ಜೆಡಿಎಸ್ ಕಾರ್ಯಕ್ರಮಕ್ಕೂ ಚಂಡಮಾರುತ ಎಫೆಕ್ಟ್: ಪಂಚರತ್ನ ರಥಯಾತ್ರೆ ಮುಂದೂಡಿಕೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಬೀಸಿದ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿರುವುದರಿಂದ ಚಿಕ್ಕನಾಯಕನಹಳ್ಳಿಯಿಂದ ಮತ್ತೆ ಶುರುವಾಗಬೇಕಿದ್ದ ಪಂಚರತ್ನ ರಥಯಾತ್ರೆ ನಾಲ್ಕು ದಿನ ಮುಂದೂಡಲಾಗಿದೆ.
ತುಮಕೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಬೀಸಿದ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ನಾಳೆ (ಡಿ.11) ಚಿಕ್ಕನಾಯಕನಹಳ್ಳಿಯಿಂದ ಮತ್ತೆ ಶುರುವಾಗಬೇಕಿದ್ದ ಪಂಚರತ್ನ ರಥಯಾತ್ರೆ (Pancharatna yatra) ನಾಲ್ಕು ದಿನ ಮುಂದೂಡಿಕೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಪಂಚರತ್ನ ರಥಯಾತ್ರೆ ಮಾರ್ಗ ಹಾಗೂ ವೇಳಾಪಟ್ಟಿಯಲ್ಲಿ ಪರಿಷ್ಕರಣೆ
ಡಿಸೆಂಬರ್ 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.
ಡಿಸೆಂಬರ್ 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ.
ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ
20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:14 pm, Sat, 10 December 22