AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rama Navami 2022: ತುಮಕೂರಿನಲ್ಲಿ ಕೇಸರಿ ಶಾಲು ಧರಿಸಿ ಪಾನಕ ಹಂಚಿ ರಾಮನವಮಿ ಆಚರಿಸಿದ ಹಿಂದೂ ಮುಸ್ಲಿಮರು

ಹಿಂದೂ ಮುಸ್ಲಿಂ ಕಾಂಗ್ರೆಸ್ ಕಾರ್ಯಕರ್ತರಿಂದ ಶ್ರೀರಾಮನವಮಿ ಆಚರಣೆ ಮಾಡಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಕೇಸರಿ ಶಲ್ಯ ತೊಟ್ಟರೆ ಮುಸ್ಲಿಮರು ಟೋಪಿ ಧರಿಸಿ ಶ್ರೀರಾಮ ನವಮಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

Rama Navami 2022: ತುಮಕೂರಿನಲ್ಲಿ ಕೇಸರಿ ಶಾಲು ಧರಿಸಿ ಪಾನಕ ಹಂಚಿ ರಾಮನವಮಿ ಆಚರಿಸಿದ ಹಿಂದೂ ಮುಸ್ಲಿಮರು
Rama Navami 2022: ತುಮಕೂರಿನಲ್ಲಿ ಕೇಸರಿ ಶಾಲು ಧರಿಸಿ ಪಾನಕ ಹಂಚಿ ರಾಮನವಮಿ ಆಚರಿಸಿದ ಹಿಂದೂ ಮುಸ್ಲಿಮರು
TV9 Web
| Edited By: |

Updated on:Apr 10, 2022 | 12:20 PM

Share

ತುಮಕೂರು: ರಾಜ್ಯದಲ್ಲಿಂದು ಶ್ರೀರಾಮನವಮಿ ಸಂಭ್ರಮ ಜೋರಾಗಿದೆ. ಧರ್ಮಗಳನ್ನು ಮರೆತು ಹಿಂದೂ ಮುಸ್ಲಿಮರು ಪಾನಕ, ಮಜ್ಜಿಗೆ ನೀಡಿ ಸಂಭ್ರಮಿಸುತ್ತಿರುವ ದೃಶ್ಯಗಳು ಕಂಡು ಬಂದಿವೆ. ತುಮಕೂರಿನ ಭದ್ರಮ್ಮ ಸರ್ಕಲ್ನಲ್ಲೂ ಇದೇ ರೀತಿಯ ದೃಶ್ಯಗಳು ಕಂಡು ಬಂದಿವೆ. ರಾಮನವಮಿ ಹಿನ್ನೆಲೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಸರಿ ಶಲ್ಯ ತೊಟ್ಟು ಜೈ ಶ್ರೀರಾಮ್ ಎಂದು‌ ಘೋಷಣೆ ಕೂಗುತ್ತ ಸಾರ್ವಜನಿಕರಿಗೆ ಪಾನಕ, ಮಜ್ಜಿಗೆ ವಿತರಿಸುತ್ತಿದ್ದಾರೆ. ಇದೇ ವೇಳೆ ಮುಸ್ಲಿಂ ಯುವಕರೂ ಸಹ ಅವರೊಂದಿಗೆ ಕೈ ಜೋಡಿಸಿದ್ದಾರೆ.

ಹಿಂದೂ ಮುಸ್ಲಿಂ ಕಾಂಗ್ರೆಸ್ ಕಾರ್ಯಕರ್ತರಿಂದ ಶ್ರೀರಾಮನವಮಿ ಆಚರಣೆ ಮಾಡಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಕೇಸರಿ ಶಲ್ಯ ತೊಟ್ಟರೆ ಮುಸ್ಲಿಮರು ಟೋಪಿ ಧರಿಸಿ ಶ್ರೀರಾಮ ನವಮಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಸಾರ್ವಜನಿಕರಿಗೆ ಪಾನಕ ಹಂಚಿ ಸಂಭ್ರಮಿಸುತ್ತಿದ್ದಾರೆ. ಹಿಂದೂ ಮುಸ್ಲಿಂ ಎಲ್ಲರೂ ಒಂದೆ. ನಮ್ಮಲ್ಲಿ ಭೇದ-ಭಾವವಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

Rama Navami tmk

ಕಾಂಗ್ರೆಸ್ ಕಾರ್ಯಕರ್ತರು ಕೇಸರಿ ಶಲ್ಯ ತೊಟ್ಟರೆ ಮುಸ್ಲಿಮರು ಟೋಪಿ ಧರಿಸಿ ಶ್ರೀರಾಮ ನವಮಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ

ರಾಮನವಮಿಗೆ ಮುಸ್ಲಿಂ ವ್ಯಕ್ತಿಯ ನಿಸ್ವಾರ್ಥ ಸೇವೆ ಇನ್ನು ಮತ್ತೊಂದೆಡೆ ಬೆಂಗಳೂರಿನ ರಾಜಾಜಿನಗರದ ರಾಮಮಂದಿರದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿ ಮುಸ್ಲಿಂ ವ್ಯಕ್ತಿ ನಿಸ್ವಾರ್ಥ ಸೇವೆ ಮಾಡಿ ಮಾದರಿಯಾಗಿದ್ದಾರೆ. 52 ವರ್ಷ ವಯಸ್ಸಿನ ಹುಸೇನ್ ಎಂಬ ಮುಸ್ಲಿಂ ವ್ಯಕ್ತಿ ಹಲವು ವರ್ಷಗಳಿಂದ ರಾಮನವಮಿಯಂದು ಈ ರೀತಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಪ್ರತಿ ರಾಮನವಮಿಯ ಹಿಂದಿನ ದಿನ ದೇವಸ್ಥಾನದಲ್ಲಿ ಕೆಲಸ ಮಾಡಲು ಹಾಜರಾಗುತ್ತಾರೆ. ಧೂಳು, ಕ್ಲೀನ್ ಮಾಡುವುದು, ರಥ ತೊಳೆಯುವ ಕಾಯಕ ಈ ರೀತಿ ಸೇವೆ ಮಾಡಿ ಯಾವುದೇ ಹಣ ಪಡೆಯದೆ ಹಲವು ವರ್ಷಗಳಿಂದ ಉಚಿತ ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಿ ವರ್ಷದಂತೆ ನಿನ್ನೆಯೂ ಸಿದ್ಧತೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಇಂದು ನಾಡಿನೆಲ್ಲೆಡೆ ರಾಮ ನವಮಿ ಹಬ್ಬದ ಸಂಭ್ರಮ; ದೇವರಿಗೆ ವಿಶೇಷ ಪೂಜೆ

ಯಶ್​ ಮಾತ್ರವಲ್ಲ, ಫ್ಯಾನ್ಸ್​ ಕೂಡ ಮಾಡ್ತಿದ್ದಾರೆ ದಾಖಲೆ; ಸಿದ್ಧವಾಗ್ತಿದೆ ಅತಿ ದೊಡ್ಡ ಮೊಸಾಯಿಕ್​ ಪೋಟ್ರೇಟ್

Published On - 11:12 am, Sun, 10 April 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ