AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದುಕೊಂಡಿದ್ದನ್ನು ಈ ಚುನಾವಣೆಯಲ್ಲಿ ಪಡೆದುಕೊಳ್ಳಬೇಕಾಗಿದೆ: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಮಾಧುಸ್ವಾಮಿ ಪರೋಕ್ಷ ಹೇಳಿಕೆ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ತುಮಕೂರು ಕ್ಷೇತ್ರದ ಬಿಜೆಪಿ ಟಿಕೆಟ್ ಫೈಟ್ ಜೋರಾಗಿಯೇ ನಡೆಯುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿರುವ ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ ಮಾತ್ರವಲ್ಲದೆ ಜೆಸಿ ಮಾಧ್ಯಸ್ವಾಮಿ ಕೂಡ ತುಮಕೂರು ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಇದೀಗ, ಇಂದು ಜಿಲ್ಲಾ ಬಿಜೆಪಿ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದುಕೊಂಡಿದ್ದನ್ನು ಈ ಚುನಾವಣೆಯಲ್ಲಿ ಪಡೆದುಕೊಳ್ಳಬೇಕಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಹೇಳಿಕೆ ನೀಡಿದ್ದಾರೆ.

ಕಳೆದುಕೊಂಡಿದ್ದನ್ನು ಈ ಚುನಾವಣೆಯಲ್ಲಿ ಪಡೆದುಕೊಳ್ಳಬೇಕಾಗಿದೆ: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಮಾಧುಸ್ವಾಮಿ ಪರೋಕ್ಷ ಹೇಳಿಕೆ
ಜೆಸಿ ಮಾಧುಸ್ವಾಮಿ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Feb 22, 2024 | 2:00 PM

Share

ತುಮಕೂರು, ಫೆ.22: ಲೋಕಸಭೆ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದಂತೆ ತುಮಕೂರು (Tumkur) ಕ್ಷೇತ್ರದ ಬಿಜೆಪಿ ಟಿಕೆಟ್ ಫೈಟ್ ಜೋರಾಗಿಯೇ ನಡೆಯುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿರುವ ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ ಮಾತ್ರವಲ್ಲದೆ ಜೆಸಿ ಮಾಧ್ಯಸ್ವಾಮಿ (JC Madhuswamy) ಕೂಡ ತುಮಕೂರು ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಇದೀಗ, ಇಂದು ಜಿಲ್ಲಾ ಬಿಜೆಪಿ ನೂತನ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದುಕೊಂಡಿದ್ದನ್ನು ಈ ಚುನಾವಣೆಯಲ್ಲಿ ಪಡೆದುಕೊಳ್ಳಬೇಕಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಹೇಳಿಕೆ ನೀಡಿದ್ದಾರೆ.

ತುಮಕೂರು ನಗರದ ಭದ್ರಮ್ಮ ವೃತ್ತದಲ್ಲಿರುವ ನೂತನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕಳೆದುಕೊಂಡಿರೋದನ್ನು ಈ ಚುನಾವಣೆಯಲ್ಲಿ ಪಡೆದುಕೊಳ್ಳಬೇಕಾಗಿದೆ. ಚುನಾವಣೆಯಲ್ಲಿ 5-6 ಸಾವಿರ ವೋಟ್​ನಿಂದ ಸೋತಿದ್ದು ಮಹತ್ವವಲ್ಲ. ಮೋದಿ ಶಕ್ತಿ ಬಳಸಿಕೊಂಡು ಮುನ್ನಡೆಯಬೇಕು. ಇಂದು ಮತದಾರರ ನನಗೇನಾಯ್ತು ಅಂತ ಯೋಚನೆ ಮಾಡುತ್ತಿದ್ದಾರೆ. ಆದರೆ ನಾವು ರಾಷ್ಟ್ರಕ್ಕೆ ಏನಾಗಬೇಕು ಅಂತ ಚರ್ಚೆ ಮಾಡುತ್ತಿದ್ದೇವೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದರು.

ಇದನ್ನೂ ಓದಿ: ತುಮಕೂರು ಬಿಜೆಪಿ ಟಿಕೆಟ್​ ಫೈಟ್: ಟಿಕೆಟ್ ಸಿಗುವ ವಿಶ್ವಾಸದಲ್ಲಿ ಮಾಧುಸ್ವಾಮಿ; ಮತ್ತೊಬ್ಬ ಆಕಾಂಕ್ಷಿ ವಿ ಸೋಮಣ್ಣ ಹೇಳುವುದೇನು?

ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಜಿ.ಎಸ್​.ಬಸವರಾಜ್, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲ್ಲಿಸಬೇಕು. ಪ್ರತಿ ಕಾರ್ಯಕರ್ತ ಕನಿಷ್ಠ 500 ಮತ ಹಾಕಿಸುತ್ತೇವೆ ಅಂತಾ ಪ್ರತಿಜ್ಞೆ ಮಾಡಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು.

ಮಂಡ್ಯ, ಹಾಸನ ಬಿಟ್ಟರೆ ಅತಿ ಸೂಕ್ಷ್ಮ ಕ್ಷೇತ್ರ ತುಮಕೂರು

ಮಂಡ್ಯ, ಹಾಸನ ಬಿಟ್ಟರೆ ಅತಿ ಸೂಕ್ಷ್ಮ ಕ್ಷೇತ್ರ ತುಮಕೂರು ಎಂದು ಹೇಳಿದ ಸಂಸದರು, ಮೋದಿ ನೋಡಿ ಮತ ಹಾಕುತ್ತೇವೆಂದು ಮಹಿಳೆ ಒಬ್ಬರು ಹೇಳಿದರು. ಮೋದಿ ಗೆಲ್ಲಿಸುವುದೇ ನಮ್ಮ ಗುರಿ ಎಂದು ಜನ ಹೇಳುತ್ತಿದ್ದಾರೆ. ಸದ್ಯ ದೇಶದ ಜನರಲ್ಲಿ ಇದೇ ಅಭಿಪ್ರಾಯ ಇದೆ. ನಾವೆಲ್ಲರೂ ಒಗ್ಗಟ್ಟಾಗಿದ್ದರೆ ಒಂದೂವರೆ ಲಕ್ಷ ಮತಗಳಿಂದ ಗೆಲ್ಲುತ್ತೇವೆ. ಸುರೇಶ್ ಗೌಡರ ಬಳಿ ಕೆಲವು ಯೋಜನೆಗಳಿವೆ. ನನಗೂ ಕೆಲವು ತಂತ್ರಗಾರಿಕೆ ಗೊತ್ತಿದೆ. ಅದೆಲ್ಲವನ್ನೂ ಒಟ್ಟುಗೂಡಿಸಿ ಹೋರಾಟ ಮಾಡಬೇಕು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್