Hijab Row: ಹಿಜಾಬ್ ಧರಿಸಿ ಕಾಲೇಜಿಗೆ ಹೋಗುತ್ತಿದ್ದ ಉಪನ್ಯಾಸಕಿ ರಾಜೀನಾಮೆ

ಪ್ರತಿನಿತ್ಯ ಹಿಜಾಬ್ ಧರಿಸಿ ಕಾಲೇಜಿಗೆ ಹೋಗುತ್ತಿದ್ದರು. ಆದರೆ, ಇದೀಗ ಹಿಜಾಬ್ ವಿವಾದ ತಾರಕಕ್ಕೇರಿದ ಪರಿಣಾಮ ರಾಜೀನಾಮೆ ನೀಡಿದ್ದಾರೆ. ಜೈನ್ ಕಾಲೇಜಿನ ಅತಿಥಿ ಉಪನ್ಯಾಸಕ ಹುದ್ದೆಗೆ ರಾಜೀನಾಮೆ ನೀಡಲಾಗಿದೆ ಎಂದು ತಿಳಿದುಬಂದಿದೆ.

Hijab Row: ಹಿಜಾಬ್ ಧರಿಸಿ ಕಾಲೇಜಿಗೆ ಹೋಗುತ್ತಿದ್ದ ಉಪನ್ಯಾಸಕಿ ರಾಜೀನಾಮೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Feb 17, 2022 | 9:25 PM

ತುಮಕೂರು: ಹಿಜಾಬ್ ವಿವಾದ ತಾರಕಕ್ಕೇರಿದ್ದಕ್ಕೆ ಉಪನ್ಯಾಸಕಿ ರಾಜೀನಾಮೆ ನೀಡಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತಿಪಟೂರು ಮೂಲದ ಅತಿಥಿ ಉಪನ್ಯಾಸಕಿ ಚಾಂದಿನಿ ರಿಸೈನ್​ ಹಿಜಾಬ್ ವಿವಾದ (Hijab Row) ಕಾರಣದಿಂದ ರಾಜೀನಾಮೆ ನೀಡಿದ್ದಾರೆ. ಚಾಂದಿನಿ ತುಮಕೂರಿನ ಕೆಲ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದರು. ಪ್ರತಿನಿತ್ಯ ಹಿಜಾಬ್ ಧರಿಸಿ ಕಾಲೇಜಿಗೆ ಹೋಗುತ್ತಿದ್ದರು. ಆದರೆ, ಇದೀಗ ಹಿಜಾಬ್ ವಿವಾದ ತಾರಕಕ್ಕೇರಿದ ಪರಿಣಾಮ ರಾಜೀನಾಮೆ ನೀಡಿದ್ದಾರೆ. ಜೈನ್ ಕಾಲೇಜಿನ ಅತಿಥಿ ಉಪನ್ಯಾಸಕ ಹುದ್ದೆಗೆ ರಾಜೀನಾಮೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಹಲವೆಡೆ ಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ: SDPI ರಾಜ್ಯಾಧ್ಯಕ್ಷ ಹೇಳಿಕೆ

ಕಾಲೇಜುಗಳಲ್ಲಿ ಹಿಜಾಬ್​, ಕೇಸರಿ ಶಾಲು (Hijab Kesari Row) ಸಂಘರ್ಷ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರತಿಕ್ರಿಯೆ ನೀಡಿದ್ದಾರೆ. ಹೈಕೋರ್ಟ್​​ನ ಮಧ್ಯಂತರ ಆದೇಶದಲ್ಲಿ ಬಹಳ ಸ್ಪಷ್ಟವಾಗಿದೆ. ಆಡಳಿತ ಮಂಡಳಿ ಸಮವಸ್ತ್ರ ಕಡ್ಡಾಯಗೊಳಿಸಿದ್ರೆ ಪಾಲಿಸಬೇಕು. ಆದೇಶದಲ್ಲಿ ಈ ಕುರಿತು ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದಾರೆ. ಹಲವೆಡೆ ಈ ಆದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ. ರಾಜ್ಯ ಬಿಜೆಪಿ ಸರ್ಕಾರ ಕೋರ್ಟ್ ಆದೇಶವನ್ನು ತಿರುಚುತ್ತಿದೆ ಎಂದು ಹೇಳಿದ್ದಾರೆ.

ಈ ವಿಚಾರದಲ್ಲಿ ಹೈಕೋರ್ಟ್​ ಸಿಜೆ ಮಧ್ಯಪ್ರವೇಶ ಮಾಡಬೇಕು. ಸರ್ಕಾರಕ್ಕೆ ಸಮವಸ್ತ್ರದ ಬಗ್ಗೆ ಸ್ಪಷ್ಟ ತಿಳಿವಳಿಕೆ ಕೊಡಬೇಕು. ಗೇಟ್​​ನಲ್ಲಿ ಪೊಲೀಸರು ವಿದ್ಯಾರ್ಥಿಗಳನ್ನು ಬೆದರಿಸುತ್ತಿದ್ದಾರೆ. ಡಿಜಿ & ಐಜಿಪಿ ಮಧ್ಯಪ್ರವೇಶ ಮಾಡಿ ಸೂಚನೆ ನೀಡಬೇಕು. ಸಂವಿಧಾನ ವಿರೋಧಿಯಾಗಿ ವಿದ್ಯಾರ್ಥಿಗಳನ್ನ ನಡೆಸಿಕೊಳ್ತಿದೆ. ಸಮಸ್ಯೆಯನ್ನು ಬಗೆಹರಿಸಿ ರಾಜ್ಯದ ಮಾನವನ್ನು ಕಾಪಾಡಿ ಎಂದು ಹೈಕೋರ್ಟ್​ ಸಿಜೆ ಹಾಗೂ ಡಿಜಿ & ಐಜಿಪಿಗೆ ಅಬ್ದುಲ್ ಮಜೀದ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Karnataka Hijab Row: ಹಿಜಾಬ್ ಪ್ರಕರಣ ವಿಚಾರಣೆ ಮುಂದೂಡಿಕೆ; ನಾಳೆ ರಾಜ್ಯ ಸರ್ಕಾರದ ಪರ ವಾದಮಂಡನೆ

ಇದನ್ನೂ ಓದಿ: ಹಿಜಾಬ್ ವಿವಾದ: ಅತ್ತ ದರಿ, ಇತ್ತ ಪುಲಿ ಎಂಬಂತಾಗಿದೆ ಕರ್ನಾಟಕ ಕಾಂಗ್ರೆಸ್​ ಪರಿಸ್ಥಿತಿ! ಮುಂದೆ ಯಾವುದಯ್ಯಾ ದಾರಿ?

Published On - 9:05 pm, Thu, 17 February 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ