ಬದುಕಿರುವಾಗಲೇ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ತಿಥಿ ಕಾರ್ಡ್ ತಯಾರಿಸಿ ವಿಕೃತಿ! ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಯ್ತು ತಿಥಿ ಕಾರ್ಡ್ ಸಂಸ್ಕೃತಿ
ರಾಜ್ಯಸಭೆ ಚುನಾವಣೆಯಲ್ಲಿ ಗುಬ್ಬಿ ಎಸ್.ಆರ್.ಶ್ರೀನಿವಾಸ್ ಬಿಜೆಪಿಗೆ ಅಡ್ಡಮತದಾನ ಮಾಡಿದ್ದು, ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಹಾಗಾಗಿ ಬದುಕಿರುವಾಗಲೇ ತಿಥಿ ಕಾಡ್೯ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಕೃತಿ ಮೆರೆಯಲಾಗಿದೆ.
ತುಮಕೂರು: ಫೇಸ್ ಬುಕ್ನಲ್ಲಿ ತಿಥಿ ಕಾರ್ಡ್ ಸಂಸ್ಕೃತಿ ಹೆಚ್ಚಾಗುತ್ತಿದ್ದು, ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ಬದುಕಿರುವಾಗಲೇ ತಿಥಿ ಕಾಡ್೯ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಕೃತಿ ಮೆರೆಯಲಾಗಿದೆ. ಜೆಡಿಎಸ್ ಅಡ್ಡ ಮತದಾನ ಮಾಡಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಕಾಡ್೯ ಪೊಸ್ಟ್ ಮಾಡಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ. ಪ್ರಚಂಡ ಭೈರವ ಹೆಸರಿನಿಂದ ಪೊಸ್ಟ್ ಮಾಡಿದ್ದು, ಜೆಡಿಎಸ್ ಗ್ರೂಪ್ಗಳಿಗೆ ಶೇರ್ ಮಾಡಲಾಗಿದೆ. ಜೂನ್ 10ರಂದು ನಿಧನರಾಗಿದ್ದಾರೆ, ಜೂನ್ 21ರಂದು ಸ್ವಕ್ಷೇತ್ರ ಗುಬ್ಬಿಯಲ್ಲಿ ಕೈಲಾಸ ಸಮಾರಾಧಾನೆ ನಡೆಯಲಿದೆ ಎಂದು ಬರೆಯಲಾಗಿದೆ. ಶ್ರೀನಿವಾಸ್ರ ಅಭಿಮಾನಿಗಳು ಇದನ್ನು ನೋಡಿ ವಿಕೃತಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಅತ್ತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೂ ಶ್ರದ್ದಾಂಜಲಿ ಕಾರ್ಡ್ ಸಲ್ಲಿಸಲಾಗಿದೆ. ಎಂಎಲ್‌ಎ ಶ್ರೀನಿವಾಸ್ ಫ್ರಾನ್ಸ್ ಪೇಜ್ನಲ್ಲಿ ಹೆಚ್.ಡಿ. ಕುಮಾರಸ್ವಾಮಿ ಪೋಸ್ಟರ್ ಹಾಕಲಾಗಿದ್ದು, ತಿಥಿ ಕಾರ್ಡ್ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಜ್ಯಸಭೆ ಚುನಾವಣೆಯಲ್ಲಿ ಗುಬ್ಬಿ ಎಸ್.ಆರ್.ಶ್ರೀನಿವಾಸ್ ಬಿಜೆಪಿಗೆ ಅಡ್ಡಮತದಾನ ಮಾಡಿದ್ದು, ಜೆಡಿಎಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೇ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಕಾರ್ಯಕರ್ತರು ಶ್ರೀನಿವಾಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಜೆಡಿಎಸ್ ಕಾರ್ಯಕರ್ತರು ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಬದುಕಿದ್ದರೂ ಅವರ ಫೋಟೋ ಸಹಿತ ತಿಥಿ ಕಾರ್ಡ್ ತಯಾರಿಸಿ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆದಿದ್ದಾರೆ.
ಶ್ರೀನಿವಾಸ್ ಮನೆ ಎದುರು ಪ್ರತಿಭಟನೆ: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಹಿನ್ನೆಲೆ ತುಮಕೂರಿನ ವಿದ್ಯಾನಗರದಲ್ಲಿರುವ ಶಾಸಕ ಶ್ರೀನಿವಾಸ್ ಮನೆ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಜೆಡಿಎಸ್ ಕಾರ್ಯಕರ್ತರು ಮತ್ತು ಶಾಸಕರ ಬೆಂಬಲಿಗರು ಪರಸ್ಪರ ಮುಖಾಮುಖಿಯಾಗಿದ್ದಾರೆ. ಪರಿಸ್ಥಿತಿ ನಿಯಂತ್ರಿಸುವುದಕ್ಕೆ ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಕುಮಾರಸ್ವಾಮಿ ಒಬ್ಬ ದೊಡ್ಡ ನಾಟಕಕಾರ- ಶ್ರೀನಿವಾಸ್: ನನ್ನ ಮೇಲೆ ಮಾಡಿರೋ ಷಡ್ಯಂತ್ರ ಇದು. ಇದೇ ಕುಮಾರಸ್ವಾಮಿ ಕ್ರಾಸ್ ವೋಟ್ ಮಾಡ್ಸಿ ಅದನ್ನ ನನ್ನ ಮೇಲೆ ಹಾಕ್ತಿದ್ದಾನೆ. ಅವರಿಗೆ ಗೊತ್ತು ನಮ್ಮ ಅಭ್ಯರ್ಥಿ ಗೆಲ್ಲಲ್ಲ ಅಂತ. ಯಾವ್ದೋ ಬೇರೆ ಕ್ರಾಸ್ ವೋಟ್ ಮಾಡ್ಸಿ ಈ ರೀತಿಯಾಗಿ ಮಾಡಿದ್ದಾನೆ. ಅವನ ಯೋಗ್ಯತೆಗೆ ಯಾರು ವೋಟ್ ಹಾಕಲ್ಲ ಅಂತನೂ ಗೊತ್ತಿದೆ. ನನ್ನ ತೇಜೊವಧೆ ಮಾಡೋಕೆ ಈ ರೀತಿಯಾಗಿ ಮಾಡಿದ್ದಾನೆ. ನಾನು ಇವನಿಗೆ ಎದುರಿಕೊಂಡು, ಬೇರೆ ಅವರಿಗೆ ಎದುರಿಕೊಂಡು ಯಾರಿಗೂ ನಾನು ಕಚ್ಚೆ ಕಟ್ಟಲ್ಲ. ಯಾರಿಗೂ ಕೇರ್ ಮಾಡಲ್ಲ. ನಾನು ನನ್ನ ಸ್ವಾಭಿಮಾನ ಹಾಗೂ ನನ್ನ ಮನಸಾಕ್ಷಿ ವಿರುದ್ಧ ಯಾವತ್ತು ಹೊಗಲ್ಲ. ಇವರು ಇದೆಲ್ಲಾ ನಾಟಕ ಮಾಡ್ತಿದ್ದಾರೆ. ಕುಮಾರಸ್ವಾಮಿ ಒಬ್ಬ ದೊಡ್ಡ ನಾಟಕಕಾರ. ಒಂಥರ ಊಸರವಳ್ಳಿ ಇದ್ದ ಹಾಗೆ. ಅವನೊಬ್ಬನೆ ಸತ್ಯ ಹರಿಶ್ಚಂದ್ರ, ಅವನೊಬ್ಬನೆ ಸರ್ವಜ್ಞ ಅಂತ ತಿಳ್ಕೊಂಡಿದ್ದಾನೆ ಎಂದು ಶ್ರೀನಿವಾಸ್ ಕಿಡಿಕಾರಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:58 am, Sun, 12 June 22