AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakuru: ಸಾಕು ಮಗ, ಸಹೋದರಿಯಿಂದಲೇ ಮಹಿಳೆಯ ಕೊಲೆ; ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರ!

ಆಕೆ ಗಂಡನ ಕಳೆದುಕೊಂಡು ಒಂಟಿಯಾಗಿದ್ದ ಮಹಿಳೆ. ಅನುಕಂಪದ ಆಧಾರದಲ್ಲಿ ಸಿಕ್ಕ ಗಂಡನ ಸರ್ಕಾರಿ ಕೆಲಸದಲ್ಲಿ ಜೀವನ ಸಾಗಿಸುತಿದ್ದಳು. ಈ ನಡುವೆ ಪರಿಚಯವಾದವನ ಜೊತೆ ಆತ್ಮೀಯತೆ ಬೆಳೆದಿತ್ತು. ಆತನೊಂದಿಗೆ ಪ್ರತ್ಯೇಕವಾಗಿ ಬಾಳುವ ಆಸೆ ಕಂಡಿದ್ದಳು. ಆದರೆ ಅದೇನಾಯ್ತೋ ಇದ್ದಕಿದ್ದಂತೆ ಮೃತಪಟ್ಟಿದ್ದಾಳೆ. ಅನುಮಾನಗೊಂಡ ಗೆಳೆಯ ಪೊಲೀಸ್ ಠಾಣೆ ಮೆಟ್ಟಿಲೇರಿದ್ಧೇ ತಡ, ಆಕೆಯ ಸಾವಿನ ಕೇಸ್​​ಗೆ ಸ್ಪೋಟಕ ತಿರುವು ಸಿಕ್ಕಿದೆ. ಅಷ್ಟಕ್ಕೂ ಆಗಿದ್ದೇನೆಂಬ ಮಾಹಿತಿ ಇಲ್ಲಿದೆ.

Tumakuru: ಸಾಕು ಮಗ, ಸಹೋದರಿಯಿಂದಲೇ ಮಹಿಳೆಯ ಕೊಲೆ; ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರ!
ಸಾಕು ಮಗ, ಸಹೋದರಿಯಿಂದಲೇ ಮಹಿಳೆಯ ಕೊಲೆImage Credit source: Tv9 Kannada
ಜಗದೀಶ ಬಿ.
| Edited By: |

Updated on: Feb 20, 2026 | 9:17 AM

Share

ತುಮಕೂರು, ಫೆಬ್ರವರಿ 20: ತುರುವೇಕೆರೆ ತಾಲೂಕಿನ ಬಿಇಒ ಕಚೇರಿಯಲ್ಲಿ ಎಫ್​​ಡಿಎ ಆಗಿ ಕೆಲಸ ಮಾಡುತಿದ್ದ ಮಹಿಳೆಯನ್ನ ಆಕೆಯ ಸಾಕು ಮಗ ಮತ್ತು ಸಹೋದರಿಯೇ ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವ ಘಟನೆ ಚಿಕ್ಕನಾಯಕನಹಳ್ಳಿಯ ಜೋಗಿಹಳ್ಳಿಯಲ್ಲಿ ನಡೆದಿದೆ. ಜಯಲಕ್ಷ್ಮೀ ಮೃತ ಮಹಿಳೆಯಾಗಿದ್ದು, ಆರೋಪಿಗಳಾದ ಅನುಸೂಯಾ ಮತ್ತು ಚಂದ್ರಶೇಖರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಜಯಲಕ್ಷ್ಮೀ ಹೃದಯಾಘಾತದಿಂದ ಮೃತಪಟ್ಟಿರೋದಾಗಿ ಎಲ್ಲರನ್ನೂ ನಂಬಿಸಿದ್ದ ಆರೋಪಿಗಳ ಬಂಡವಾಳ ಪೊಲೀಸ್​​ ತನಿಖೆ ವೇಳೆ ಬಯಲಾಗಿದ್ದು, ಗಂಡನನ್ನು ಕಳೆದುಕೊಂಡಿದ್ದ ಮೃತ ಮಹಿಳೆಗೆ ಮಕ್ಕಳೂ ಇರಲಿಲ್ಲ ಎನ್ನಲಾಗಿದೆ.

ಇನ್ನು ಜಯಲಕ್ಷ್ಮೀ ಸಾವಿನ ಬಗ್ಗೆ ಅನುಮಾನಗೊಂಡ ಶ್ರೀನಿವಾಸ್ ಎಂಬಾತ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಆಧಾರದ ಮೇಲೆ ತನಿಖೆಗಿಳಿದ ಪೊಲೀಸರು, ಅಂತ್ಯಕ್ರಿಯೆಗೆ ಸಿದ್ಧಗೊಂಡಿದ್ದ ಶವವನ್ನು ಮರಣೊತ್ತರ ಪರಿಕ್ಷೆಗೆ ರವಾನೆ ಮಾಡಿದ್ದಾರೆ. ಬಳಿಕ ಆಕೆಯ ಜೊತೆ ವಾಸವಿದ್ದ ಸಾಕು ಮಗ ಚಂದ್ರಶೇಖರ್ ಹಾಗೂ ತಂಗಿ ಅನುಸೂಯಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಇವರೇ ತಡರಾತ್ರಿ ಜಯಲಕ್ಷ್ಮೀ ಉಸಿರುಗಟ್ಟಿಸಿ ಕೊಂದಿರೊದು ಬೆಳಿಕಿಗೆ ಬಂದಿದೆ.

ಇದನ್ನೂ ಓದಿ: 3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ

ಜಯಲಕ್ಷ್ಮೀ ಸಾವಿನ ಬಗ್ಗೆ ಅನುಮಾನಗೊಂಡು ದೂರು ನೀಡಿದ್ದ ಶ್ರೀನಿವಾಸ್ ಅಸಲಿಗೆ ಆಕೆಯ ಗೆಳಯ ಎಂಬುದು ಗೊತ್ತಾಗಿದೆ. ಪೊಲೀಸ್ ಮಾಹಿತಿ ಪ್ರಕಾರ ಗಂಡನ ಕಳೆದುಕೊಂಡಿದ್ದ ಜಯಲಕ್ಷ್ಮೀಗೆ ಕಳೆದ 20 ವರ್ಷಗಳ ಹಿಂದೆ ಶ್ರೀನಿವಾಸ್ ಪರಿಯವಾಗಿತ್ತು. ಆ ಬಳಿಕ ಇಬ್ಬರಲ್ಲೂ ಆತ್ಮೀಯತೆ ಹೆಚ್ಚಾಗಿ ಒಟ್ಟಿಗೆ ಸಂಸಾರ ಮಾಡುತಿದ್ದರು. ಇದರ ನಡುವೆ ಮಕ್ಕಳಿಲ್ಲದ ಕಾರಣಕ್ಕೆ ಈಕೆ ತನ್ನ ಸಹೋದರಿ ಅನುಸೂಯಾ ಮಗ ಚಂದ್ರಶೇಖರ್​​ನ ದತ್ತು ಪಡೆದುಕೊಂಡು ಸಾಕಿಕೊಂಡಿದ್ದಳು. ಇನ್ನು ತುಮಕೂರಿನಲ್ಲಿ ವಾಸವಾಗಿದ್ದ ಅನುಸೂಯಾ ಹಾಗೂ ಚಂದ್ರಶೇಖರ್ ಕಳೆದ ಎಂಟು ತಿಂಗಳ ಹಿಂದೆ ಚಿಕ್ಕನಾಯಕನಹಳ್ಳಿಯ ಜೋಗಿಹಳ್ಳಿಯ ಜಯಲಕ್ಷ್ಮೀ ನಿವಾಸಕ್ಕೆ ಬಂದಿದ್ದರು. ಈ ವೇಳೆ ಶ್ರೀನಿವಾಸ್​​ಗೆ ಒತ್ತಡ ಹಾಕಿದ್ದ ಇವರು, ಆತ ಮನೆ ಬಿಡುವಂತೆ ಮಾಡಿದ್ದರು. ಇಷ್ಟೆಲ್ಲ ನಡೆದ ಬಳಿಕ ಜಯಲಕ್ಷ್ಮೀ ತುರುವೆಕೆರೆಯಲ್ಲಿ ಮನೆ ಮಾಡಲು ನಿರ್ಧರಿಸಿದ್ದು, ಅದರಂತೆ ಬಾಡಿಗೆ ಮನೆಗೆ ಅಡ್ವಾನ್ಸ್ ಕೂಡ ಕೊಟ್ಟಿದ್ದರು. ಈಕೆ ಮನೆ ತೊರೆಯುತ್ತಿರುವ ವಿಚಾರ ತಿಳಿದ ಅನುಸೂಯಾ ಮತ್ತು ಚಂದ್ರಶೇಖರ್ ಉಸಿರುಗಟ್ಟಿಸಿ ಕೊಲೆಗೈದಿರೋದು ತನಿಖೆ ವೇಳೆ ಗೊತ್ತಾಗಿದೆ. ಘಟನೆ ಸಂಬಂಧ ಕೊಲೆ ಪ್ರಕರಣ ದಾಖಲಿಸಿರುವ ಪೊಲೀಸರು, ವಿಚಾರಣೆ ಮುಂದುವರಿಸಿದ್ದಾರೆ. ಕೊಲೆಗೆ ಆರ್ಥಿಕ ಹಾಗೂ ಅನುಕಂಪದ ಆಧಾರಿತ ಸರ್ಕಾರಿ ನೌಕರಿ ಕಾರಣ ಎಂಬ ಅನುಮಾನ ಮೂಡಿದ್ದು, ಆ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’