲೆ ಫೈರಿಂಗ್, ತಮಿಳುನಾಡಿನ ಮೂವರು ಅರೆಸ್ಟ್
ಮರ ಕಡಿಯುವ ಶಬ್ದ ಆಲಿಸಿಕೊಂಡು ಹೋಗಿ ಶ್ರೀ ಗಂಧ ಕಳ್ಳರ ಮೇಲೆ ಫೈರಿಂಗ್
TV9 Web
| Updated By: ಸಾಧು ಶ್ರೀನಾಥ್​|

Updated on:Sep 06, 2021 | 8:30 AM

Share

ತುಮಕೂರು: ಮರ ಕಡಿಯುವ ಶಬ್ದ ಆಲಿಸಿಕೊಂಡು ಹೋಗಿ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹರಗಲದೇವಿ ಗುಡ್ಡ ಕಾವಲು ಮೀಸಲು ಅರಣ್ಯ ಪ್ರದೇಶದಲ್ಲಿ ಶ್ರೀ ಗಂಧ ಕಳ್ಳರ ಮೇಲೆ ಫೈರಿಂಗ್ ನಡೆಸಲಾಗಿದೆ. ಗುಬ್ಬಿ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಹಾಗೂ ಸಿಬ್ಬಂದಿ ಫೈರಿಂಗ್ ಮಾಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಇತ್ತಿಚೆಗೆ ಶ್ರೀ ಗಂದ ಮರಗಳ್ಳರ ಹಾವಳಿ ಹೆಚ್ಚಾಗಿದೆ.ಕಳೆದ 15 ದಿನಗಳ ಹಿಂದೆ ಕುಣಿಗಲ್ ತಾಲೂಕಿನ ಕಂಪ್ಲಾಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಶ್ರೀ ಗಂಧ ಕಡಿಯಲು ಮೂರು ಜನರ ತಂಡ ಹೋಗಿತ್ತು, ಈ ವೇಳೆ ಓರ್ವ ಶಿವರಾಜ್ ಅನ್ನೋ ವ್ಯಕ್ತಿ ಅರಣ್ಯ ಸಿಬ್ಬಂದಿ ಹೊಡೆದ ಗುಂಡಿಗೆ ಬಲಿಯಾಗಿದ್ದ, ಆ ಘಟನೆ ಮಾಸುವ ಮುನ್ನವೇ ಗುಬ್ಬಿ ತಾಲೂಕಿನ ಕಡಬ ಹೋಬಳಿ ಹರಗಲದೇವಿ ಗುಡ್ಡ ಸಂಖ್ಯೆ 1 ರ 1500 ಎಕರೆ ವಿಸ್ತೀರ್ಣದ ಮೀಸಲು ಅರಣ್ಯ ಪ್ರದೇಶದಲ್ಲಿ ಮತ್ತೆ ಘಟನೆ ನಡೆದಿದೆ.

ಭಾನುವಾರ ಸಂಜೆ ಶ್ರೀ ಗಂಧ ಕಳ್ಳರ ಮೇಲೆ ಫೈರಿಂಗ್ ಮಾಡಲಾಗಿದ್ದು, ಈ ವೇಳೆ ಮೂರ್ತಿ ಎಂಬುವನಿಗೆ ಗುಂಡು ತಗಲಿ, ತಲೆಗೆ ಗಾಯವಾಗಿದೆ. ಕೃಷ್ಣ ಮತ್ತು ಮಲ್ಲಪ್ಪ ಎಂಬ ಕಳ್ಳರನ್ನು ಬಂಧಿಸಲಾಗಿದೆ. ಗಾಯಗೊಂಡ ಮೂರ್ತಿಯನ್ನು ತುಮಕೂರು ಜಿಲ್ಲಾಸ್ಪತ್ರೆ ಗೆ ದಾಖಲು ಮಾಡಲಾಗಿದೆ. ಶ್ರೀ ಗಂಧದ ಕಳ್ಳರು ತಮಿಳುನಾಡು ಮೂಲದವರು ಎನ್ನಲಾಗಿದೆ.

Gubbi forest officials shoot sandalwood smugglers

ಒಟ್ಟು ಮೂವರ ಬಂಧನವಾಗಿದ್ದು, ಇನ್ನುಳಿದವರು ಪರಾರಿಯಾಗಿದ್ದಾರೆ.

ಒಟ್ಟು ಮೂವರ ಬಂಧನವಾಗಿದ್ದು, ಇನ್ನುಳಿದವರು ಪರಾರಿಯಾಗಿದ್ದಾರೆ. ಸುಮಾರು 12 ಜನ ಕಳ್ಳರು ಶ್ರೀ ಗಂಧ ಕಳ್ಳತನ ಮಾಡಲು ಬಂದಿದ್ದರು ಎಂದು ತಿಳಿದುಬಂದಿದೆ.  ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಉಳಿದ ಆರೋಪಿಗಳ ಶೋಧ ಕಾರ್ಯ ನಡೆಯುತ್ತಿದ್ದು, ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚಿಕ್ಕರಾಜೇಂದ್ರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಅಡುಗೆ ಮಾಡಿಕೊಳ್ಳುವ ಪಾತ್ರೆಗಳು ಕೂಡ ಪತ್ತೆಯಾಗಿದ್ದು, ದೊಡ್ಡ ಗ್ಯಾಂಗ್ ಅರಣ್ಯಕ್ಕೆ ಬಂದಿರಬಹುದು ಎನ್ನಲಾಗಿದೆ.

Gubbi forest officials shoot sandalwood smugglers

ಪರಾರಿಯಾಗಿರುವ ಆರೋಪಿಗಳಿಗಾಗಿ ತೀವ್ರ ಶೋಧ ನಡೆದಿದೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

(Gubbi forest officials shoot sandalwood smugglers)

Published On - 8:17 am, Mon, 6 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ