ಛೋಟಾಸಾಬರಪಾಳ್ಯ ಅತ್ಯಾಚಾರ ಕೇಸ್ ಆರೋಪಿಗಳನ್ನು ಬಂಧಿಸಿ; ಗ್ರಾಮೀಣ ಭಾಗಕ್ಕೂ ಗಮನ ಕೊಡಿ: ಜೆಡಿಎಸ್ ಶಾಸಕ ಆಗ್ರಹ

15 ದಿನಗಳಲ್ಲಿ ಆರೋಪಿಗಳನ್ನು ಬಂದಿಸದೇ ಇದ್ದಲ್ಲಿ, ಕುಮಾರಸ್ವಾಮಿ ಹಾಗೂ ದೇವೇಗೌಡರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸುತ್ತೇವೆ. 25 ಸಾವಿರ ಜನರನ್ನು ಸೇರಿಸಿ ಆರೋಪಿಗಳನ್ನ ಬಂದಿಸೋವರೆಗೂ ಪ್ರತಿಭಟನೆ ಮಾಡುತ್ತೇವೆ ಎಂದು ಶಾಸಕ ಆಗ್ರಹಿಸಿದ್ದಾರೆ.

ಛೋಟಾಸಾಬರಪಾಳ್ಯ ಅತ್ಯಾಚಾರ ಕೇಸ್ ಆರೋಪಿಗಳನ್ನು ಬಂಧಿಸಿ; ಗ್ರಾಮೀಣ ಭಾಗಕ್ಕೂ ಗಮನ ಕೊಡಿ: ಜೆಡಿಎಸ್ ಶಾಸಕ ಆಗ್ರಹ
ಜೆಡಿಎಸ್ ಶಾಸಕ ಗೌರಿಶಂಕರ್
Follow us
| Updated By: ganapathi bhat

Updated on:Aug 27, 2021 | 4:22 PM

ತುಮಕೂರು: ಇಲ್ಲಿನ ಛೋಟಾಸಾಬರಪಾಳ್ಯದಲ್ಲಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತುಮಕೂರಿನಲ್ಲಿ ಜೆಡಿಎಸ್ ಶಾಸಕ ಗೌರಿಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ತಾಲೂಕಿನಲ್ಲಿ ಪೊಲೀಸರ ಮೇಲೆ ವಿಶ್ವಾಸವೇ ಇಲ್ಲ. ನಮ್ಮ ತಾಲೂಕಿನಲ್ಲಿ ಜೂಜು, ಅಕ್ರಮವಾಗಿ ಮದ್ಯ ಮಾರಾಟ ಆಗುತ್ತಿದೆ. ಇದಕ್ಕೆ ಕ್ಯಾತ್ಸಂದ್ರ ಸಿಪಿಐ, ಪಿಎಸ್‌ಐ ಕುಮ್ಮಕ್ಕು ನೀಡಿದ್ದಾರೆ ಎಂದು ಪೊಲೀಸರ ವಿರುದ್ಧ ಜೆಡಿಎಸ್ ಶಾಸಕ ಗೌರಿಶಂಕರ್ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿಯೂ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಆಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಗೃಹ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದರು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಿಂದ ಕರೆ ಮಾಡಿ ಮೈಸೂರು ಪ್ರಕರಣಗಳ ಬಗ್ಗೆ ಕ್ರಮ ಕೈಗೊಳ್ಳಲು ಆರಗ ಜ್ಞಾನೇಂದ್ರಗೆ ಸೂಚಿಸಿದ್ದಾರೆ. ನಗರ ಪ್ರದೇಶಕ್ಕೆ ಕೊಟ್ಟ ಗಮನ ಗ್ರಾಮೀಣ ಭಾಗಕ್ಕೂ ಕೊಡಬೇಕು. ಸಿಎಂ, ಗೃಹ ಸಚಿವರೇ ನೀವೂ ಗ್ರಾಮೀಣ ಭಾಗದಿಂದ ಬಂದವರು. ಗ್ರಾಮೀಣ ಭಾಗದಲ್ಲಿರುವ ಹೆಣ್ಣು ಮಗಳಿಗೆ ಅನ್ಯಾಯವಾಗಿದೆ. ಈ ಬಗ್ಗೆ ಗಮನಹರಿಸಿ ಎಂದು ಶಾಸಕ ಗೌರಿಶಂಕರ್ ಒತ್ತಾಯ ಮಾಡಿದ್ದಾರೆ. ಕೂಡಲೇ ಅತ್ಯಾಚಾರ ಆರೋಪಿಗಳನ್ನು ಬಂಧಿಸಿ ಎಂದು ಆಗ್ರಹಿಸಿದ್ದಾರೆ.

ತುಮಕೂರು ನಡೆದಾಡುವ ದೇವರು ಶಿವಕುಮಾರ ಸ್ವಾಮಿಗಳು ಇರುವ ಸ್ಥಳ. ಇಲ್ಲಿನ ಗ್ರಾಮೀಣ ಭಾಗದಲ್ಲಿ ವ್ಯಾಪ್ತಿಯಲ್ಲಿ ಈ ವರ್ಷ ಎರಡು ಕೊಲೆಗಳಾಗಿವೆ. ಕಳೆದ ಮಂಗಳವಾರ ಮಧ್ಯಾಹ್ನ ಕೊಲೆ ಹಾಗೂ ಸಾಮೂಹಿಕ ಅತ್ಯಾಚಾರ ನಡೆದಿದೆ. ಗ್ರಾಮೀಣ ಕುಟುಂಬಕ್ಕೆ ಅನ್ಯಾಯವಾಗಿದೆ. ಮೈಸೂರು ಪ್ರಕರಣದ ರೀತಿಯಲ್ಲಿ ಇಲ್ಲಿಯೂ ಗಮನಹರಿಸಿ ತನಿಖೆ ತಂಡ ರಚಿಸಿ ಆರೋಪಿಗಳನ್ನು ಬಂದಿಸಬೇಕು. ಆಗಿರುವ ಅನ್ಯಾಯಕ್ಕೆ ಪರಿಹಾರ ನೀಡಬೇಕು. ಮತ್ತೆ ಇಂತಹ ಪ್ರಕರಣಗಳು ಮರುಕಳಿಸಬಾರದು ಎಂದು ಹೇಳಿದ್ದಾರೆ.

15 ದಿನಗಳಲ್ಲಿ ಆರೋಪಿಗಳನ್ನು ಬಂದಿಸದೇ ಇದ್ದಲ್ಲಿ, ಕುಮಾರಸ್ವಾಮಿ ಹಾಗೂ ದೇವೇಗೌಡರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸುತ್ತೇವೆ. 25 ಸಾವಿರ ಜನರನ್ನು ಸೇರಿಸಿ ಆರೋಪಿಗಳನ್ನ ಬಂದಿಸೋವರೆಗೂ ಪ್ರತಿಭಟನೆ ಮಾಡುತ್ತೇವೆ. ತುಮಕೂರು ಎಸ್​ಪಿ ಕಚೇರಿ ಬಳಿ ಪ್ರತಿಭಟನೆ ನಡೆಸುತ್ತೇವೆ. ಶೀಘ್ರವಾಗಿ ಅತ್ಯಾಚಾರ ಕೊಲೆ ಮಾಡಿರೋ ಆರೋಪಿಗಳನ್ನ ಬಂಧಿಸಬೇಕು ಎಂದು ಶಾಸಕ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ದುಬೈ ಮಾದರಿಯಲ್ಲಿಯೇ ಇಲ್ಲಿಯೂ ಅದು ಕಟ್ ಇದು ಕಟ್ ಆಗ್ಬೇಕು: ಅತ್ಯಾಚಾರ ಪ್ರಕರಣಕ್ಕೆ ಆನಂದ್ ಸಿಂಗ್ ಪ್ರತಿಕ್ರಿಯೆ

ದೇಗುಲದ ಬಳಿ ಅನ್ಯಕೋಮಿನ ಯುವಕ, ಯುವತಿಯರ ಸುತ್ತಾಟ; ಹಿಂದೂಪರ ಸಂಘಟನೆಯ ದಾಳಿ: ಮೂವರ ಬಂಧನ

Published On - 4:21 pm, Fri, 27 August 21

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ