AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ಹೈಅಲರ್ಟ್​: ಆರೋಗ್ಯ ಇಲಾಖೆ ಸಿಬ್ಬಂದಿ ರಜೆ ರದ್ದು, ಸಹಾಯವಾಣಿ ಓಪನ್

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಡಳಿತವು 24/7 ಸಹಾಯವಾಣಿ ಆರಂಭಿಸಿದೆ. ಬೆಸ್ಕಾಂ, ಪೊಲೀಸ್ ಮತ್ತು ರೆವಿನ್ಯೂ ಇಲಾಖೆಗಳ ಒಂದೇ ಸಹಾಯವಾಣಿ ಇದಾಗಿದೆ. 9000 ವೈದ್ಯಕೀಯ ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ ಮತ್ತು 20 ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಸುಳ್ಳು ಸುದ್ದಿ ಹರಡುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗಿದೆ.

ತುಮಕೂರಿನಲ್ಲಿ ಹೈಅಲರ್ಟ್​: ಆರೋಗ್ಯ ಇಲಾಖೆ ಸಿಬ್ಬಂದಿ ರಜೆ ರದ್ದು, ಸಹಾಯವಾಣಿ ಓಪನ್
ತುಮಕೂರು ರೈಲು ನಿಲ್ದಾಣದಲ್ಲಿ ತಪಾಸಣೆ
Jagadisha B
| Edited By: |

Updated on:May 11, 2025 | 5:04 PM

Share

ತುಮಕೂರು, ಮೇ 11: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ (India-Pakistan Tension) ಉಂಟಾದ ಹಿನ್ನೆಲೆಯಲ್ಲಿ ತುಮಕೂರು (Tumakur) ಜಿಲ್ಲೆಯಲ್ಲಿ ಸಹಾಯವಾಣಿ ತೆರಯಲಾಗಿದೆ. ಬೆಸ್ಕಾಂ, ಪೊಲೀಸ್, ರೆವಿನ್ಯೂ ಮೂರು ಇಲಾಖೆಗಳದ್ದು ಒಂದೇ ಸಹಾಯವಾಣಿ ಇರುತ್ತದೆ. “08162213400 ” ಸಹಾಯವಾಣಿ ನಂಬರ್ ಆಗಿದ್ದು, 24 ಗಂಟೆಯೂ ಚಾಲ್ತಿಯಲ್ಲಿರುತ್ತದೆ. ತುಮಕೂರಿನಲ್ಲಿ ಏನೆ ಸಮಸ್ಯೆಯಾದರೂ ಅಥವಾ ಮಾಹಿತಿ ಬೇಕಿದ್ದರೂ ಸಹಾಯವಾಣಿಗೆ ಕರೆ ಮಾಡಬಹುದು ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದ್ದಾರೆ.

ಈ ಕುರಿತು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಜಿಲ್ಲೆಯಲ್ಲಿ 9 ಸಾವಿರ ವೈದ್ಯಕೀಯ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ತುರ್ತು ಸೇವೆಯ ಸಿಬ್ಬಂದಿಗಳು, ಆಸ್ಪತ್ರೆ ಸಿಬ್ಬಂದಿಗಳ ರಜೆ ರದ್ದು ಮಾಡಲಾಗಿದೆ. ಜಿಲ್ಲೆಯಲ್ಲಿ 20 ಸ್ಥಳಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ ಎಂದರು.

ನಾಗರಿಕ ರಕ್ಷಣಾ ಸಂಸ್ಥೆಗಳಿಗೆ ಕಾರ್ಯಕರ್ತರ ನೇಮಕ

ಗ್ರಾಮ ಪಂಚಾಯಿತಿಗಳಲ್ಲಿ ಸೈರನ್ ಅಳವಡಿಕೆಗೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಾಗರಿಕ ರಕ್ಷಣಾ ಸಂಸ್ಥೆಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ನಾಗರಿಕ ರಕ್ಷಣಾ ಸಂಸ್ಥೆ ಕಾರ್ಯ ನಿರ್ವಹಣೆಗೆ ಎಎಸ್​ಪಿಯನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. 18 ವರ್ಷ ಮೇಲ್ಪಟ್ಟ ಹಾಗೂ ಫಿಟ್ ಆದವರು ಸೂಚನೆ ನೀಡಿದ ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು. 3 ಸಾವಿರ ಕಾರ್ಯಕರ್ತರು ಬೇಕಾಗಿದ್ದಾರೆ. ಅರ್ಜಿ ಸಲ್ಲಿಸುವ ಮೂಲಕ ಸೇರಿಕೊಳ್ಳಬಹುದು. ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿ ಅರ್ಜಿಗಳನ್ನು ನೀಡಲಾಗಿದೆ. 2-3 ದಿನಗಳಲ್ಲಿ ಪರಿಶೀಲಿಸಿ ತರಬೇತಿ ನೀಡಲಾಗತ್ತದೆ. ಪುರುಷರ ಜೊತೆ ಮಹಿಳೆಯರು ಸಹ ಅಗತ್ಯವಿದೆ ಎಂದು ಹೇಳಿದರು.

ಇದನ್ನೂ ಓದಿ
Image
ಉಗ್ರ ದಾಳಿಗೆ ಇಡೀ ದೇಶವೇ ಶೋಕದಲ್ಲಿರುವಾಗ, ಇನ್ಸ್‌ಪೆಕ್ಟರ್ ಭರ್ಜರಿ ರೋಡ್ ಶೋ
Image
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
Image
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
Image
ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ಮಧ್ಯೆ ಹೊಸ ರೈಲು: ಸಚಿವ ಸೋಮಣ್ಣ ಘೋಷಣೆ

ಆಹಾರ ಇಲಾಖೆಯಿಂದ ದಾಸ್ತಾನು ಸಂಗ್ರಹದ ಮಾಹಿತಿ ಪಡೆದುಕೊಂಡಿದ್ದೇವೆ. ಅದರ ಬಗ್ಗೆ ನಿಗಾವಹಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ಮಾಡಬಾರದು. ಜನರಲ್ಲಿ ಆತಂಕ ಹುಟ್ಟಿಸುವವರ ಮೇಲೆ ಸೈಬರ್ ಸೆಲ್ ಮುಖಾಂತರ ನಿಗಾ ವಹಿಸಲಾಗುವುದು. ಮಾಕ್​ ಡ್ರಿಲ್​ ಮಾಡಲಾಗುತ್ತದೆ. ತುರ್ತು ಸಮಯ ಸಂದರ್ಭದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಹಾಗೂ ಸಾರ್ವಜನಿಕರ ಪ್ರತಿಕ್ರಿಯೆ ಮೇಲೆ ನಿಗಾ ವಹಿಸಲಾಗುವುದು. ಪಾಲಿಕೆಗಳ ವ್ಯಾಪ್ತಿಯಲ್ಲಿ ಸೈರನ್​ಗಳ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಎಲ್ಲ ವಾರ್ಡ್​ಗಳಲ್ಲೂ ಮಾಕ್​ ಡ್ರಿಲ್ ಮಾಡಲಾಗುವುದು ಎಂದು ತಿಳಿಸಿದರು.

ಯುದ್ಧದ ವಾತಾವಾರಣ ಇರುವುದರಿಂದ ಜನ ಸೇರುವ ಕಾರ್ಯಕ್ರಮಗಳಿಗೆ ಅನುಮತಿ ಇಲ್ಲ. ಜಯಂತಿ ಹಾಗೂ ಪ್ರತಿಭಟನೆಗಳಿಗೆ ಅನುಮತಿ ಇಲ್ಲ. ಮದುವೆ ಕಾರ್ಯಕ್ರಮಗಳಿಗೆ ಕಡಿಮೆ ಜನ ಸೇರಬೇಕು. ಸಾಮಾಜಿಕ ಜಾಲತಾಣದಲ್ಲಿ ಹರದಾಡುವ ಪೋಸ್ಟ್​ಗಳನ್ನು ಈ ಸಂದರ್ಭದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು. ವಾಟ್ಸ್ಆಪ್​ನಲ್ಲಿ ಶೇರ್ ಮಾಡಿದರೇ ಗ್ರೂಪ್​ ಅಡ್ಮಿನ್​ ಹಾಗೂ ಶೇರ್​ ಮಾಡಿದವರೇ ಜವಾಬ್ದಾರಾಗಿರುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಹೆಚ್ಚು ಜನ ಸೇರುವ ಮಾಲ್, ಬಸ್ ನಿಲ್ದಾಣ ಸೇರಿದಂತೆ ಹಲವು ಕಡೆ ಪರಿಶೀಲನೆ ನಡೆಸಲಾಗುತ್ತಿದೆ. ನಿರಂತರವಾಗಿ ಈ ಪ್ರಕ್ರಿಯೆ ನಡೆಯುತ್ತಿದೆ. ಯಾರಿಗೆ ಅನುಮಾನದ ಸಂಗತಿಗಳು ಕಂಡು ಬಂದಲ್ಲಿ, ಸಹಾಯವಾಣಿ ಸಂಖ್ಯೆ ಅಥವಾ ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿ. ಯುದ್ಧದ ಸಂದರ್ಭದಲ್ಲಿ ಅನುಮಾನಸ್ಪದ ವಸ್ತುಗಳು ಕಂಡು ಬಂದಲ್ಲಿ ಮಾಹಿತಿ ನೀಡಬೇಕು. ಅದನ್ನು ಮುಟ್ಟುವ ಕೆಲಸ ಮಾಡಬಾರದು ಎಂದು ಸೂಚನೆ ನೀಡಿದರು.

ಇದನ್ನೂ ಓದಿ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಗಂಡ‌,‌ ಮಕ್ಕಳೊಂದಿಗೆ ನೆಲೆಸಿರುವ ಪಾಕ್ ಮಹಿಳೆಯರು ಪತ್ತೆ!

ಜನಸಂದಣಿ ಪ್ರದೇಶಗಳಲ್ಲಿ ಪೊಲೀಸರ ಹದ್ದಿನ ಕಣ್ಣು

ತುಮಕೂರಿನ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯದಳ, ಶ್ವಾನದಳದಿಂದ ಪರಿಶೀಲನೆ ನಡೆಸಿತು. ಪ್ರಯಾಣಿಕರ ಬ್ಯಾಗ್​ಗಳು, ಲಗೇಜ್ ಹಾಗೂ ವಾಹನಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ತಪಾಸಣೆ ನಡೆಸಲಾಯಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:02 pm, Sun, 11 May 25

ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್
ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?