ಅಯ್ಯೋ ವಿಧಿಯೇ! ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಸಾವು

ಕ್ಷುಲ್ಲಕ ಕಾರಣಕ್ಕೆ ಜೀವ ತೊರೆಯುವ ನಿರ್ಧಾರಕ್ಕೆ ಬರುವವರ ಸಂಖ್ಯೆ ಹೆಚ್ಚುತ್ತಿದೆ. ಅದರಂತೆ ಇದೀಗ ತುಮಕೂರು (Tumakuru) ಜಿಲ್ಲೆಯ ‌ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಈ ಕುರಿತು ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಯ್ಯೋ ವಿಧಿಯೇ! ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಸಾವು
ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಸಾವು
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 26, 2024 | 2:55 PM

ತುಮಕೂರು, ಸೆ.26: ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು (Tumakuru) ಜಿಲ್ಲೆಯ ‌ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. ಹಸೀನಾ(25), ಅಸೀಮಾ(8) ಹಾಗೂ ಆಲ್ಮಿಸಾ ಕೂಯಿಲ್(3) ಮೃತರು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉಳುಮೆ ಮಾಡುವಾಗ ಹೆಜ್ಜೇನು ದಾಳಿಯಾಗಿ ರೈತ ಸಾವು

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಗೌಡಯ್ಯನಪಾಳ್ಯದಲ್ಲಿ ಉಳುಮೆ ಮಾಡುವಾಗ ಹೆಜ್ಜೇನು ದಾಳಿಯಾಗಿ ರೈತ ಸಾವನ್ನಪ್ಪಿದ ಘಟನೆ ನಡೆದಿದೆ. ಗೌಡಯ್ಯನಪಾಳ್ಯ ಗ್ರಾಮದ ನಿವಾಸಿ ರಾಜಣ್ಣ(48) ಮೃತ ರ್ದುದೈವಿ. ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಹೆರಿಗೆಗೆಂದು 10 ದಿನ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಕಾರಣವಾಯ್ತಾ?

ಕೃಷಿ ಹೊಂಡಕ್ಕೆ ಬಿದ್ದು ಯುವಕ ಸಾವು

ತುಮಕೂರು: ತಿಪಟೂರು ತಾಲೂಕಿನ ಮಾವಿನಹಳ್ಳಿಯಲ್ಲಿ ಕೃಷಿಹೊಂಡಕ್ಕೆ ಬಿದ್ದು ಕೀರ್ತನ್​(19) ಎಂಬ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ತೋಟದಲ್ಲಿ ಟ್ರಾಕ್ಟರ್ ಮೂಲಕ ಉಳುಮೆ‌ ಮಾಡ್ತಿದ್ದಾಗ ನಿಯಂತ್ರಣ ತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ದುರ್ಘಟನೆ ನಡೆದಿದೆ. ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್​ ಓದುತ್ತಿದ್ದ ಕೀರ್ತನ್​, 2 ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ಈ ಕುರಿತು ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:49 pm, Thu, 26 September 24

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್