ಹುಟ್ಟುಹಬ್ಬದಂದೇ ಹೆಲ್ತ್ ಇನ್ಸ್‌ಪೆಕ್ಟರ್​​ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಲ್ತ್ ಇನ್ಸ್‌ಪೆಕ್ಟರ್​​​​ ಒಬ್ಬರ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಹುಟ್ಟುಹಬ್ಬದ ದಿನದಂದೇ ಆತ್ಮಹತ್ಯೆಗೆ ಶರಣಾದರಾ ಎಂಬ ಅನುಮಾನಗಳು ಹುಟ್ಟುಕೊಂಡಿವೆ. ಮಗಳು ದೂರು ನೀಡಿದ ಬಳಿಕ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಹುಟ್ಟುಹಬ್ಬದಂದೇ ಹೆಲ್ತ್ ಇನ್ಸ್‌ಪೆಕ್ಟರ್​​ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ
ಪ್ರಾತಿನಿಧಿಕ ಚಿತ್ರ
Image Credit source: ipleaders
Edited By:

Updated on: Mar 30, 2026 | 10:41 PM

ತುಮಕೂರು, ಮಾರ್ಚ್​ 30: ಖಾಸಗಿ ಜಾಗವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಹೆಲ್ತ್ ಇನ್ಸ್‌ಪೆಕ್ಟರ್ (Food Inspector)​​​ ಶವ ಪತ್ತೆ (Death) ಆಗಿರುವಂತಹ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತಾವರೆಕೆರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಮೇಶ್​​ ಮೃತ ಹೆಲ್ತ್ ಇನ್ಸ್‌ಪೆಕ್ಟರ್. ಹುಟ್ಟುಹಬ್ಬದ ದಿನವೇ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ಆಗಿದ್ದು, ಸದ್ಯ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಸಾವಿನ ಬಗ್ಗೆ ದೂರು ನೀಡಿದ ಬಳಿಕ ಪೊಲೀಸರು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ.

ನಡೆದಿದ್ದೇನು?

ವರ್ಷದ ಹಿಂದೆ ಸ್ಕ್ಯಾವೆಂಜರ್ ಆಕ್ಟ್ ಅಡಿ ಉಮೇಶ್​ ಅಮಾನತಾಗಿದ್ದರು. ನಾಲ್ಕು ತಿಂಗಳ ಬಳಿಕ ಮತ್ತೆ ಹೆಲ್ತ್ ಆಫೀಸರ್​​ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಪ್ರಸ್ತುತ ಹುಲಿಕುಂಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆ ಆಗಿದೆ. ಅದರಲ್ಲೂ ಹುಟ್ಟುಹಬ್ಬದ ದಿನದಂದೇ ಹೀಗಾಗಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇದನ್ನೂ ಓದಿ: ಹಸುಗೂಸಿಗೆ ಹಾಲುಣಿಸಿದ ಕೆಲವೇ ಕ್ಷಣದಲ್ಲಿ ತಾಯಿ ಸಾವು: ಮಹಿಳಾ ಉದ್ಯೋಗಿ ಸಾವಿನ ಸುತ್ತ ಅನುಮಾನದ ಹುತ್ತ

ಸದ್ಯ ಸ್ಥಳಕ್ಕೆ ತಾವರೇಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತರ ಕುಟುಂಬಸ್ಥರ ದೂರಿಗಾಗಿ ಕಾಯುತ್ತಿದ್ದಾರೆ. ಇನ್ನು ತಂದೆಯ ಸಾವಿನ ಸಂಗತಿ ತಿಳಿದು ಉತ್ತರ ಭಾರತದಿಂದ ಉಮೇಶ್ ಅವರ ಮಗಳು ಬರುತ್ತಿದ್ದಾರೆ. ಮಗಳು ಬಂದ ನಂತರ ಸಾವಿನ ಬಗ್ಗೆ ದೂರು ನೀಡಿದ ಬಳಿಕ ಪೊಲೀಸರು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ.

ನಿಯಂತ್ರಣ ತಪ್ಪಿ ಬೈಕ್​ನಿಂದ ಬಿದ್ದು ಇಬ್ಬರು ಸವಾರರ ಸಾವು

ನಿಯಂತ್ರಣ ತಪ್ಪಿ ಬೈಕ್​ನಿಂದ ಬಿದ್ದು ಇಬ್ಬರು ಸವಾರರು ಸಾವನ್ನಪ್ಪಿರುವಂತಹ ಘಟನೆ ತುಮಕೂರು ತಾಲೂಕಿನ ನಾಗವಲ್ಲಿ ಗ್ರಾಮದ ಬಳಿ ನಡೆದಿದೆ. ರಂಗನಾಥಪುರದ ಪ್ರಸಾದ್(20) ಮತ್ತು ವಸಂತ್(22) ಮೃತರು.

ಇದನ್ನೂ ಓದಿ: ಪ್ರತ್ಯೇಕ ಘಟನೆ: ರಜೆ ತಂದ ಆಪತ್ತು; ಈಜಲು ತೆರಳಿದ್ದ ಐವರು ಬಾಲಕರು ನೀರುಪಾಲು

ರಂಗನಾಥಪುರದಿಂದ ತುಮಕೂರು ಕಡೆಗೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ತೀವ್ರ ರಕ್ತಸ್ರಾವವಾಗಿ ಪ್ರಸಾದ್, ವಸಂತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us