ರಾಜ್ಯದ ಜನ ಕಾಂಗ್ರೆಸ್ಗೆ ಈಗ ಕೊಟ್ಟಿರುವ ಆಕ್ಸಿಜನ್ ಅನ್ನು ಮುಂದಿನ ಚುನಾವಣೆಯಲ್ಲಿ ಪೂರ್ತಿ ಕಿತ್ತು ಹಾಕುತ್ತಾರೆ -ಸಚಿವ ಆರಗ ಜ್ಞಾನೇಂದ್ರ

ಕಾಂಗ್ರೆಸ್ ಪಕ್ಷಕ್ಕೆ ದೇಶದ ಜನರು ಜಾಗ ತೋರಿಸುತ್ತಿದ್ದಾರೆ. ಸತ್ಯ ಹೇಳುವುದಕ್ಕೆ ಕಾಂಗ್ರೆಸ್ ಪಕ್ಷದವರು ತಯಾರಾಗಿಲ್ಲ. ನಿಷ್ಠುರವಾಗಿ ಮಾತನಾಡೋಕೆ ಕಾಂಗ್ರೆಸ್ನವರು ತಯಾರಿಲ್ಲ. ವೋಟ್ ಬ್ಯಾಂಕ್ ರಾಜಕಾರಣ ಆಟ ಬಹಳ ದಿನ ನಡೆಯಲ್ಲ. -ಸಚಿವ ಆರಗ ಜ್ಞಾನೇಂದ್ರ

ರಾಜ್ಯದ ಜನ ಕಾಂಗ್ರೆಸ್ಗೆ ಈಗ ಕೊಟ್ಟಿರುವ ಆಕ್ಸಿಜನ್ ಅನ್ನು ಮುಂದಿನ ಚುನಾವಣೆಯಲ್ಲಿ ಪೂರ್ತಿ ಕಿತ್ತು ಹಾಕುತ್ತಾರೆ -ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
| Updated By: ಆಯೇಷಾ ಬಾನು

Updated on: Mar 25, 2022 | 8:26 PM

ತುಮಕೂರು: ಹಿಜಾಬ್(Hijab) ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah)  ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಆರಗ ಜ್ಞಾನೇಂದ್ರ(Araga Jnanendra) ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ನವರು ಸಮವಸ್ತ್ರವನ್ನು ವಿರೋಧ ಮಾಡುತ್ತಾರೆ. ಹಿಜಾಬ್ ಸ್ವಾಗತ ಮಾಡುತ್ತಾರೆ. ಬಹಳ ವರ್ಷಗಳಿಂದ‌ ಇದನ್ನೇ ಮಾಡಿಕೊಂಡು ಬಂದಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ದೇಶದ ಜನರು ಜಾಗ ತೋರಿಸುತ್ತಿದ್ದಾರೆ. ಸತ್ಯ ಹೇಳುವುದಕ್ಕೆ ಕಾಂಗ್ರೆಸ್ ಪಕ್ಷದವರು ತಯಾರಾಗಿಲ್ಲ. ನಿಷ್ಠುರವಾಗಿ ಮಾತನಾಡೋಕೆ ಕಾಂಗ್ರೆಸ್ನವರು ತಯಾರಿಲ್ಲ. ವೋಟ್ ಬ್ಯಾಂಕ್ ರಾಜಕಾರಣ ಆಟ ಬಹಳ ದಿನ ನಡೆಯಲ್ಲ. ಪಂಚ ರಾಜ್ಯಗಳ ಚುನಾವಣೆ ಕಾಂಗ್ರೆಸ್ಗೆ ಪಾಠ ಕಲಿಸಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಿದೆ ಎಂದು ಹುಡುಕಬೇಕಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ಗೆ ಆಕ್ಸಿಜನ್ ಕೊಟ್ಟ ರೀತಿ ಇದೆ. ಮುಂದಿನ ಚುನಾವಣೆಯಲ್ಲಿ ಜನರು ಅದನ್ನೂ ಕಿತ್ತುಹಾಕ್ತಾರೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಇನ್ನು ಇದೇ ವೇಳೆ ಮಾತನಾಡಿದ ಅವರು, ಇದೇ ಏಪ್ರಿಲ್ 1 ರಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಅಮಿತ್ ಷಾ ಭೇಟಿ ಕೊಡ್ತಿದ್ದಾರೆ. ಶಿವಕುಮಾರ ಸ್ವಾಮೀಜಿ ಅವರ ಜಯಂತ್ಸೋತ್ಸವ ಇದೆ. ಈ ಬಗ್ಗೆ ಚರ್ಚೆ ಮಾಡೋಕೆ ತುಮಕೂರಿಗೆ ಬಂದಿದ್ದೆ. ತುಮಕೂರು ಜಿಲ್ಲೆಯ ನಾಯಕರ ಜೊತೆ ಚರ್ಚೆ ಮಾಡಲಾಯಿತು. ಅಮಿತ್ ಷಾ ವಿಶೇಷವಾಗಿ ಮಠಕ್ಕೆ ಬರ್ತಿದ್ದಾರೆ. ಆ ದಿನ ಒಂದು ಸಭೆ ಇದೆ. ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಇದೆ. ಆ ಕಾರ್ಯಕ್ರಮವನ್ನ ನಾವೆಲ್ಲರೂ ಒಟ್ಟಾಗಿ ಯಶಸ್ವಿಗೊಳಿಸಬೇಕು ಎಂದರು.

ಸಿದ್ದರಾಮಯ್ಯ ತಾವು ಮಾಡಿದ ಪಾಪದ ಫಲವನ್ನು ಅನುಭವಿಸುತ್ತಿದ್ದಾರೆ ಶಾಲೆಗಳಲ್ಲಿ ಸಮವಸ್ತ್ರ ಇತ್ತು. ಕಾಂಗ್ರೆಸ್ ನವರು ಹುಟ್ಟು ಹಾಕಿದ ಬೆಳಸಿದ ಮತೀಯ ಸಂಘಟನೆಗಳು ಈ ವಿವಾದ ಹುಟ್ಟು ಹಾಕಿದ್ದು ಸಿದ್ದರಾಮಯ್ಯ ತಾವು ಮಾಡಿದ ಪಾಪದ ಫಲವನ್ನು ಅನುಭವಿಸುತ್ತಿದ್ದಾರೆ. ಅದನ್ನು ಈಗ ಬೇರೆಯವರ ಮೇಲೆ ಹಾಕಲು ಹೊರಟಿದ್ದಾರೆ. ಇದನ್ನು ಜನ ನೋಡುತ್ತಿದ್ದಾರೆ. ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷರು ಬಾಯಿ ಬಿಡಬೇಡಿ ಅಂತ ಹೇಳಿದ್ರು. ಹಿಜಾಬ್ ವಿಚಾರದಲ್ಲಿ ಗಂಡು ಅಲ್ಲ ಹೆಣ್ಣು ಅಲ್ಲ ಅನ್ನೋ ರೀತಿಯಲ್ಲಿ ನಡೆದುಕೊಂಡ್ರು. ಸಮವಸ್ತ್ರ ಬಗ್ಗೆ ಕಾಂಗ್ರೆಸ್ ನವರು ಸತ್ಯ ಹೇಳಲಿಲ್ಲ. ಸಿದ್ದರಾಮಯ್ಯ ಕಾಲದಲ್ಲಿ ಎಷ್ಟು ಜನ ಹಿಂದೂಗಳು, ಅಲ್ಪಸಂಖ್ಯಾತರ ಹತ್ಯೆ ಆಗಿಲ್ಲ. ಸಿದ್ದರಾಮಯ್ಯ ಯಾರನ್ನು ಉಳಿಸಲಿಲ್ಲ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಗೃಹ ಸಚಿವ ಆರಗ ವಾಗ್ದಾಳಿ ನಡೆಸಿದ್ರು.

ಇದನ್ನೂ ಓದಿ: ಪ್ರತಿ ವರ್ಷ ಮಾರ್ಚ್ 16ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ; ರಾಜ್ಯ ಸರ್ಕಾರದಿಂದ ಆದೇಶ ಪ್ರಕಟ

ಕೋಲಾರದಲ್ಲಿ ಪುರಾತನ ದೇಗುಲ ವಿರೂಪಗೊಳಿಸಿದ ಕಿಡಿಗೇಡಿಗಳು; ಹಿಂದೂ ಕಾರ್ಯಕರ್ತರಿಂದ ಆಕ್ರೋಶ, ಸ್ಥಳದಲ್ಲಿ ಹೈ ಅಲರ್ಟ್

ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ