ತುಮಕೂರು, ಸೆ.26: ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು (Tumakuru) ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. ಹಸೀನಾ(25), ಅಸೀಮಾ(8) ಹಾಗೂ ಆಲ್ಮಿಸಾ ಕೂಯಿಲ್(3) ಮೃತರು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಗೌಡಯ್ಯನಪಾಳ್ಯದಲ್ಲಿ ಉಳುಮೆ ಮಾಡುವಾಗ ಹೆಜ್ಜೇನು ದಾಳಿಯಾಗಿ ರೈತ ಸಾವನ್ನಪ್ಪಿದ ಘಟನೆ ನಡೆದಿದೆ. ಗೌಡಯ್ಯನಪಾಳ್ಯ ಗ್ರಾಮದ ನಿವಾಸಿ ರಾಜಣ್ಣ(48) ಮೃತ ರ್ದುದೈವಿ. ಈ ಕುರಿತು ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಹೆರಿಗೆಗೆಂದು 10 ದಿನ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಕಾರಣವಾಯ್ತಾ?
ತುಮಕೂರು: ತಿಪಟೂರು ತಾಲೂಕಿನ ಮಾವಿನಹಳ್ಳಿಯಲ್ಲಿ ಕೃಷಿಹೊಂಡಕ್ಕೆ ಬಿದ್ದು ಕೀರ್ತನ್(19) ಎಂಬ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ತೋಟದಲ್ಲಿ ಟ್ರಾಕ್ಟರ್ ಮೂಲಕ ಉಳುಮೆ ಮಾಡ್ತಿದ್ದಾಗ ನಿಯಂತ್ರಣ ತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ದುರ್ಘಟನೆ ನಡೆದಿದೆ. ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ಕೀರ್ತನ್, 2 ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ಈ ಕುರಿತು ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:49 pm, Thu, 26 September 24