AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಮಾವತಿ ಲಿಂಕಿಂಗ್ ಕೆನಾಲ್ ಕದನ: ‘ನಾಲ್ಕು ಗೋಡೆಗಳ ಮಧ್ಯೆ ವಿರೋಧಿಸಿದ್ದೇನೆ’ ಎಂದ ಗುಬ್ಬಿ ಶಾಸಕ, ರಾಮಲಿಂಗಾರೆಡ್ಡಿ ಹೇಳಿದ್ದೇನು?

ಹೇಮಾವತಿ ಲಿಂಕಿಂಗ್ ಕೆನಾಲ್ ಯೋಜನೆ ವಿವಾದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿಗಳ ಕನಸಿನ ಯೋಜನೆ ಎನ್ನಲಾದ ಈ ಕಾಮಗಾರಿಗೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದ ಹಿತಕ್ಕಾಗಿ ಪಕ್ಷದೊಳಗೂ ವಿರೋಧ ವ್ಯಕ್ತಪಡಿಸಿರುವುದಾಗಿ ಹೇಳಿದ್ದಾರೆ. ಆದರೆ, ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಯನ್ನು ಜಾರಿಗೊಳಿಸಲು ಬದ್ಧರಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದು, ಪಕ್ಷದೊಳಗಿನ ಭಿನ್ನಾಭಿಪ್ರಾಯ ತಾರಕಕ್ಕೇರಿದೆ.

ಹೇಮಾವತಿ ಲಿಂಕಿಂಗ್ ಕೆನಾಲ್ ಕದನ: 'ನಾಲ್ಕು ಗೋಡೆಗಳ ಮಧ್ಯೆ ವಿರೋಧಿಸಿದ್ದೇನೆ' ಎಂದ ಗುಬ್ಬಿ ಶಾಸಕ, ರಾಮಲಿಂಗಾರೆಡ್ಡಿ ಹೇಳಿದ್ದೇನು?
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on:Jul 02, 2026 | 2:35 PM

Share

ಮುಖ್ಯಾಂಶಗಳು

  • ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿ ವಿಚಾರ ಇದೀಗ ಮತ್ತೆ ಮುನ್ನಲೆಗೆ
  • ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರಿಂದಲೇ ತೀವ್ರ ವಿರೋಧ
  • ಯೋಜನೆ ಜಾರಿಗೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಪಟ್ಟು

ತುಮಕೂರು ಜು 2: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ವಿವಾದಿತ ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿ ವಿಚಾರ ಇದೀಗ ಮತ್ತೆ ಮುನ್ನಲೆಗೆ ಬಂದಿದ್ದು, ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಸರ್ಕಾರದ ಕನಸಿನ ಯೋಜನೆ ಎನ್ನಲಾದ ಈ ಕಾಮಗಾರಿಗೆ ಪ್ರಭಾವಿ ನಾಯಕರೇ ಅಪಸ್ವರ ಎತ್ತಿದ್ದಾರೆ.

ಸರ್ಕಾರಕ್ಕೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಬಹಿರಂಗ ಸವಾಲು

ಈ ಯೋಜನೆಗೆ ಕಟುವಾಗಿ ವಿರೋಧ ವ್ಯಕ್ತಪಡಿಸಿರುವ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಆರ್. ಶ್ರೀನಿವಾಸ್ (ವಾಸಣ್ಣ), ಸರ್ಕಾರದ ವಿರುದ್ಧವೇ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ. “ಯಾವುದೇ ಕಾರಣಕ್ಕೂ ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿ ನಡೆಯಲು ಬಿಡುವುದಿಲ್ಲ” ಎಂದು ಅವರು ಆಕ್ರೋಶದಿಂದ ಹೇಳಿದ್ದಾರೆ.

“ನಾನು ಈ ಹಿಂದೆ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿದ್ದೇ ಇದೇ ಯೋಜನೆಗೆ ತಡೆಯೊಡ್ಡುವ ಉದ್ದೇಶಕ್ಕಾಗಿ. ನನ್ನ ಕ್ಷೇತ್ರದ ಹಿತ ಹಾಗೂ ರೈತರ ಹೋರಾಟವೇ ನನಗೆ ಮುಖ್ಯ. ಈಗಾಗಲೇ ಈ ವಿಚಾರವಾಗಿ ಸರ್ಕಾರದ ಉನ್ನತ ಮಟ್ಟದಲ್ಲಿ, ನಾಲ್ಕು ಗೋಡೆಗಳ ಮಧ್ಯೆ ನನ್ನ ತೀವ್ರ ವಿರೋಧವನ್ನು ಮಾಡುತ್ತೇನೆ. ಹಾಗಾಗಿ ಕಾಮಗಾರಿ ಆರಂಭವಾಗುವುದಿಲ್ಲ ಎಂಬ ವಿಶ್ವಾಸ ನನಗಿದೆ” ಎಂದು ಶ್ರೀನಿವಾಸ್ ಖಡಕ್ ಆಗಿ ಹೇಳಿದ್ದಾರೆ. ಕಾಮಗಾರಿ ಏನಾದರೂ ಮುಂದುವರಿದರೆ ಅವರು ಪಕ್ಷ ತೊರೆಯಲಿದ್ದಾರಾ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಶಾಸಕರ ಭಿನ್ನಮತ ಶಮನಗೊಳಿಸಲು ಸರ್ಕಾರ ನಡೆಸಿದ ಸಂಧಾನ ಸಫಲವಾಗಿಲ್ಲ ಎಂಬ ಸುಳಿವು ಇದರಿಂದ ಸಿಕ್ಕಿದೆ.

ಇದನ್ನೂ ಓದಿ: ಹಿರಿಯೂರು ಬೈಎಲೆಕ್ಷನ್ ಅಖಾಡ ರಂಗು: ಜೆಡಿಎಸ್‌ನಿಂದ ಅಭ್ಯರ್ಥಿ ಕಣಕ್ಕಿಳಿಸಲು ಹೆಚ್‌ಡಿಕೆ ಮಾಸ್ಟರ್ ಪ್ಲಾನ್; ದಿವಂಗತ ಸುಧಾಕರ್ ಪುತ್ರನಿಗೆ ಟಿಕೆಟ್​​​ಗೆ ಒತ್ತಡ

ಯೋಜನೆ ಜಾರಿಗೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಪಟ್ಟು:

ಆದರೆ ಮತ್ತೊಂದೆಡೆ, ಯೋಜನೆ ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂಬ ಸಂದೇಶವನ್ನು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅವರು, “ಯೋಜನೆ ಜಾರಿಗೆ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು. ಮಾಗಡಿ ಮತ್ತು ಕುಣಿಗಲ್ ಭಾಗದವರು ತಮಗೆ ನೀರು ತಲುಪುತ್ತಿಲ್ಲ ಎನ್ನುತ್ತಿದ್ದಾರೆ. ಅವರಿಗೆ ಎಷ್ಟು ನೀರು ಬೇಕೋ ಅಷ್ಟನ್ನು ನಾಲೆಯಲ್ಲೇ ಪಡೆದುಕೊಳ್ಳಲಿ. ಈ ಬಗ್ಗೆ ಸಚಿವ ಜಿ. ಪರಮೇಶ್ವರ್ ಅವರೊಂದಿಗೆ ಚರ್ಚಿಸಿ, ಬಳಿಕ ಮುಖ್ಯಮಂತ್ರಿಯವರ ಗಮನಕ್ಕೆ ತಂದು ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲರೂ ಒಂದೇ ಜಿಲ್ಲೆಯವರಾಗಿದ್ದು (ತುಮಕೂರು/ರಾಮನಗರ ಭಾಗ), ಪರ-ವಿರೋಧದ ನಡುವೆಯೂ ಎಲ್ಲಾ ಪಕ್ಷದವರು ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ. ಒಟ್ಟಾರೆಯಾಗಿ, ಕೆನಾಲ್ ಲಿಂಕಿಂಗ್ ಯೋಜನೆಯು ಕಾಂಗ್ರೆಸ್ ಪಕ್ಷದ ಒ ನಾಯಕರ ನಡುವಿನ ಪ್ರತಿಷ್ಠೆಯ ಕದನವಾಗಿ ಮಾರ್ಪಟ್ಟಿದ್ದು, ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದು ಭಾರೀ ಕುತೂಹಲ ಮೂಡಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:26 pm, Thu, 2 July 26

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು