ಗುಬ್ಬಿ ಜೆಡಿಎಸ್ ಶಾಸಕ​​ಗೆ ಹೆಚ್​​ಡಿ ಕುಮಾರಸ್ವಾಮಿ ಫೋನ್ ಕಾಲ್, ಮನವೊಲಿಕೆ ಯತ್ನ: ಆದರೆ ಮಾರ್ಮಿಕ ಪ್ರಶ್ನೆ ಎತ್ತಿದ ಶ್ರೀನಿವಾಸ್

ಇನ್ನೇನು ರಾಜ್ಯ ಅಸೆಂಬ್ಲಿಗೆ ಸಾರ್ವತ್ರಿಕ ಚುನಾವಣೆ ಎದುರಿಗೇ ಇದೆ. ಮುಂದಿನ ವರ್ಷ ಇಷ್ಟೊತ್ತಿಗೆ ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿರುತ್ತದೆ. ಇದನ್ನು ಮನಗಂಡ ಪ್ರಮುಖ ರಾಜಕೀಯ ಪಕ್ಷಗಳು ಅದಾಗಲೇ ಚುನಾವಣೆ ಮೋಡ್​ಗೆ ಬಂದಿವೆ. ತಾಜಾ ಬೆಳವಣಿಗೆಯಲ್ಲಿ ಗುಬ್ಬಿ ಜೆಡಿಎಸ್ ಶಾಸಕ​​ ಶ್ರೀನಿವಾಸ್​ಗೆ ಹೆಚ್​​ಡಿ ಕುಮಾರಸ್ವಾಮಿ ಫೋನ್ ಮಾಡಿ, ಮನವೊಲಿಕೆ ಯತ್ನ ನಡೆಸಿದ್ದಾರೆ.

ಗುಬ್ಬಿ ಜೆಡಿಎಸ್ ಶಾಸಕ​​ಗೆ ಹೆಚ್​​ಡಿ ಕುಮಾರಸ್ವಾಮಿ ಫೋನ್ ಕಾಲ್, ಮನವೊಲಿಕೆ ಯತ್ನ: ಆದರೆ ಮಾರ್ಮಿಕ ಪ್ರಶ್ನೆ ಎತ್ತಿದ  ಶ್ರೀನಿವಾಸ್
ಗುಬ್ಬಿ ಜೆಡಿಎಸ್ ಶಾಸಕ​​ಗೆ ಹೆಚ್​​ಡಿ ಕುಮಾರಸ್ವಾಮಿ ಫೋನ್ ಕಾಲ್, ಮನವೊಲಿಕೆ ಯತ್ನ: ಆದರೆ ಮಾರ್ಮಿಕ ಪ್ರಶ್ನೆ ಎತ್ತಿದ ಶ್ರೀನಿವಾಸ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:May 27, 2022 | 2:39 PM

ತುಮಕೂರು: ಇನ್ನೇನು ರಾಜ್ಯ ಅಸೆಂಬ್ಲಿಗೆ ಸಾರ್ವತ್ರಿಕ ಚುನಾವಣೆ (Karnataka Assembly Elections 2023) ಎದುರಿಗೇ ಇದೆ. ಮುಂದಿನ ವರ್ಷ ಇಷ್ಟೊತ್ತಿಗೆ ರಾಜ್ಯದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿರುತ್ತದೆ. ಇದನ್ನು ಮನಗಂಡ ಪ್ರಮುಖ ರಾಜಕೀಯ ಪಕ್ಷಗಳು ಅದಾಗಲೇ ಚುನಾವಣೆ ಮೋಡ್​ಗೆ ಬಂದಿವೆ. ಅದರಲ್ಲೂ ಪ್ರಮುಖ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್​ ಮತ್ತು ಜೆಡಿಎಸ್ ಚುನಾವಣೆ ತಂತ್ರಗಾರಿಕೆ ಹೆಣೆಯುವುದರಲ್ಲಿ ಮಗ್ನವಾಗಿವೆ. ಈ ವಿದ್ಯಮಾನಗಳ ಸಮ್ಮುಖದಲ್ಲಿ ಸದ್ಯಕ್ಕೆ ಜೆಡಿಎಸ್ 123 ಗುರಿಯೊಂದಿಗೆ ತುಸು ಹೆಚ್ಚೇ ಅನ್ನುವಷ್ಟು ಚುನಾವಣೆಯತ್ತ ಮುಖ ಮಾಡಿದೆ. ಜೆಡಿಎಸ್ ಶಾಸಕ, ಮಾಜಿ ಮುಖ್ಯಮಂತ್ರಿ ಹೆಚ್​​ಡಿ ಕುಮಾರಸ್ವಾಮಿ​ ಅವ್ರು (HD Kumaraswamy) ಇತ್ತೀಚೆಗಷ್ಟೇ ತಮ್ಮ ಪಕ್ಷದ ಶಾಸಕ, ಗುಬ್ಬಿಯ ಎಸ್.ಆರ್. ಶ್ರೀನಿವಾಸ್​​ ಅವರಿಂದ ವಿಮುಖರಾಗಿದ್ದರು. ಇಬ್ಬರೂ ಪರಸ್ಪರ ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿದ್ದರು. ಆದರೆ ತಾಜಾ ಬೆಳವಣಿಗೆಯಲ್ಲಿ ಶ್ರೀನಿವಾಸ್ ಅವರಿಗೆ ಮತ್ತೆ ಹೆಚ್​​ಡಿಕೆ ಗಾಳ ಹಾಕಿದ್ದಾರೆ. ಅಸಮಾಧಾನಗೊಂಡಿದ್ದ ಶಾಸಕ ಶ್ರೀನಿವಾಸ್​ ಮನವೊಲಿಕೆ ಯತ್ನ ನಡೆಸಿದ್ದಾರೆ. ಕುಮಾರಸ್ವಾಮಿ​ ಅವರು ಶಾಸಕ ಶ್ರೀನಿವಾಸ್​ಗೆ (Gubbi JDS MLA SR Srinivas) 2 ಬಾರಿ ಫೋನ್ ಕರೆ ಮಾಡಿದ್ದಾರೆ.

Also Read:

ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋಗೆ ನಟ ರಿಷಭ್ ಶೆಟ್ಟಿ ಚಾಲನೆ; 3 ದಿನಗಳ ಕಾಲ ನಡೆಯುವ ಎಕ್ಸ್ಪೋಗೆ ಭೇಟಿ ಕೊಟ್ಟು ಚಿನ್ನ ಗೆಲ್ಲಿ

ಅಸಮಾದಾನಿತ ಶಾಸಕ ಮನವೊಲಿಕೆಗೆ ಕುಮಾರಸ್ವಾಮಿ ಕಸರತ್ತು ನಡೆಸಿದ್ದಾರೆ. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ತುಮಕೂರು ಜಿಲ್ಲೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ನಾನು ಎಂದೂ ಜೆಡಿಎಸ್ ಬಿಟ್ಟು ಹೋಗುತ್ತೇನೆ ಎಂದು ಹೇಳಿಲ್ಲ. ಜೆಡಿಎಸ್ ಮುಖಂಡರೇ ಗುಬ್ಬಿ ವಿಧಾನ ಸಭಾ ಕ್ಷೇತ್ರದಲ್ಲಿ ಬೇರೊಬ್ಬ ವ್ಯಕ್ತಿಯನ್ನು ಕರೆದುಕೊಂಡು ಬಂದಿದ್ದಾರೆ. ಆ ವ್ಯಕ್ತಿಯನ್ನೇ ಮುಂದಿನ ಜೆಡಿಎಸ್ ಅಭ್ಯರ್ಥಿಯೆಂದು ಘೋಷಣೆ ಮಾಡಿದ್ದಾರೆ. ಆದ್ರೀಗ ಇದೀಗ ಮತ್ತೆ ನನಗೆ ಕೆರೆ ಮಾಡುತ್ತಿದ್ದಾರೆ. ಇತ್ತೀಚೆಗೆ ಮಾತುಕತೆಗೆ ಜೆಡಿಎಸ್ ಮುಖಂಡರು ಆಹ್ವಾನಿಸುತ್ತಿದ್ದಾರೆ. ಆದರೆ ನಾನು ಜೆಡಿಎಸ್ ಬಿಟ್ಟಿಲ್ಲ ಎಂದು ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ. ಇದೀಗ ಗುಬ್ಬಿ ವಿಧಾನ ಸಭಾ ಕ್ಷೇತ್ರದಲ್ಲಿ ವ್ಯಕ್ತಿಯೊಬ್ಬನನ್ನು ಕರೆದುಕೊಂಡುಬಂದು ಅವರೇ ಮುಂದಿನ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದು. ಆತ ಕ್ಷೇತ್ರದಲ್ಲಿ ಹಣ ಖರ್ಚು ಮಾಡಿ, ಜನತಾ ಜಲಧಾರೆ ಕಾರ್ಯಕ್ರಮ ಸಹ ಮಾಡಿದ್ದಾನೆ. ಆತನನ್ನು ಇದೀಗ ಜೆಡಿಎಸ್ ಮುಖಂಡರು ನಡುನೀರಿನಲ್ಲಿ ಕೈಬಿಟ್ಟಂತೆ ಆಗುವುದಿಲ್ಲವೇ!? ಎಂದು ತುಮಕೂರಿನ ಗುಬ್ಬಿಯಲ್ಲಿ ಶಾಸಕ ಎಸ್.ಆರ್. ಶ್ರೀನಿವಾಸ್ ಮಾರ್ಮಿಕ ಪ್ರಶ್ನೆ ಎತ್ತಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Fri, 27 May 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ