ಅನೈತಿಕ ಸಂಬಂಧಕ್ಕೆ ಬೆಸೆದುಕೊಂಡ ಅಣ್ತಂಗಿ, ತಾಯಿಯನ್ನು ಕೊಲೆ ಮಾಡಿ ಸಂಪ್​ಗೆ ತಳ್ಳಿದ್ದರು!

TV9 Digital Desk

| Edited By: ಸಾಧು ಶ್ರೀನಾಥ್​

Updated on:Feb 18, 2022 | 10:09 AM

ಶೈಲಜಾ ಹಾಗೂ ಪುನೀತ್ ಇಬ್ಬರು ಚಿಕ್ಕಮ್ಮ ಮತ್ತು ದೊಡ್ಡಮ್ಮನ ಮಕ್ಕಳು. ವರಸೆಯಲ್ಲಿ ಶೈಲಜಾಗೆ ಪುನೀತ್ ಅಣ್ಣನಾಗಿದ್ದಾನೆ. ಹೊರಜಗತ್ತಿಗೆ ಇಬ್ಬರೂ ಅಣ್ಣ ತಂಗಿಯಂತೆ ವರ್ತನೆ ಮಾಡ್ತಿದ್ದರು. ಆದರೆ ಮನೆಯೊಳಗೆ.. ಇಬ್ಬರೂ ಅನೈತಿಕ ಸಂಬಂಧದಲ್ಲಿ ತೊಡಗ್ತಿದ್ದರು.

ಅನೈತಿಕ ಸಂಬಂಧಕ್ಕೆ ಬೆಸೆದುಕೊಂಡ ಅಣ್ತಂಗಿ, ತಾಯಿಯನ್ನು ಕೊಲೆ ಮಾಡಿ ಸಂಪ್​ಗೆ ತಳ್ಳಿದ್ದರು!
ಅನೈತಿಕ ಸಂಬಂಧಕ್ಕೆ ಬೆಸೆದುಕೊಂಡ ಅಣ್ತಂಗಿ, ತಾಯಿಯನ್ನು ಕೊಲೆ ಮಾಡಿ ಸಂಪ್​ಗೆ ತಳ್ಳಿದ್ದರು!

ತುಮಕೂರು: ಮನೆ ಮುಂದಿನ ನೀರಿನ ಸಂಪ್ ಗೆ ಬಿದ್ದು ಮಹಿಳೆಯ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಅನೈತಿಕ ಸಂಬಂಧಕ್ಕಾಗಿ (Illicit relationship) ಅಣ್ಣನ ಜೊತೆ ಸೇರಿ ತಾಯಿಯನ್ನೇ ಮಗಳು ಕೊಂಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಪುನೀತ್ (26) ಮತ್ತು ಶೈಲಜಾ (21) ಬಂಧಿತ ಅಣ್ಣ-ತಂಗಿ. ಕಳೆದ ಜನವರಿ 30 ರಂದು ಕೊರಟಗೆರೆ ಪಟ್ಟಣದ (koratagere) ಸಜ್ಜನರಾವ್ ಬೀದಿಯ ಸಾವಿತ್ರಮ್ಮ(45) (mother) ಸಂಪಿಗೆ ಬಿದ್ದು ಸಾವನ್ನಪ್ಪಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕೊರಟಗೆರೆ ಪೊಲೀಸರು ಪ್ರೀತಿಗೆ ಅಡ್ಡ ಬಂದರೆಂದು ಉಸಿರುಗಟ್ಟಿಸಿ ಸಾವಿತ್ರಮ್ಮ ಅವರನ್ನು ಕೊಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಶೈಲಜಾ ಹಾಗೂ ಪುನೀತ್ ಇಬ್ಬರು ಚಿಕ್ಕಮ್ಮ ಮತ್ತು ದೊಡ್ಡಮ್ಮನ ಮಕ್ಕಳು. ವರಸೆಯಲ್ಲಿ ಶೈಲಜಾಗೆ ಪುನೀತ್ ಅಣ್ಣನಾಗಿದ್ದಾನೆ. ಹೊರಜಗತ್ತಿಗೆ ಇಬ್ಬರೂ ಅಣ್ಣ ತಂಗಿಯಂತೆ ವರ್ತನೆ ಮಾಡ್ತಿದ್ದರು. ಆದರೆ ಮನೆಯೊಳಗೆ.. ಇಬ್ಬರೂ ಅನೈತಿಕ ಸಂಬಂಧದಲ್ಲಿ ತೊಡಗ್ತಿದ್ದರು. ಇಬ್ಬರ ಲವ್ವಿ ಡವ್ವಿಗೆ ಬ್ರೇಕ್ ಹಾಕಿ ಪುನೀತ್ ಹಾಗೂ ಶೈಲಜಾಗೆ ಸಾವಿತ್ರಮ್ಮ ಹಾಗೂ ಪುನೀತ್ ತಾಯಿ ಬುದ್ಧಿ ಹೇಳಿದ್ದರು.

ಮತ್ತೆ ಅನೈತಿಕ ಸಂಬಂಧಕ್ಕೆ ಬೆಸೆದುಕೊಂಡ ಅಣ್ತಂಗಿ! ಮೆಸೇಜ್ ಅಥವಾ ಕಾಲ್ ಮಾಡದಂತೆ ಇಬ್ಬರಿಗೂ ಎಚ್ಚರಿಕೆ ಸಹ ಕೊಟ್ಟಿದ್ದರು. ಸ್ವಲ್ಪ ದಿನಗಳ ಕಾಲ ಅಣ್ಣ-ತಂಗಿಯಂತೆ ಇದ್ದವರು ಮತ್ತೆ ಅನೈತಿಕ ಸಂಬಂಧಕ್ಕೆ ಬೆಸೆದುಕೊಂಡಿದ್ದಾರೆ. ಇದೇ ವೇಳೆ ಇಬ್ಬರ ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಸಾವಿತ್ರಮ್ಮನನ್ನ ಕತ್ತು ಹಿಸುಕಿ ಕೊಲೆಗೈದಿದ್ದಾರೆ ಶೈಲಜಾ ಹಾಗೂ ಪುನೀತ್ ಜೋಡಿ.

ಬಳಿಕ, ಸಾವಿತ್ರಮ್ಮ ಕಾಲು ಜಾರಿ ಸಂಪ್ ಗೆ ಬಿದ್ದು ಸಾವನ್ನಪ್ಪಿರೋದಾಗಿ ಶೈಲಜಾ ಹಾಗೂ ಪುನೀತ್ ಬಿಂಬಿಸಿದ್ದರು. ಸಾವಿನ ಘಟನೆಯ ಬಳಿಕ ಪುನೀತ್ ಹಾಗೂ ಶೈಲಜಾ ಆಟಾಟೋಪ ಮಿತಿಮಿರಿತ್ತು. ಪೊಲೀಸರಿಗೆ ಅನುಮಾನ ಬಂದು ಪೊಲೀಸ್ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ. ಸದ್ಯ ಇಬ್ಬರನ್ನೂ ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಾಲಭವನದಲ್ಲಿ ಮಕ್ಕಳ ಕಾರ್ಯಕ್ರಮ ನಿರ್ವಹಿಸಲು ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (Department of Women and Child Development) ಜಿಲ್ಲಾ ಬಾಲಭವನದಲ್ಲಿ ಮಕ್ಕಳ ಕಾರ್ಯಕ್ರಮಗಳನ್ನ ನಿರ್ವಹಿಸಲು ಒಂದು ಕಚೇರಿ ಸಹಾಯಕರ ಹುದ್ದೆಯನ್ನ ನಿಗದಿತ ಮಾಸಿಕ ಗೌರವಧನದ ಆಧಾರದ ಮೇಲೆ ನೇರ ಗುತ್ತಿಗೆ ಮೂಲಕ ತಾತ್ಕಾಲಿಕವಾಗಿ ನೇಮಕ ಮಾಡಲು ಜಿಲ್ಲೆಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿನವರಾಗಿದ್ದು, ಪದವಿ ವಿದ್ಯಾರ್ಹತೆಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಕಂಪ್ಯೂಟರ್ ಜ್ಞಾನ ಹಾಗೂ ಉತ್ತಮ ಸಂವಹನ ಕ್ಷಮತೆ ಹಾಗೂ ಕನಿಷ್ಠ 2 ವರ್ಷ ಸೇವಾನುಭವ ಹೊಂದಿರಬೇಕು. ಅರ್ಹ ಅಭ್ಯರ್ಥಿ ಗಳಲ್ಲಿ 1:10 ರಂತೆ ಮೆರಿಟ್ ಹಾಗೂ ಸೇವಾ ಹಿರಿತನದ ಆಧಾರವನ್ನ ಗುರುತಿಸಿ ಆಯ್ಕೆ ಸಮಿತಿ ಮೂಲಕ ಸಂದರ್ಶನ ಹಾಗೂ ಕಂಪ್ಯೂಟರ್ ಜ್ಞಾನ ಪರಿಕ್ಷೇ ನಡೆಸಿ ಆಯ್ಕೆ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಮಾರ್ಚ್ 5 ರೊಳಗೆ ನಿಗದಿತ ಅರ್ಜಿ ನಮೂನೆಯನ್ನ ಪಡೆದು ಭರ್ತಿ ಮಾಡಿದ ಅರ್ಜಿಯನ್ನ ಮಾರ್ಚ್ 7 ರೊಳಗೆ ಖುದ್ದು ಅಥವಾ ಅಂಚೆ ಮೂಲಕ ಸಲ್ಲಿಸಬಹುದು ಎಂದು ಇಲಾಖೆಯ ಉಪನಿರ್ದೆಶಕ ಶ್ರೀದರ್ ತಿಳಿಸಿದ್ದಾರೆ.

KVS Recruitment 2022: ಕೇಂದ್ರೀಯ ವಿದ್ಯಾಲಯದಲ್ಲಿ ಉದ್ಯೋಗಾವಕಾಶ ಕೇಂದ್ರೀಯ ವಿದ್ಯಾಲಯದಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ದೆಹಲಿಯ ಕೇಂದ್ರೀಯ ವಿದ್ಯಾಲಯದಲ್ಲಿ ಪಿಜಿಟಿ, ಟಿಜಿಟಿ, ಪಿಆರ್‌ಟಿ, ಕಂಪ್ಯೂಟರ್ ಬೋಧಕ, ಡಿಇಒ, ಕ್ರೀಡಾ ಶಿಕ್ಷಕ, ಶೈಕ್ಷಣಿಕ ಸಲಹೆಗಾರ, ಕಲೆ ಮತ್ತು ಕರಕುಶಲ ಶಿಕ್ಷಕ, ಸಂಗೀತ ಶಿಕ್ಷಕ, ನೃತ್ಯ ಶಿಕ್ಷಕ, ನರ್ಸ್, ಯೋಗ ಶಿಕ್ಷಕರಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೇಂದ್ರೀಯ ವಿದ್ಯಾಲಯದ ಅಧಿಕೃತ ವೆಬ್‌ಸೈಟ್ rkpuramsec2.kvs.ac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada