JDS ಅಧಿಕಾರಕ್ಕೆ ಬಾರದಿದ್ದರೆ ವಿಸರ್ಜನೆ ಮಾಡುವ ಮಾತನ್ನು ಒತ್ತಿ ಒತ್ತಿ ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ

HD Kumaraswamy: ರಾಜ್ಯದಲ್ಲಿ ಒಂದು ಸವಾಲನ್ನು ಸ್ವೀಕಾರ ಮಾಡಿದ್ದೇವೆ. ಮುಂದಿನ ಚುನಾವಣೆ ನಂತರ ಐದು ವರ್ಷಗಳ ಕಾರ್ಯಕ್ರಮದಲ್ಲಿ ನಾವು ಹೇಳಿರುವ ಎಲ್ಲಾ ಯೋಜನೆಗಳನ್ನು ಪೂರ್ಣ ಮಾಡಲಿಲ್ಲ ಎಂದರೆ ಜಾತ್ಯಾತೀತ ಜನತಾದಳವನ್ನೇ ವಿಸರ್ಜನೆ ಮಾಡ್ತೀವಿ. ಮತ್ತೆ ನಿಮ್ಮ ಮುಂದೆ ಮತ ಕೇಳಲಿಕ್ಕೆ ಬರೋದಿಲ್ಲ. ತೀರ್ಮಾನವನ್ನು ನನ್ನ ನಾಡಿನ ಜನಕ್ಕೆ ಬಿಟ್ಟಿದ್ದೇನೆ ಎಂದು ಹೆಚ್​ ಡಿ ಕುಮಾರಸ್ವಾಮಿ ಒತ್ತಿ ಒತ್ತಿ ಹೇಳಿದ್ದಾರೆ.

JDS ಅಧಿಕಾರಕ್ಕೆ ಬಾರದಿದ್ದರೆ ವಿಸರ್ಜನೆ ಮಾಡುವ ಮಾತನ್ನು ಒತ್ತಿ ಒತ್ತಿ ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
JDS ವಿಸರ್ಜನೆ ಮಾತುಗಳನ್ನು ಒತ್ತಿ ಒತ್ತಿ ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 28, 2022 | 7:20 PM

ತುಮಕೂರು: ಕರ್ನಾಟಕ ಅಸೆಂಬ್ಲಿ ಚುನಾವಣೆ ಸಮೀಪಿಸುತ್ತಿದ್ದು (Karnataka assembly elections 2023) ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಅವರು ತುಮಕೂರು ತಾಲೂಕಿನ ಹೆಬ್ಬೂರಿನಲ್ಲಿ ರಾಜಕೀಯ ಮಾತುಗಳನ್ನಾಡಿದ್ದಾರೆ. ಅದರಲ್ಲೂ ಮುಖ್ಯವಾಗಿ ತಮ್ಮ ಪಕ್ಷದ ಭವಿಷ್ಯದ ಬಗ್ಗೆ ಮಾತನಾಡಿರುವ ಹೆಚ್​ ಡಿ ಕುಮಾರಸ್ವಾಮಿ (HD Kumaraswamy) ಜಾತ್ಯಾತೀತ ಜನತಾದಳ ಪಕ್ಷವನ್ನೇ (ಜೆಡಿಎಸ್ –JDS) ವಿಸರ್ಜನೆ ಮಾಡ್ತೀವಿ. ಮತ್ತೆಂದೂ ಪಕ್ಷದ ವತಿಯಿಂದ ಮತ ಕೇಳಲಿಕ್ಕೆ ನಿಮ್ಮ ಮುಂದೆ ಬರೋದಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಒಂದು ಸವಾಲನ್ನು ಸ್ವೀಕಾರ ಮಾಡಿದ್ದೇವೆ. ಮುಂದಿನ ಚುನಾವಣೆ ನಂತರ ಐದು ವರ್ಷಗಳ ಕಾರ್ಯಕ್ರಮದಲ್ಲಿ ನಾವು ಹೇಳಿರುವ ಎಲ್ಲಾ ಯೋಜನೆಗಳನ್ನು ಪೂರ್ಣ ಮಾಡಲಿಲ್ಲ ಎಂದರೆ ಜಾತ್ಯಾತೀತ ಜನತಾದಳವನ್ನೇ ವಿಸರ್ಜನೆ ಮಾಡ್ತೀವಿ. ಮತ್ತೆ ನಿಮ್ಮ ಮುಂದೆ ಮತ ಕೇಳಲಿಕ್ಕೆ ಬರೋದಿಲ್ಲ. ತೀರ್ಮಾನವನ್ನು ನನ್ನ ನಾಡಿನ ಜನಕ್ಕೆ ಬಿಟ್ಟಿದ್ದೇನೆ ಎಂದು ಒತ್ತಿ ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಜಲಧಾರೆ ಭಾಷಣದ ವೇಳೆ ಕುಮಾರಸ್ವಾಮಿ ಕಣ್ಣೀರಧಾರೆ – ಬಿಜೆಪಿ ಜೊತೆ ಸರ್ಕಾರ ಮಾಡಿ ನನ್ನ ತಂದೆ ಆರೋಗ್ಯ ಕೆಡಲು ಕಾರಣನಾದೆ

ಕಳೆದ ಎರಡು ವರ್ಷಗಳಿಂದ ಕೋವಿಡ್ ಸಂದರ್ಭದಲ್ಲಿ ನಾವು ಸುಮ್ಮನೇ ಕೂತಿಲ್ಲ. ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡ್ತಿದ್ದೇವೆ. ಈಗ ಪ್ರಮುಖವಾಗಿ ಐದು ಕಾರ್ಯಕ್ರಮಗಳ ಯೋಜನೆಯನ್ನ ಮಾಡಿದ್ದೇವೆ. ಒಂದು ಶಿಕ್ಷಣ, ಮತ್ತೊಂದು ಆರೋಗ್ಯ, ನೀರಾವರಿ ಯೋಜನೆ ಹೀಗೆ ಹಲವು ಯೋಜನೆಗಳನ್ನು ಮಾಡಿದ್ದೇವೆ. ಶಿಕ್ಷಣದಲ್ಲಿ ಎಲ್.ಕೆ.ಜಿಯಿಂದ ಪಿಯುಸಿವರೆಗೂ ಉಚಿತ ಶಿಕ್ಷಣ ನೀಡುತ್ತೇವೆ. ಖಾಸಗಿ ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು ಓದಿಸಲು, ನೀವು ಸಾಲಗಾರರಾಗುವುದನ್ನು ತಪ್ಪಿಸಲು ಈ ಕ್ರಮ. ಉಚಿತವಾಗಿ ಇಂಗ್ಲಿಷ್ ಮಾಧ್ಯಮದ ಶಿಕ್ಷಣವನ್ನೂ ಕೊಡ್ತೀವಿ. ಇನ್ನು ಉಚಿತ ಆರೋಗ್ಯ ಸೇವೆ. ಪ್ರತಿ ಗ್ರಾಮೀಣ ಮಟ್ಟದಲ್ಲಿ 24 ಗಂಟೆ ವೈದ್ಯರು ಸೇವೆ ಮಾಡುವಂತಹ ಯೋಜನೆ ರೂಪಿಸಿದ್ದೇವೆ.

ರಾಜ್ಯದ 6 ಸಾವಿರ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಆರೋಗ್ಯ ಸೇವೆ ಒದಗಿಸುತ್ತೇವೆ. ಹಾಗಾಗಿ ನೀವು ಆಶೀರ್ವಾದ ಮಾಡಿ ಐದು ವರ್ಷದ ಸರ್ಕಾರವನ್ನು ನೀಡಿದರೆ ಜನರ ಎಲ್ಲ ಸಮಸ್ಯೆಯನ್ನೂ ಬಗೆಹರಿಸುವ ಕೆಲಸ ಜೆಡಿ ಎಸ್​ ಕಡೆಯಿಂದ ನಾನು ಮಾಡ್ತೇನೆ. ಈ ಸಮಸ್ಯೆಗಳನ್ನು ಪರಿಹರಿಸದೇ ಹೋದರೆ ಉಚಿತವಾದ ಆರೋಗ್ಯ ಸೇವೆ ಯೋಜನೆ ಕೊಡದೆ ಇದ್ರೆ, ಜಾತ್ಯಾತೀತ ಜನತಾದಳ ನಿಮ್ಮ ಮುಂದೆ ಮತ್ತೆಂದೂ ಓಟ್ ಕೇಳುವುದಕ್ಕೆ ಬರೋದಿಲ್ಲ. ಅದಕ್ಕೋಸ್ಕರ ನಿಮ್ಮ ಮುಂದೆ ಈಗ ಬಂದಿದ್ದೇನೆ ಎಂದು ತುಮಕೂರು ತಾಲೂಕಿನ ಹೆಬ್ಬೂರಿನ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ (Janata Jaladhare) ಹೆಚ್‌ ಡಿ ಕುಮಾರಸ್ವಾಮಿ ಭಾಷಣ ಮಾಡುತ್ತಾ ಈ ಮಾತುಗಳನ್ನು ಹೇಳಿದರು.

H.D.Kumaraswamy: ಜಾತ್ಯಾತೀತ ಜನತಾ ದಳ ಪಾರ್ಟಿ ಮುಚ್ಚುವ ಮಾತಾಡಿದ್ದೇಕೆ ಮಾಜಿ ಸಿಎಂ ಎಚ್​ಡಿಕೆ..?

ಇದನ್ನೂ ಓದಿ: PSI Recruitment Scam: ಸಿಐಡಿ ನೋಟಿಸ್ ಗೆ ವಕೀಲರ ಮೂಲಕ ಶಾಸಕ ಪ್ರಿಯಾಂಕ್ ಖರ್ಗೆ ಕೊಟ್ಟರು ಉತ್ತರ

Published On - 6:02 pm, Thu, 28 April 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ