ಪ್ರೀತಿಸಿದವನ ಜೊತೆ ಮದುವೆಯಾಗಲು ಬಿಡದ ತಂದೆಯಿಂದ ಆತ್ಮಹತ್ಯೆಗೆ ಪ್ರಚೋದನೆ; ಮಗಳು ಸಾವನ್ನಪ್ಪಿದ 7 ದಿನದ ಬಳಿಕ ಸತ್ಯಾಂಶ ಬೆಳಕಿಗೆ

ಪ್ರೀತಿಸಿ ಮದುವೆಯಾಗುವುದಕ್ಕೆ ಮುಂದಾಗಿದ್ದ ಮಗಳನ್ನು ತಂದೆ, ಸಹೋದರ, ಚಿಕ್ಕಪ್ಪ ಸೇರಿ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ ಜಿಲ್ಲೆಯ ಗುಬ್ಬಿ ತಾಲೂಕಿನ ಚಿಕ್ಕಹೆಡಿಗೇಹಳ್ಳಿಯಲ್ಲಿ ಕೇಳಿಬಂದಿದ್ದು, ಮೂವರನ್ನು ವಶಕ್ಕೆ ಪಡೆಯಲಾಗಿದೆ.

ಪ್ರೀತಿಸಿದವನ ಜೊತೆ ಮದುವೆಯಾಗಲು ಬಿಡದ ತಂದೆಯಿಂದ ಆತ್ಮಹತ್ಯೆಗೆ ಪ್ರಚೋದನೆ; ಮಗಳು ಸಾವನ್ನಪ್ಪಿದ 7 ದಿನದ ಬಳಿಕ ಸತ್ಯಾಂಶ ಬೆಳಕಿಗೆ
ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Jun 16, 2023 | 3:07 PM

ತುಮಕೂರು: ಪ್ರೀತಿಸಿ ಮದುವೆಯಾಗುವುದಕ್ಕೆ ಮುಂದಾಗಿದ್ದ ಮಗಳನ್ನು ತಂದೆ, ಸಹೋದರ, ಚಿಕ್ಕಪ್ಪ ಸೇರಿ ಆತ್ಮಹತ್ಯೆ (Suicide)ಗೆ ಪ್ರಚೋದಿಸಿದ ಆರೋಪ ಜಿಲ್ಲೆಯ ಗುಬ್ಬಿ(Gubbi) ತಾಲೂಕಿನ ಚಿಕ್ಕಹೆಡಿಗೇಹಳ್ಳಿಯಲ್ಲಿ ಕೇಳಿಬಂದಿದೆ. ಇದೇ ಜೂನ್​.9 ರಂದು ಮನೆಯಲ್ಲಿಯೇ ವಿಷ ಸೇವಿಸಿ ನೇತ್ರಾವತಿ (17) ಆತ್ಮಹತ್ಯೆ ಮಾಡಿಕೊಂಡಿದ್ದಳು. ಇನ್ನು ಈ ಕುರಿತು ತನಿಖೆ ಆರಂಭಿಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಪರಿಶಿಷ್ಟ ಜನಾಂಗದ ನೇತ್ರಾವತಿ, ಲಮಾಣಿ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಲು ಮುಂದಾಗಿದ್ದಳು. ಇದಕ್ಕೆ ವಿರೋಧಿಸಿದ ತಂದೆ ಪರಶುರಾಮ, ಸಹೋದರ ಶಿವರಾಜು, ಚಿಕ್ಕಪ್ಪ ತುಕಾರಾಂ ಅವರು ಮದುವೆಯಾಗುತ್ತಿಯ ಎಂದು ಆಕೆಯನ್ನ ನಿಂದಿಸಿ ವಿಷ ಕುಡಿ, ನೇಣು ಹಾಕಿಕೊ ಎಂದು ಪ್ರಚೋದಿಸುತ್ತಿದ್ದರಂತೆ. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರಿಗೆ ಸತ್ಯಾಸತ್ಯತೆ ಬಹಿರಂಗವಾಗಿದ್ದು, ಮೂವರು ಆರೋಪಿಗಳನ್ನು ಇದೀಗ ಬಂಧಿಸಿದ್ದಾರೆ.

ಬೈಕ್ ಬೊಲೆರೋ ಪಿಕಪ್ ವಾಹನದ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಮೈಸೂರು: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಕಿತ್ತೂರು ಮುಖ್ಯರಸ್ತೆಯಲ್ಲಿ ಬೈಕ್ ಬೊಲೆರೋ ಪಿಕಪ್ ವಾಹನದ ನಡುವೆ ಅಪಘಾತವಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕುಶಾಲನಗರ ಮಂಜುನಾಥ್ (50) ಮೃತ ವ್ಯಕ್ತಿ. ಬೈಕ್‌ನಲ್ಲಿದ್ದ ಮಂಜುನಾಥ್ ಪತ್ನಿಗೆ ಗಾಯಗಳಾಗಿದ್ದು, ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Kodagu News: ಬೈಕ್​ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ದುರ್ಮರಣ

ಆ್ಯಕ್ವಿವ್ ಹೊಂಡಾಗೆ ಲಾರಿ ಡಿಕ್ಕಿ; ಓರ್ವ ವಿದ್ಯಾರ್ಥಿ ಸಾವು, ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಹಾಸನ: ನಗರದ ಸಂತೇಪೇಟೆ ಸರ್ಕಲ್‌ನಲ್ಲಿ ಆ್ಯಕ್ವಿವ್ ಹೊಂಡಾಗೆ ಲಾರಿ ಡಿಕ್ಕಿಯಾಗಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಚಿಕ್ಕಡಲೂರು ಗ್ರಾಮದ ಅಭಿಲಾಷ್ (22) ಮೃತ ಯುವಕ. ಇನ್ನು ಬದುಕುಳಿದ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಿತಿ ಗಂಭೀರವಾಗಿದೆ. ಹಾಸನದ ಖಾಸಗಿ ಕಾಲೇಜಿನಲ್ಲಿ ಪದವಿ ಓದುತ್ತಿದ್ದ ಇವರು, ಸ್ನೇಹಿತರೆಲ್ಲ ಬೈಕ್‌ನಲ್ಲಿ ಸಕಲೇಶಪುರಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತವಾಗಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Fri, 16 June 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್