ಅಯ್ಯೋ ವಿಧಿಯೇ! ನೀರಿನ ಗುಂಡಿಗೆ ಬಿದ್ದು ಮೂವರು ಸಾವು

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 18, 2024 | 8:51 PM

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ(Muddebihal) ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ಜಮೀನಿನಲ್ಲಿದ್ದ ನೀರು ತುಂಬಿದ್ದ ಆಳವಾದ ಗುಂಡಿಗೆ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಿಸಲಾಗಿದ್ದು, ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ.

ಅಯ್ಯೋ ವಿಧಿಯೇ! ನೀರಿನ ಗುಂಡಿಗೆ ಬಿದ್ದು ಮೂವರು ಸಾವು
ನೀರಿನ ಗುಂಡಿಗೆ ಬಿದ್ದು ಮೂವರು ಸಾವು
Follow us on

ವಿಜಯಪುರ, ಜೂ.18: ಜಮೀನಿನಲ್ಲಿದ್ದ ನೀರು ತುಂಬಿದ್ದ ಆಳವಾದ ಗುಂಡಿಗೆ ಬಿದ್ದು ಮೂವರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ(Muddebihal) ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ನಡೆದಿದೆ. ನೀಲಮ್ಮ ಖಿಲಾರಹಟ್ಟಿ (16), ಮುತ್ತಪ್ಪ ಖಿಲಾರಹಟ್ಟಿ ( 24 ) ಹಾಗೂ ಶಿವು ಯಾಳವಾರ ( 25 ) ಮೃತರು. ಹಡಲಗೇರಿ ಗ್ರಾಮದ ಚಿನ್ನಪ್ಪ ತಳವಾರ ಎಂಬುವವರಿಗೆ ಸೇರಿದ ಜಮೀನಿಗೆ ಎಮ್ಮೆ ಮೇಯಿಸಲು ನೀಲಮ್ಮ ಹೋಗಿದ್ದರು. ಎಮ್ಮೆಗೆ ನೀರು ಕುಡಿಸಲು ನೀರು ತುಂಬಿದ್ದ ಗುಂಡಿ ಬಳಿ ಬಂದಾಗ ಕಾಲು ಜಾರಿ ಬಿದ್ದಿದ್ದಾರೆ.

ರಕ್ಷಣೆ ಮಾಡಲು ಬಂದ ಸಂಬಂಧಿಕರು ಸಾವು

ಇದನ್ನು ಕಂಡು ಆಕೆಯನ್ನು ರಕ್ಷಣೆ ಮಾಡಲು ಬಂದ ಸಂಬಂಧಿಕ ಮುತ್ತಪ್ಪ ಖಿಲಾರಹಟ್ಟಿ ಹಾಗೂ ಯುವತಿ ನೀರಿನಲ್ಲಿ ಹೊರ ಬರಲಾರದೇ ಪರದಾಟ ನಡೆಸಿದ್ದಾರೆ. ಇದನ್ನು ಕಂಡು ಕಾಪಾಡಲು ಬಂದ ಶಿವು ಯಾಳವಾರ ಸಹ ನೀರು ಪಾಲಾಗಿದ್ದಾನೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಆಗಮಿಸಿದ್ದು, ಮೂವರ ಶವಗಳನ್ನು ಹೊರ ತೆಗೆದಿದ್ದಾರೆ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಿಸಲಾಗಿದೆ. ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ.

ಇದನ್ನೂ ಓದಿ:ಈಜಲು ತೆರಳಿದ್ದ ಯುವಕ ನೀರು ಪಾಲು: ಮೃತದೇಹ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

ರೈಲಿಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ

ತುಮಕೂರು: ತಿಪಟೂರು ನಗರದ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರ್ಷಿಣಿ(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಮೃತ ವರ್ಷಿಣಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವರ ಪುತ್ರಿಯಾಗಿದ್ದು, ತಿಪಟೂರು ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದರು. ಘಟನಾ ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ