ಎಚ್​ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ; ಮೂವರಿಗೆ ಗಂಭೀರ ಗಾಯ

ವಾಹನದಲ್ಲಿದ್ದ ಐವರ ಪೈಕಿ ಮೂವರು ತೀವ್ರವಾಗಿ ಗಾಯಗೊಂಡಿದ್ದರೆ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಎಚ್​ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ; ಮೂವರಿಗೆ ಗಂಭೀರ ಗಾಯ
ಕುಣಿಗಲ್ ತಾಲ್ಲೂಕಿನಲ್ಲಿ ಅಪಘಾತಕ್ಕೀಡಾದ ಎಚ್​ಡಿ ಕುಮಾರಸ್ವಾಮಿ ಬೆಂಗಾವಲು ವಾಹನ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 02, 2022 | 12:12 PM

ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ತಿಪ್ಪೂರು ಗೇಟ್ ಬಳಿ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ವಾಹನಕ್ಕೆ ಅಪಘಾತವಾಗಿದೆ. ವಾಹನದಲ್ಲಿದ್ದ ಐವರ ಪೈಕಿ ಮೂವರು ತೀವ್ರವಾಗಿ ಗಾಯಗೊಂಡಿದ್ದರೆ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇತ್ತೀಚೆಗಷ್ಟೇ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಹಾಗೂ ಬೆಳ್ಳಾರೆ ಗ್ರಾಮಗಳಿಗೆ ಭೇಟಿ ನೀಡಿ ಫಾಜಿಲ್ ಮಂಗಳಪೇಟೆ ಮತ್ತು ಪ್ರವೀಣ್ ನೆಟ್ಟಾರ್ ಕುಟುಂಬ ಸದಸ್ಯರಿಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದರು. ಮಂಗಳೂರಿನಿಂದ ಬೆಂಗಳೂರಿಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ.

ಬೆಂಗಾವಲು ವಾಹನದಲ್ಲಿದ್ದ ಪೊಲೀಸ್ ಸಿಬ್ಬಂದಿ ಮಹೇಶ್, ಮಂಜುನಾಥ್ ತೀವ್ರವಾಗಿ ಗಾಯಗೊಂಡಿದ್ದಾರೆ. ಜಗದೀಶ್, ಆನಂದ್ ಮತ್ತು ಹರೀಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಮೃತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮತ್ತು ಸುರತ್ಕಲ್​ನ ಪಾಝಿಲ್ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ನಂತರ ಕುಮಾರಸ್ವಾಮಿ ಹೆಲಿಕಾಪ್ಟರ್​ನಲ್ಲಿ ಬೆಂಗಳೂರಿಗೆ ಹಿಂದಿರುಗಿದ್ದರು. ಮಾಜಿ ಮುಖ್ಯಮಂತ್ರಿಯ ಬೆಂಗಾವಲು ಕರ್ತವ್ಯಕ್ಕೆ ತೆರಳಿದ್ದ ಪೊಲೀಸ್ ಸಿಬ್ಬಂದಿ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಮೃತೂರು ಸರ್ಕಲ್ ಇನ್​ಸ್ಪೆಕ್ಟರ್ ಅರುಣ್ ಸಾಲಂಕೆ ಮತ್ತು ಪಿಎಸ್​ಐ ಮಂಗಳಗೌರಮ್ಮ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Published On - 11:32 am, Tue, 2 August 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು