AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ಫ್ಯೂಸ್ ಕಿತ್ತು ಬಿಟ್ಟಿದ್ದೇವೆ; ವೈರಲ್ ಆಯ್ತು ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ

ಜೆಡಿಎಸ್ ಎಂಎಲ್​ಸಿ ಬೆಮೆಲ್ ಕಾಂತರಾಜು ಅವರನ್ನು ಯಾರವನು? ಯಾವ ಪಕ್ಷದವನು ಎಂದು ಪ್ರಶ್ನಿಸಿದ್ದ ಕುಮಾರಸ್ವಾಮಿ, ಅವನು ಪಕ್ಷ ಬಿಟ್ಟು ತುಂಬಾ ದಿನ ಆಯಿತು. ಅವನ ಬಗ್ಗೆ ಮಾತನಾಡಬೇಡಿ. ಪಕ್ಷದ ಬಾಗಿಲು ತೆರೆದಿದೆ.

ಕಾಂಗ್ರೆಸ್​ನ ಫ್ಯೂಸ್ ಕಿತ್ತು ಬಿಟ್ಟಿದ್ದೇವೆ; ವೈರಲ್ ಆಯ್ತು ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
TV9 Web
| Edited By: sandhya thejappa|

Updated on: Aug 24, 2021 | 9:37 AM

Share

ತುಮಕೂರು: ಹಾಸನದಿಂದ ಬೆಂಗಳೂರಿಗೆ ತೆರಳುವಾಗ ಮಾರ್ಗ ಮಧ್ಯೆ ತುರುವೇಕೆರೆ ಜೆಡಿಎಸ್ (JDS) ಮುಖಂಡರ ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ್ದ ಕುಮಾರಸ್ವಾಮಿ ಹೇಳಿಕೆಗಳು ಇದೀಗ ವೈರಲ್ ಆಗುತ್ತಿದೆ. ಕಾಂಗ್ರೆಸ್​ನಿಂದ ಜೆಡಿಎಸ್​ಗೆ ಯಾವುದೇ ರೀತಿಯ ಶಾಕ್ ಇಲ್ಲ. ಜೆಡಿಎಸ್ ನಾಯಕರನ್ನು ಕಾಂಗ್ರೆಸ್ ಸೆಳೆಯುತ್ತಿದೆ ಎಂಬ ವರದಿ ಸುಳ್ಳು. ನಾವು ಕರೆಂಟ್ ಹರಿಯಲು ಬಿಟ್ಟಿಲ್ಲ. ಕಾಂಗ್ರೆಸ್ನ ಫ್ಯೂಸ್ ಕಿತ್ತು ಬಿಟ್ಟಿದ್ದೇವೆ. ನಮಗೆ ಹೇಗೆ ಅವರು ಶಾಕ್ ಕೊಡುತ್ತಾರೆ ಅಂತ ಮಾಜಿ ಸಿಎಂ ಹೇಳಿದ್ದರು. ಈ ಹೇಳಿಕೆಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದೇ ವೇಳೆ ಜೆಡಿಎಸ್ ಎಂಎಲ್​ಸಿ ಬೆಮೆಲ್ ಕಾಂತರಾಜು ಅವರನ್ನು ಯಾರವನು? ಯಾವ ಪಕ್ಷದವನು ಎಂದು ಪ್ರಶ್ನಿಸಿದ್ದ ಕುಮಾರಸ್ವಾಮಿ, ಅವನು ಪಕ್ಷ ಬಿಟ್ಟು ತುಂಬಾ ದಿನ ಆಯಿತು. ಅವನ ಬಗ್ಗೆ ಮಾತನಾಡಬೇಡಿ. ಪಕ್ಷದ ಬಾಗಿಲು ತೆರೆದಿದೆ. ಬರೋರು ಬರಬಹುದು. ಹೋಗುವವರು ಹೋಗಬಹುದು ಎಂದು ಹೇಳಿದ್ದಾರೆ.

ಜೆಡಿಎಸ್ ಹೋರಾಟ ಆರಂಭ ಎಂದ ಕುಮಾರಸ್ವಾಮಿ ನಿನ್ನೆ (ಆಗಸ್ಟ್ 23) ಹುಬ್ಬಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಜನಾಶೀರ್ವಾದ ಯಾತ್ರೆಯಲ್ಲಿ ಯಾವುದೇ ಸಂದೇಶ ಇಲ್ಲ. ಗುಂಡು ಹಾರಿಸಿ ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ. ಹಾರ ತುರಾಯಿ ಹಾಕಿಕೊಂಡು ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ. ಕೊರೊನಾ ನಿಯಮ ಕೂಡಾ ವ್ಯಾಪಕವಾಗಿ ಉಲ್ಲಂಘಿಸಲಾಗುತ್ತಿದೆ. ಕಾಂಗ್ರೆಸ್ ನಾಯಕರಿಂದಲೂ ಸಭೆ, ಸಮಾರಂಭಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ. ರಾಜಕೀಯ ನಾಯಕರಾದ ನಾವೇ ನಿಯಮ ಉಲ್ಲಂಘಿಸುತ್ತಿದ್ದೇವೆ ಎಂದು ಹೇಳಿದರು.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಗ್ರಹಿಸಿ ಆಲಮಟ್ಟಿಯಿಂದ, ಮಹದಾಯಿ ಯೋಜನೆಗಾಗಿ ಬೆಳಗಾವಿಯಿಂದ ಪಾದಯಾತ್ರೆ ಮಾಡುತ್ತೇವೆ. ಎತ್ತಿನಹೊಳೆ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತೇವೆ. ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ನ್ಯಾಯ ಸಿಗುತ್ತಿಲ್ಲ. ಪ್ರಾದೇಶಿಕ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಕೇಂದ್ರದ ಕಣ್ಣು ತೆರೆಸಲು ಪಾದಯಾತ್ರೆ ಮಾಡುತ್ತೇವೆ. ಕೊರೊನಾ ಕಡಿಮೆಯಾದರೆ ಇದೇ ವಿಜಯದಶಮಿಯಿಂದ ನಮ್ಮ ಹೋರಾಟ ಆರಂಭವಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ

ಮೈಸೂರಿನಲ್ಲಿ ಗರಿಗೆದರಿದ ಪಾಲಿಕೆ ಉಪಚುನಾವಣೆ; 6 ನಾಮಪತ್ರ ಸಲ್ಲಿಕೆ

ಇದೇ ಮೊದಲ ಬಾರಿಗೆ ಐವರು ಮಹಿಳಾ ಅಧಿಕಾರಿಗಳಿಗೆ ಕರ್ನಲ್ ದರ್ಜೆಯ ಬಡ್ತಿ​ ನೀಡಿದ ಭಾರತೀಯ ಸೇನೆ

(HD Kumaraswamys statements are viral in social media)

Follow Us
TV9 Web
TV9 Web

TV9 Kannada

Read More
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
Live: ಹೆಚ್.ಡಿ. ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರಪ್ರಸಾರ
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಜಿಬಿಎಗೆ 2.77 ಕೋಟಿ ರೂ. ದಂಡ ವಿಧಿಸಿದ ಹೈಕೋರ್ಟ್!
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಆರ್​ಆರ್ ನಗರದಲ್ಲಿ ವ್ಯಕ್ತಿಯ ಕೊಂದಿದ್ದ ಕಾಡಾನೆ ಕೊನೆಗೂ ಕಾಡಿಗೆ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಧಾರಾಕಾರ ಮಳೆಗೆ ವೈಟ್​ಫಿಲ್ಡ್, ಮಾರತ್ತಹಳ್ಳಿ, ಔಟರ್ ರಿಂಗ್ ರಸ್ತೆ ಜಲಾವೃತ
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ